ಫಾತಿಮಾ ರಲಿಯಾರಿಗೆ 'ಛಂದ ಪುಸ್ತಕ' ಬಹುಮಾನ

ಫಾತಿಮಾ ರಲಿಯಾರಿಗೆ 'ಛಂದ ಪುಸ್ತಕ' ಬಹುಮಾನ

Updated : 11.10.2022

ಬೆಂಗಳೂರು: ಛಂದ ಪುಸ್ತಕ ಪ್ರಕಾಶನ ಸಂಸ್ಥೆ ನೀಡುವ ಪ್ರಸಕ್ತ (2022) ಸಾಲಿನ 'ಛಂದ ಪುಸ್ತಕ ಬಹುಮಾನ'ಕ್ಕೆ ಹೆಜಮಾಡಿಯ ಫಾತಿಮಾ ರಲಿಯಾ ಆಯ್ಕೆಯಾಗಿದ್ದಾರೆ ಎಂದು ಪ್ರಕಾಶನ ಸಂಸ್ಥೆಯ ಸಂಸ್ಥಾಪಕ ವಸುಧೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಯು 40,000 ರೂ. ನಗದು, ಫಲಕ ಮತ್ತು ಪ್ರಶಸ್ತಿ ಪತ್ರವನ್ನು ಒಳಗೊಂಡಿರುತ್ತದೆ.

93 ಕತೆಗಾರರು ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು, ಖ್ಯಾತ ಚಲನಚಿತ್ರ ನಿರ್ದೇಶಕ ಗಿರೀಶ ಕಾಸರವಳ್ಳಿ ಛಂದ ಪುಸ್ತಕ ಹಸ್ತಪ್ರತಿಯ ತೀರ್ಪುಗಾರರಾಗಿದ್ದರು ಎಂದು ಅವರು ತಿಳಿಸಿದ್ದಾರೆ.

ಮೂಲತಃ ದ.ಕ. ಜಿಲ್ಲೆಯ ಪೆರ್ನೆ ಗ್ರಾಮದವರಾದ ಫಾತಿಮಾ ರಲಿಯಾ ಸದ್ಯಕ್ಕೆ ಉಡುಪಿ ಜಿಲ್ಲೆಯ ಹೆಜಮಾಡಿಯಲ್ಲಿ ವಾಸಿಸುತ್ತಿದ್ದಾರೆ. ತಂದೆ ಅಬ್ದುಲ್ ರಶೀದ್ ಮತ್ತು ತಾಯಿ ಆಯಿಶಾ. ಇನ್ಫಾರ್ಮೇಶನ್ ಟೆಕ್ನಾಲಜಿಯಲ್ಲಿ ಎಂಬಿಎ ಪದವಿ ಪಡೆದಿರುವ ಇವರು, 'ಕಡಲು ನೋಡಲು ಹೋದವಳು' ಎಂಬ ಲಲಿತ ಪ್ರಬಂಧಗಳ ಸಂಕಲನವನ್ನು ಈ ವರ್ಷ ಪ್ರಕಟಿಸಿದ್ದಾರೆ.


© Copyright 2022, All Rights Reserved Kannada One News