Flash News:
ಮುಂಬೈ: ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್‌ ಮೃತದೇಹ ಪತ್ತೆ

Related Articles

ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜೊತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ: ಅಮೀರ್ ಖಾನ್

‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನ.25ಕ್ಕೆ ಬಿಡುಗಡೆ

ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ

ವೀರ ದಾಸ್ ಅವರ ಬೆಂಗಳೂರು ಶೋ ರದ್ದಾದ ಬಳಿಕ ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ

ʼದಿ ಕೇರಳ ಸ್ಟೋರಿʼ ಸಿನಿಮಾ: ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

ಹಿರಿಯ ನಟ ಟಿ.ಎಸ್. ಲೋಹಿತಾಶ್ವ ನಿಧನ

ನಾಳೆ ́ಬೈ2 ಕಾಫಿ́ ನಾಟಕ ಪ್ರದರ್ಶನ

ಶಾಲಾ ಮಕ್ಕಳಿಗೆ 'ಗಂಧದ ಗುಡಿ' ಉಚಿತ ಪ್ರದರ್ಶನ ನೀಡಲು ಮನವಿ

‘ಉತ್ತರಕಾಂಡ’ ಸಿನೆಮಾದಲ್ಲಿ ಧನಂಜಯ್‌–ರಮ್ಯಾ ಜೋಡಿ

ಮುಂದಿನ ಚುನಾವಣೆಯಲ್ಲಿ ನಿಂತು ಗೆಲ್ಲುವ ಸಾಮರ್ಥ್ಯ ನನಗಿದೆ. ಆದರೆ, ನನಗೆ ಆ ಆಸೆ ಇರಲಿಲ್ಲ: ಝೈದ್ ಖಾನ್

ಮುಂಬೈ: ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್‌ ಮೃತದೇಹ ಪತ್ತೆ

Updated : 30.09.2022

ಮುಂಬೈ: ಮುಂಬೈನ ಅಂಧೇರಿ ಪ್ರದೇಶದ ಹೋಟೆಲ್ ಒಂದರ ಕೊಠಡಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ 40 ವರ್ಷದ ಮಾಡೆಲ್ ಮೃತದೇಹ ಪತ್ತೆಯಾಗಿದೆ.

ಮಾಡೆಲ್ ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಹೊಟೇಲ್‌ನಲ್ಲಿ ರಾತ್ರಿಯ ಊಟಕ್ಕೂ ಆರ್ಡರ್ ಮಾಡಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಗುರುವಾರ, ಮನೆಗೆಲಸದ ಸಿಬ್ಬಂದಿ ಪದೇ ಪದೇ ಕರೆ ಮಾಡಿದರೂ ಬಾಗಿಲು ತೆರೆದಿರಲಿಲ್ಲ. ಈ ಹಿನ್ನೆಲೆಯಲ್ಲಿ ಹೋಟೆಲ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಹೋಟೆಲ್ ತಲುಪಿದ ಪೊಲೀಸರು ಮಾಸ್ಟರ್ ಕೀಯೊಂದಿಗೆ ಕೊಠಡಿಯನ್ನು ತೆರೆದಾಗ ಮಾಡೆಲ್ ಶವ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಘಟನೆ ನಡೆದ ಸ್ಥಳದಿಂದ ಪೊಲೀಸರು ಸುಸೈಡ್ ನೋಟ್ ಅನ್ನೂ ವಶಪಡಿಸಿಕೊಂಡಿದ್ದಾರೆ.

"ನನ್ನನ್ನು ಕ್ಷಮಿಸಿ, ಇದಕ್ಕೆ ಯಾರೂ ಕಾರಣರಲ್ಲ, ನಾನು ಸಂತೋಷವಾಗಿಲ್ಲ, ನನಗೆ ಶಾಂತಿ ಬೇಕು" ಎಂದು ಪತ್ರದಲ್ಲಿ ಮಾಡೆಲ್ ಬರೆದಿದ್ದಾರೆ ಎಂದು ndtv.com ವರದಿ ಮಾಡಿದೆ.

ವರ್ಸೋವಾ ಪೊಲೀಸರು ಎಡಿಆರ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ವರದಿಯಾಗಿದೆ.

© Copyright 2022, All Rights Reserved Kannada One News