ರಾಜ್ಯದಲ್ಲಿ ಒಂದು ಲಕ್ಷ ಕೋಟಿ ರೂ. ಹೂಡಿಕೆ: ಅದಾನಿ ಗ್ರೂಪ್ ಸಿಇಒ

ರಾಜ್ಯದಲ್ಲಿ ಒಂದು ಲಕ್ಷ ಕೋಟಿ ರೂ. ಹೂಡಿಕೆ: ಅದಾನಿ ಗ್ರೂಪ್ ಸಿಇಒ

Updated : 03.11.2022

ರಾಜ್ಯದಲ್ಲಿ ಮುಂದಿನ 7 ವರ್ಷಗಳಲ್ಲಿ ಒಂದು ಲಕ್ಷ ಕೋಟಿ ರೂ. ಹೂಡಿಕೆ ಮಾಡುವುದಾಗಿ ಅದಾನಿ ಗ್ರೂಪ್ ಸಿಇಒ ಕರಣ್ ಅದಾನಿ ಘೋಷಿಸಿದರು.

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಅವರು ಈ ಘೋಷಣೆ ಮಾಡಿದರು.

“ಮಲ್ಟಿಪಲ್ ಲಾಜಿಸ್ಟಿಕ್ ಪಾರ್ಕ್ ಅಭಿವೃದ್ಧಿ, ಆಹಾರ ಸಂಸ್ಕರಣೆ, ಇಂಧನ, ನವೀಕರಿಸಬಹುದಾದ ಇಂಧನ, ಸೌರ ಶಕ್ತಿ, ಜಲಸಾರಿಗೆ ಹಾಗೂ ಲಾಜಿಸ್ಟಿಕ್ ಕ್ಷೇತ್ರದಲ್ಲೂ ಹೂಡಿಕೆ ಮಾಡುವುದಾಗಿ” ಕರಣ್ ಅದಾನಿ ಹೇಳಿದರು.

ಇದೇ ವೇಳೆ, ರಾಜ್ಯದಲ್ಲಿ ಮುಂದಿನ ವರ್ಷಗಳಲ್ಲಿ ರಾಜ್ಯದಲ್ಲಿ ಒಂದು ಲಕ್ಷ ಕೋಟಿ‌ ರೂ. ಹೂಡಿಕೆ ಮಾಡುವುದಾಗಿ ಜೆಎಸ್‌ಡಬ್ಲ್ಯೂ ಗ್ರೂಪ್ ಅಧ್ಯಕ್ಷ ಸಜ್ಜನ್ ಜಿಂದಾಲ್ ಘೋಷಿಸಿದರು.

ಹಾಗೆಯೇ ರಾಜ್ಯದಲ್ಲಿ ಇಂಧನ ಕ್ಷೇತ್ರ ಮತ್ತು ಹಸಿರು ಇಂಧನ ಕ್ಷೇತ್ರಕ್ಕೆ ಸಂಬಂಧಿಸಿದ ಸಂಶೋಧನೆಯಲ್ಲಿ ನಾವು 50 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತೇವೆ ಎಂದು ಸ್ಟರ್ಲೈಟ್ ಪವರ್ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ(ಸಿಇಒ) ಪ್ರತೀಕ್ ಅಗರ್ವಾಲ್ ತಿಳಿಸಿದರು. 


© Copyright 2022, All Rights Reserved Kannada One News