ದೇಶಾದ್ಯಂತ 11 ರಾಜ್ಯಗಳಲ್ಲಿ ಪಿಎಫ್ ಐ, ಎಸ್ ಡಿಪಿಐ ಕಚೇರಿಗಳ ಮೇಲೆ ಎನ್ಐಎ ದಾಳಿ: ಪಿಎಫ್ಐನ 100 ಮಂದಿ ವಶ

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

ದೇಶಾದ್ಯಂತ 11 ರಾಜ್ಯಗಳಲ್ಲಿ ಪಿಎಫ್ ಐ, ಎಸ್ ಡಿಪಿಐ ಕಚೇರಿಗಳ ಮೇಲೆ ಎನ್ಐಎ ದಾಳಿ: ಪಿಎಫ್ಐನ 100 ಮಂದಿ ವಶ

Updated : 22.09.2022

ಬೆಂಗಳೂರು: ಮಂಗಳೂರು ಸೇರಿದಂತೆ ದೇಶಾದ್ಯಂತ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪಿಎಫ್ ಐ, ಎಸ್.ಡಿ.ಪಿ.ಐ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯಗಳ ದಾಳಿ ನಡೆಸಿವೆ.

ಗುರುವಾರ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಎನ್ಐಎ, ಇಡಿ ದಾಳಿ ಮುಂದುವರಿಸಿದ್ದು ರಾಜ್ಯದ ಪೊಲೀಸರ ನೆರವಿನೊಂದಿಗೆ ಪಿಫ್ಐ ಸಂಘಟನೆಯ 100ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಅನೇಕ ಸ್ಥಳಗಳಲ್ಲಿ ಎನ್ಐಎ ಹುಡುಕಾಟ ನಡೆಸುತ್ತಿದೆ. ಭಯೋತ್ಪಾದನೆಗೆ ಧನಸಹಾಯ, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಸ್ಥೆಗಳಿಗೆ ಸೇರಲು ಜನರನ್ನು ಮೂಲಭೂತವಾಗಿ ರೂಪಿಸುವ ವ್ಯಕ್ತಿಗಳ ವಸತಿ ಮತ್ತು ಅಧಿಕೃತ ಆವರಣದಲ್ಲಿ ಈ ಹುಡುಕಾಟಗಳನ್ನು ನಡೆಸಲಾಗುತ್ತಿದೆ.

ರಾಷ್ಟ್ರೀಯ ತನಿಖಾ ದಳ, ಇಡಿ ದಾಳಿ, ಶೋಧಕಾರ್ಯವನ್ನು ಖಂಡಿಸಿ ಕರಾವಳಿ ಜಿಲ್ಲೆಯ ನಗರ ಮಂಗಳೂರಿನಲ್ಲಿ ಪಿಎಫ್ಐ, ಎಸ್ ಡಿಪಿಐ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಲ್ಲಿ 100ಕ್ಕೂ ಹೆಚ್ಚು ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಮಂಗಳೂರಿನಲ್ಲಿ ಪಿಎಫ್ಐ, ಎಸ್ ಡಿಪಿಐ ಸಂಘಟನೆಗಳ ಕಚೇರಿಗಳು, ಮುಖಂಡರ ನಿವಾಸಗಳ ಮೇಲೆ ದಾಳಿ ನಡೆದಿದೆ. ಎನ್​ಐಎ ದಾಳಿ ಖಂಡಿಸಿ ಪಿಎಫ್​ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನೆಲ್ಲಿಕಾಯಿ ರಸ್ತೆಯಲ್ಲಿ ಸಂಚಾರವನ್ನು ಪೊಲೀಸರು ನಿರ್ಬಂಧಿಸಿದ್ದಾರೆ. ಅರೆಮೀಸಲು ಪಡೆಯಿಂದ ಕಟ್ಟೆಚ್ಚರ ವಹಿಸಲಾಗಿದೆ.

ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್​ಐ ಕಚೇರಿ ಮೇಲೆ ಗುರುವಾರ ನಸುಕಿನ 3.30ರ ವೇಳೆಯಲ್ಲಿ ದಾಳಿ ನಡೆಸಿದೆ. ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಇದೀಗ ಕಚೇರಿಗೆ ಪ್ರವೇಶಿಸಿದ್ದಾರೆ. ಕೇರಳ, ಉತ್ತರ ಪ್ರದೇಶ, ಆಂಧ್ರ ಪ್ರದೇಶ ಸೇರಿದಂತೆ ದೇಶದ ವಿವಿಧೆಡೆ ಇರುವ ಎಸ್​ಡಿಪಿಐ ಕಚೇರಿಗಳ ಮೇಲೆಯೂ ದಾಳಿ ನಡೆದಿದೆ. ಎಸ್​ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅಬೂಬಕರ್ ಕುಳಾಯಿ ಸೋದರನ ಮನೆಗೂ ಅಧಿಕಾರಿಗಳು ಪ್ರವೇಶಿಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್​ಐಎ ತನಿಖೆ ನಡೆಸುತ್ತಿದೆ. ಮಂಗಳೂರಿನ ಸ್ಥಳೀಯ ಪೊಲೀಸರು ಸಹ ರಸ್ತೆಯಲ್ಲಿ ಉಪಸ್ಥಿತರಿದ್ದು ಭದ್ರತೆ ಒದಗಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಜುಲೈ 26ರ ರಾತ್ರಿ ಬಿಜೆಪಿಯ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ನಡೆದಿತ್ತು. ಕಾರ್ಯಕರ್ತರ ತೀವ್ರ ಒತ್ತಾಯದ ನಂತರ ಪ್ರಕರಣದ ತನಿಖೆಯನ್ನು ಎನ್ಐಎ ಗೆ ವಹಿಸಲಾಯಿತು. ತನಿಖೆ ಆರಂಭಿಸಿರುವ ಅಧಿಕಾರಿಗಳು ಕಳೆದ 6ನೇ ತಾರೀಖು ಸುಳ್ಯ ಹಾಗೂ ಪುತ್ತೂರು ತಾಲ್ಲೂಕಿನ 32 ಕಡೆಗಳಲ್ಲಿ ಮನೆಗಳು ಹಾಗು ಇತರೆ ಕಟ್ಟಡಗಳ ಮೇಲೆ ದಾಳಿ ನಡೆಸಿದ್ದರು. ಇದೀಗ ಬಂಧಿತರಾಗಿರುವ ಪ್ರವೀಣ್ ನೆಟ್ಟಾರು ಹತ್ಯೆಯ ಆರೋಪಿಗಳು ಮತ್ತು ಆರೋಪಿಗಳಿಗೆ ಸಹಕಾರ ನೀಡಿದವರ ವಿಚಾರಣೆಯನ್ನೂ ಎನ್​ಐಎ ನಡೆಸುತ್ತಿದೆ.

ಬೆಂಗಳೂರಿನಲ್ಲಿ ಇದುವರೆಗೆ 4 ಕಡೆ ಎನ್ಐಎ ದಾಳಿ ನಡೆದಿದೆ. ರಿಚ್ ಮಂಡ್ ಟೌನ್ ನ ಅಪಾರ್ಟ್ ಮೆಂಟ್ ವೊಂದರ ಮೇಲೆ ದಾಳಿ ನಡೆಸಿ ಶೋಧ ಕಾರ್ಯ ನಡೆಯುತ್ತಿದೆ. ಪಿಎಫ್ಐ ಸಂಘಟನೆ ಕಾರ್ಯದರ್ಶಿಯ ನಿವಾಸ ಮೇಲೆ ದಾಳಿ ನಡೆಯುತ್ತಿದೆ. 

ಕೇರಳದಲ್ಲಿ ಎನ್ಐಎ ಮತ್ತು ಜಾರಿ ನಿರ್ದೇಶನಾಲಯ ಪಿಎಫ್ಐ ರಾಜ್ಯ ಮತ್ತು ಜಿಲ್ಲಾ ಮಟ್ಟದ ನಾಯಕರ ಕಚೇರಿ, ನಿವಾಸವಿರುವ ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿ ದಾಳಿ ನಡೆಯುತ್ತಿದೆ.

© Copyright 2022, All Rights Reserved Kannada One News