ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ: ಡಾ.ಸುಧಾಕರ್

ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ: ಡಾ.ಸುಧಾಕರ್

Updated : 20.11.2022

ಬೆಂಗಳೂರು: ಖಾಸಗಿ ಸಂಸ್ಥೆಯೊಂದಕ್ಕೆ ಮತದಾರರ ಪಟ್ಟಿ ಪರಿಷ್ಕರಣೆಯ ಅನುಮತಿ ನೀಡಿರುವುದು ಕಾಂಗ್ರೆಸ್‌ –ಬಿಜೆಪಿ ನಡುವೆ ರಾಜಕೀಯ ಪರಸ್ಪರ ಪ್ರತ್ಯಾರೋಪಕ್ಕೆ ಕಾರಣವಾಗಿದೆ.

ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

‘ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ 2017ರಲ್ಲಿ ಅಂದಿನ ಕಾಂಗ್ರೆಸ್ ಸರ್ಕಾರವೇ ಅನುಮತಿ ಕೊಟ್ಟ ಒಂದು ಸಂಸ್ಥೆಯ ಮೇಲೆ ಈಗ ಇಲ್ಲಸಲ್ಲದ ಆರೋಪ ಮಾಡಿ ಬಿಜೆಪಿ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿರುವುದು ‘ಕೋತಿ ಮೊಸರು ತಿಂದು ಮೇಕೆ ಬಾಯಿಗೆ ಸವರಿದಂತಾಗಿದೆ’ ಎಂದು ಸುಧಾಕರ್ ಕಿಡಿಕಾರಿದ್ದಾರೆ. 

© Copyright 2022, All Rights Reserved Kannada One News