ಹಣದುಬ್ಬರ ನಿಯಂತ್ರಿಸಲು ಕೇಂದ್ರೀಯ ಬ್ಯಾಂಕ್‌ಗಳು ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಬೇಕು: ಗೀತಾ ಗೋಪಿನಾಥ್

ಹಣದುಬ್ಬರ ನಿಯಂತ್ರಿಸಲು ಕೇಂದ್ರೀಯ ಬ್ಯಾಂಕ್‌ಗಳು ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಬೇಕು: ಗೀತಾ ಗೋಪಿನಾಥ್

Updated : 27.08.2022

ವಾಷಿಂಗ್ಟನ್: ಹಣದುಬ್ಬರ ನಿಯಂತ್ರಿಸಲು ಕೇಂದ್ರೀಯ ಬ್ಯಾಂಕ್‌ಗಳು ನಿರ್ಣಾಯಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ಉಪ ವ್ಯವಸ್ಥಾಪಕ ನಿರ್ದೇಶಕಿ ಗೀತಾ ಗೋಪಿನಾಥ್ ಹೇಳಿದ್ದಾರೆ.

ಅಮೆರಿಕದ ವ್ಯೋಮಿಂಗ್‌ನ ಜಾಕ್ಸನ್ ಹೋಲ್‌ನಲ್ಲಿ ನಡೆದ ಕೇಂದ್ರೀಯ ಬ್ಯಾಂಕ್‌ಗಳ ಸಮಾವೇಶದಲ್ಲಿ ಅವರು ಮಾತನಾಡಿದರು.

ಉದ್ಯೋಗ ಮಾರುಕಟ್ಟೆ ಮತ್ತು ಪೂರೈಕೆ ವಿಚಾರದಲ್ಲಿ ಜಗತ್ತು ಸಮಸ್ಯೆ ಎದುರಿಸುತ್ತಿದೆ. ಬೆಲೆ ಏರಿಕೆ ಒತ್ತಡ ಮುಂದುವರಿಯಲಿದೆ. ಹೀಗಾಗಿ ಉದ್ಯೋಗ, ಹಣದುಬ್ಬರ ಮತ್ತು ಆರ್ಥಿಕ ಬೆಳವಣಿಗೆಗೆ ಸಂಬಂಧಿಸಿದ ಸಮಸ್ಯೆಗಳು ಮುಂದಿನ ವರ್ಷಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಕೇಂದ್ರೀಯ ಬ್ಯಾಂಕ್‌ಗಳಿಗೂ ತಲೆನೋವಾಗಲಿದೆ ಎಂದು ಅವರು ಹೇಳಿದ್ದಾರೆ.

ಹಣದುಬ್ಬರದ ಅಪಾಯ ಗಮನಿಸಿದರೆ, ಸಂಭಾವ್ಯ ವೆಚ್ಚಗಳ ಹೊರತಾಗಿಯೂ ಕೇಂದ್ರೀಯ ಬ್ಯಾಂಕ್‌ಗಳು ಕಠಿಣ ನಿಲುವು ತಳೆಯಬೇಕಾದ ಅನಿವಾರ್ಯತೆ ಇದೆ ಎಂದು ಗೀತಾ ಗೋಪಿನಾಥ್ ತಿಳಿಸಿದ್ದಾರೆ.

© Copyright 2022, All Rights Reserved Kannada One News