ವಿಶ್ವದ ಅತೀ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ ಗೌತಮ್‌ ಅದಾನಿ

ವಿಶ್ವದ ಅತೀ ಶ್ರೀಮಂತರ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೇರಿದ ಗೌತಮ್‌ ಅದಾನಿ

Updated : 30.08.2022

ಹೊಸದಿಲ್ಲಿ: ಅದಾನಿ ಸಮೂಹದ ಅಧ್ಯಕ್ಷ ಗೌತಮ್ ಅದಾನಿ ಅವರು ಬ್ಲೂಂಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ ನಲ್ಲಿ ಜಗತ್ತಿನ ಮೂರನೇ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಹೊರಹಮ್ಮಿದ್ದಾರೆ.  ಜಾಗತಿಕ ಶ್ರೀಮಂತರ ಪಟ್ಟಿಯಲ್ಲಿ ಟಾಪ್ ಮೂರು ಸ್ಥಾನಕ್ಕೇರಿದ ಮೊದಲ ಏಷ್ಯಾದ ವ್ಯಕ್ತಿಯೆಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.

137.4 ಬಿಲಿಯನ್ ಡಾಲರ್ ಸಂಪತ್ತಿನೊಂದಿಗೆ ಅದಾನಿ ಅವರು ಫ್ರಾನ್ಸ್ ದೇಶದ ಬರ್ನಾರ್ಡ್ ಅರ್ನಾಲ್ಟ್ ಅವರನ್ನು  ಹಿಂದಿಕ್ಕಿ ಮೂರನೇ ಸ್ಥಾನ ಗಿಟ್ಟಿಸಿದ್ದಾರೆ. ಎಲಾನ್ ಮಸ್ಕ್ ಜಗತ್ತಿನ ಅತ್ಯಂತ ಶ್ರೀಮಂತ ವ್ಯಕ್ತಿಯಾಗಿ ಈ ಸೂಚ್ಯಂಕದಲ್ಲಿ ಟಾಪ್ ಸ್ಥಾನದಲ್ಲಿದ್ದರೆ ಎರಡನೇ ಸ್ಥಾನದಲ್ಲಿ ಅಮೆಝಾನ್ ಮುಖ್ಯಸ್ಥ ಜೆಫ್ ಬೆಝೋಸ್ ಇದ್ದಾರೆ.


© Copyright 2022, All Rights Reserved Kannada One News