ಹಿರಿಯ ನಟ ಟಿ.ಎಸ್. ಲೋಹಿತಾಶ್ವ ನಿಧನ

Related Articles

ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜೊತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ: ಅಮೀರ್ ಖಾನ್

‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನ.25ಕ್ಕೆ ಬಿಡುಗಡೆ

ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ

ವೀರ ದಾಸ್ ಅವರ ಬೆಂಗಳೂರು ಶೋ ರದ್ದಾದ ಬಳಿಕ ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ

ʼದಿ ಕೇರಳ ಸ್ಟೋರಿʼ ಸಿನಿಮಾ: ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

ನಾಳೆ ́ಬೈ2 ಕಾಫಿ́ ನಾಟಕ ಪ್ರದರ್ಶನ

ಶಾಲಾ ಮಕ್ಕಳಿಗೆ 'ಗಂಧದ ಗುಡಿ' ಉಚಿತ ಪ್ರದರ್ಶನ ನೀಡಲು ಮನವಿ

‘ಉತ್ತರಕಾಂಡ’ ಸಿನೆಮಾದಲ್ಲಿ ಧನಂಜಯ್‌–ರಮ್ಯಾ ಜೋಡಿ

ಮುಂದಿನ ಚುನಾವಣೆಯಲ್ಲಿ ನಿಂತು ಗೆಲ್ಲುವ ಸಾಮರ್ಥ್ಯ ನನಗಿದೆ. ಆದರೆ, ನನಗೆ ಆ ಆಸೆ ಇರಲಿಲ್ಲ: ಝೈದ್ ಖಾನ್

‘ಬನಾರಸ್‌’: ರಾಜ್ಯದ 125 ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ

ಹಿರಿಯ ನಟ ಟಿ.ಎಸ್. ಲೋಹಿತಾಶ್ವ ನಿಧನ

Updated : 09.11.2022

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ಟಿ.ಎಸ್‌. ಲೋಹಿತಾಶ್ವ(80) ಅವರು ಮಂಗಳವಾರ ಮಧ್ಯಾಹ್ನ ಬಹುಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ. 

ಸಕ್ಕರೆ ಕಾಯಿಲೆ ಹಾಗೂ ರಕ್ತದೊತ್ತಡದ ಸಮಸ್ಯೆಯಿಂದ ಬಳಲುತ್ತಿದ್ದ ಲೋಹಿತಾಶ್ವ ಅವರಿಗೆ ನಾಲ್ಕೈದು ತಿಂಗಳ ಹಿಂದೆ ಎರಡು ಬಾರಿ ಮೂತ್ರನಾಳದ ಸೋಂಕು ಕಾಣಿಸಿಕೊಂಡಿತ್ತು. ಈ ನಡುವೆ ಅನಾರೋಗ್ಯಕ್ಕೀಡಾದ ಅವರನ್ನು ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಸಾಗರ್‌ ಆಸ್ಪತ್ರೆಗೆ ಕಳೆದ ಅ.4ರಂದು ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲೇ ಅವರಿಗೆ ಹೃದಯಾಘಾತವೂ ಆಗಿತ್ತು. ಇದರಿಂದಾಗಿ ಮಿದುಳಿಗೂ ಹಾನಿಯಾಗಿತ್ತು. ನಂತರದಲ್ಲಿ ಅವರನ್ನು ಐಸಿಯುಗೆ ದಾಖಲಿಸಿ, ವೆಂಟಿಲೇಟರ್‌ ಅಳವಡಿಸಿ ಚಿಕಿತ್ಸೆ ಮುಂದುವರಿಸಲಾಗಿತ್ತು.

‘ಕುಮಾರಸ್ವಾಮಿ ಬಡಾವಣೆಯಲ್ಲಿರುವ ಮನೆಯಲ್ಲಿ ಬುಧವಾರ ಬೆಳಗ್ಗೆ 11ರವರೆಗೆ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುವುದು. ನಂತರದಲ್ಲಿ ತಂದೆಯ ಹುಟ್ಟೂರು ತುಮಕೂರು ಸಮೀಪದ ತೊಂಡಗೆರೆಯಲ್ಲಿ ಸಂಜೆ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಅವರ ಪುತ್ರ, ನಟ ಶರತ್‌ ಲೋಹಿತಾಶ್ವ ತಿಳಿಸಿದ್ದಾರೆ. 

ಲೋಹಿತಾಶ್ವ ಅವರು ರಂಗಭೂಮಿಯ ಮೂಲಕ ಸಿನಿಮಾ ಕ್ಷೇತ್ರಕ್ಕೆ ಕಾಲಿಟ್ಟವರು. ಮೊದಮೊದಲು ಕಲಾತ್ಮಕ ಚಿತ್ರಗಳಲ್ಲಿ ಬಣ್ಣಹಚ್ಚುತ್ತಿದ್ದ ಅವರಿಗೆ ಕಮರ್ಷಿಯಲ್‌ ಬ್ರೇಕ್‌ ನೀಡಿದ್ದು ಶಂಕರ್‌ನಾಗ್‌ ಅವರ ‘ಗೀತಾ’ ಸಿನಿಮಾ. ‘ಕತ್ತಲೆ ದಾರಿ ದೂರ’ ನಾಟಕದಲ್ಲಿ ಅವರ ವೈದ್ಯನ ಪಾತ್ರವನ್ನು ನೋಡಿದ್ದ ಶಂಕರ್‌ನಾಗ್‌ ಅವರು ಗೀತಾ ಸಿನಿಮಾದಲ್ಲಿ ವೈದ್ಯರ ಪಾತ್ರಕ್ಕೆ ಆಯ್ಕೆ ಮಾಡಿದರು. ನಂತರ ‘ಧರ್ಮ ದಾರಿ ತಪ್ಪಿತು’, ‘ಗಜೇಂದ್ರ’, ‘ಸಂಭವಾಮಿ ಯುಗೇಯುಗೇ’, ‘ಸಾಂಗ್ಲಿಯಾನ’ ಹೀಗೆ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.


© Copyright 2022, All Rights Reserved Kannada One News