Flash News:
ಬಲವಂತವಾಗಿ ಮತಾಂತರ ಮಾಡಲು ಯತ್ನ ಆರೋಪ: ಪ್ರಕರಣ ದಾಖಲು

ಬಲವಂತವಾಗಿ ಮತಾಂತರ ಮಾಡಲು ಯತ್ನ ಆರೋಪ: ಪ್ರಕರಣ ದಾಖಲು

Updated : 25.09.2022

ಹುಬ್ಬಳ್ಳಿ: ಮಂಡ್ಯದ ಯಾದವನಹಳ್ಳಿ ಗ್ರಾಮದ ಶ್ರೀಧರ ಗಂಗಾಧರ ಅವರ ಮರ್ಮಾಂಗದ ಮುಂದೊಗಲ ತುದಿ ಕತ್ತರಿಸಿ(ಖತ್ನಾ) ಮುಸ್ಲಿಂ ಧರ್ಮಕ್ಕೆ ಬಲವಂತವಾಗಿ ಮತಾಂತರ ಮಾಡಲು ಯತ್ನಿಸಿದ ಆರೋಪದಡಿ 11 ಮಂದಿ ವಿರುದ್ಧ  ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಡ್ಯದ ಅತ್ತಾವರ ರೆಹಮಾನ್, ಬೆಂಗಳೂರಿನ ಅಜೀಸಾಬ್, ನಯಾಜ್ ಪಾಷಾ, ನದೀಮ್ ಖಾನ್, ಅನ್ಸಾರ್ ಪಾಷಾ, ಸಯ್ಯದ್ ದಸ್ತಗಿರ್, ಮಹ್ಮದ್ ಇಕ್ಬಾಲ್, ರಫಿಕ್, ಶಬ್ಬೀರ್, ಖಾಲಿದ್, ಷಾಕಿಲ್ ಮತ್ತು ಅಲ್ತಾಪ್ ವಿರುದ್ಧ ಶ್ರೀಧರ ದೂರು ನೀಡಿದ್ದಾರೆ.

ಶ್ರೀಧರ ಅವರು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಸೆ. 21ರಂದು ಹುಬ್ಬಳ್ಳಿಯ ಬೈರಿದೇವರಕೊಪ್ಪಕ್ಕೆ ಬಂದಾಗ, ಅಪರಿಚಿತರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಕಿಮ್ಸ್'ನಲ್ಲಿ ಚಿಕಿತ್ಸೆ ಪಡೆದ ಅವರು, ಈ ಹಿಂದಿನ ಘಟನೆಯಿಂದ ಬೇಸತ್ತು ನವನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.

© Copyright 2022, All Rights Reserved Kannada One News