́ಮಗಳು ಜಾನಕಿ' ಧಾರಾವಾಹಿ ಖ್ಯಾತಿಯ ನಟ ರವಿ ಸ್ಥಿತಿ ಗಂಭೀರ!

Related Articles

ಕರಾವಳಿ ಕತೆ ಹೇಳುವ 'ಕಾಂತಾರ': ತಾವು ಎಲ್ಲಿಂದ ಬಂದವರೆನ್ನುವುದ ಮರೆತ ನಿರ್ದೇಶಕ: ಪತ್ರಕರ್ತ ನವೀನ್ ಸೂರಿಂಜೆ ಅವರ ವಿಮರ್ಶೆ

ಮುಂಬೈ: ನೇಣು ಬಿಗಿದ ಸ್ಥಿತಿಯಲ್ಲಿ ಮಾಡೆಲ್‌ ಮೃತದೇಹ ಪತ್ತೆ

ಉಗ್ರ ಹಿಂದುತ್ವ ಸಂಘಟನೆ ಸನಾತನ ಸಂಸ್ಥೆಯನ್ನೂ ನಿಷೇಧಿಸಲಾಗುತ್ತದೆಯೇ?: ನಟ ಚೇತನ್‌ ಅಹಿಂಸಾ

'ಚೆಲ್ಲೊ ಶೋ' ಭಾರತೀಯ ಸಿನಿಮಾ ಅಲ್ಲ: FWICE ಆರೋಪ

ಸಮಂತಾ ನಟನೆಯ 'ಶಾಕುಂತಲಂ' ಸಿನಿಮಾ ನವೆಂಬರ್ 4ಕ್ಕೆ ತೆರೆಗೆ

ನಿಯಮ ಉಲ್ಲಂಘನೆ ಆರೋಪ: 'ಸೈಮಾ ಅವಾರ್ಡ್' ಆಯೋಜಕರ ವಿರುದ್ಧ ಎಫ್‌ ಐಆರ್

ಕಾಮಿಡಿಯನ್ ರಾಜು ಶ್ರೀವಾಸ್ತವ ನಿಧನ

ಗೌರಿ ಸಾಕ್ಷ್ಯಚಿತ್ರ: ಅತ್ಯುತ್ತಮ ಮಾನವ ಹಕ್ಕುಗಳ ಚಿತ್ರ ಪ್ರಶಸ್ತಿಗೆ ಭಾಜನ

ರವೀಶ್‌ ಕುಮಾರ್‌ ಕುರಿತ ಸಾಕ್ಷ್ಯಚಿತ್ರಕ್ಕೆ ಆಂಪ್ಲಿಫೈ ವಾಯ್ಸಸ್‌ ಪ್ರಶಸ್ತಿ

ತಮಿಳು ನಟಿ ಪಾಲಿನ್ ಜೆಸ್ಸಿಕಾ ಆತ್ಮಹತ್ಯೆ

́ಮಗಳು ಜಾನಕಿ' ಧಾರಾವಾಹಿ ಖ್ಯಾತಿಯ ನಟ ರವಿ ಸ್ಥಿತಿ ಗಂಭೀರ!

Updated : 14.09.2022

ಕನ್ನಡ ಕಿರುತೆರೆಯ ಖ್ಯಾತ ನಟ, ಮಗಳು ಜಾನಕಿ ಧಾರಾವಾಹಿಯ ಚಂದು ಭಾರ್ಗಿಯಾಗಿ ಪ್ರೇಕ್ಷಕರ ಹೃದಯ ಗೆದ್ದಿದ್ದ ನಟ ಮಂಡ್ಯ ರವಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ನಟ ರವಿ ಕಳೆದ ಒಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

 ಬೆಂಗಳೂರಿನ ಬಿಜೆಎಸ್ ನಲ್ಲಿರುವ ನಟ ರವಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನಟ ರವಿ ಮಗಳು ಜಾನಕಿ ಧಾರಾವಾಹಿ ಮೂಲಕ ಪ್ರಸಿದ್ಧಿ ಪಡೆದಿದ್ದರು. ಈ ಧಾರಾವಾಹಿಯಲ್ಲಿ ರವಿ ಚಂದುಭಾರ್ಗಿ ಎನ್ನುವ ಪಾತ್ರದಲ್ಲಿ ಕಣಿಸಿಕೊಂಡಿದ್ದರು.

ಮಂಡ್ಯ ಮೂಲದ ನಟ ರವಿ ಅವರ ಸಂಪೂರ್ಣ ಹೆಸರು ರವಿ ಪ್ರಸಾದ್. ಖ್ಯಾತ ನಿರ್ದೇಶಕ ಟಿಎನ್ ಸೀತರಾಮ್ ಅವರ ಅನೇಕ ಧಾರಾವಾಹಿಗಳಲ್ಲಿ ರವಿ ಅವರು ನಟಿಸಿದ್ದಾರೆ. ರಂಗಭೂಮಿ ಹಿನ್ನೆಲೆಯಿಂದ ಬಂದ  ರವಿ ಧಾರಾವಾಹಿ ಜೊತೆಗೆ ಕೆಲವು ಸಿನಿಮಾಗಳಲ್ಲೂ ನಟಿಸಿದ್ದಾರೆ. ಎಂಎ ಎಲ್ ಎಲ್ ಬಿ ಓದಿರುವ ರವಿ ಅದ್ಭುತ ನಟನೆ ಮೂಲಕ ಪ್ರೇಕ್ಷಕರ ಹೃದಯ ಗೆದ್ದಿದ್ದರು.


© Copyright 2022, All Rights Reserved Kannada One News