Flash News:
ಬೈಕ್ ಮರಕ್ಕೆ ಢಿಕ್ಕಿ: ಸವಾರ ಮೃತ್ಯು

ಬೈಕ್ ಮರಕ್ಕೆ ಢಿಕ್ಕಿ: ಸವಾರ ಮೃತ್ಯು

Updated : 05.10.2022

ಬೆಳ್ತಂಗಡಿ: ಬೈಕೊಂದು ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ  ನಾರಾವಿ ಅರಸಿಕಟ್ಟೆ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಮೃತರನ್ನು ನಾರಾವಿ ಗ್ರಾಮದ ಅರಸಿಕಟ್ಟೆ ನಿವಾಸಿ ಸಂತೋಷ್(23) ಎಂದು ಗುರುತಿಸಲಾಗಿದೆ. ಸಂತೋಷ್ ರಾತ್ರಿ ವೇಳೆ ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸವಾರನ ನಿಯಂತ್ರಣದ ತಪ್ಪಿದ ಬೈಕ್ ಮರಕ್ಕೆ ಢಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಸಂತೋಷ್ ರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.

ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

© Copyright 2022, All Rights Reserved Kannada One News