ಅಸ್ಸಾಂ ಸರ್ಕಾರದಿಂದ ಎಲ್ಲಾ ಖಾಸಗಿ ಮದರಸಾಗಳ ನಿಯಂತ್ರಣ: ರನೋಜ್ ಪೆಗು

Related Articles

ಭಾರತದ ಜನಪ್ರಿಯ ಗೇಮಿಂಗ್ ಯೂಟ್ಯೂಬರ್ ಅಭ್ಯುದಯ್ ಮಿಶ್ರಾ ರಸ್ತೆ ಅಪಘಾತದಲ್ಲಿ ಮೃತ್ಯು

ಪಿಎಸ್ಐ ಹಗರಣ: ಪ್ರಮುಖ ಆರೋಪಿ ಹಾಸ್ಟೆಲ್ ವಾರ್ಡನ್ ಬಂಧನ

ತಮ್ಮ ತಂಗಿ ಜೊತೆ ಸ್ನೇಹದಲ್ಲಿದ್ದ ಯುವಕನ ಹತ್ಯೆ: ಆರೋಪಿಗಳ ಬಂಧನ

ಬ್ರಹ್ಮಪುತ್ರ ನದಿಯಲ್ಲಿ ಮುಳುಗಿದ 75 ಮಂದಿ ಪ್ರಯಾಣಿಸುತ್ತಿದ್ದ ದೋಣಿ: ಓರ್ವ ಅಧಿಕಾರಿ ಸೇರಿ ಹಲವರು ನಾಪತ್ತೆ

ಪ್ರವಾದಿ ಮುಹಮ್ಮದ್ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ಮುಖ್ಯಶಿಕ್ಷಕ ಅಮಾನತು

ದೇಶದ ನೂತನ ಅಟಾರ್ನಿ ಜನರಲ್‌ ಆಗಿ ಹಿರಿಯ ವಕೀಲ ಆರ್‌.ವೆಂಕಟರಮಣಿ ನೇಮಕ

ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಚಾಮರಾಜನಗರ: ‘ಭಾರತ್ ಜೋಡೋ’ ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಕಾನೂನುಬದ್ಧ ಗರ್ಭಪಾತಕ್ಕೆ ಎಲ್ಲ ಮಹಿಳೆಯರು ಅರ್ಹ : ಸುಪ್ರೀಂಕೋರ್ಟ್

ಮಳಲಿ‌ ಮಸೀದಿ ವಿವಾದ: ಪ್ರಕರಣದ ತೀರ್ಪು ಅ.17 ಕ್ಕೆ ಮುಂದೂಡಿಕೆ

ಅಸ್ಸಾಂ ಸರ್ಕಾರದಿಂದ ಎಲ್ಲಾ ಖಾಸಗಿ ಮದರಸಾಗಳ ನಿಯಂತ್ರಣ: ರನೋಜ್ ಪೆಗು

Updated : 21.09.2022

ಗುವಾಹಟಿ: ಅಸ್ಸಾಂ ಸರ್ಕಾರೇತರ ಶಿಕ್ಷಣ ಸಂಸ್ಥೆಗಳ (ನಿಯಂತ್ರಣ ಮತ್ತು ನಿರ್ವಹಣೆ) ಕಾಯ್ದೆ, 2006ರ ಅಡಿ ಮದರಸಾಗಳನ್ನು ನಿಯಂತ್ರಣಕ್ಕೆ ಸಾಧ್ಯತೆ ಇದೆ. ಹೀಗಾಗಿ ಅಸ್ಸಾಂ ಸರ್ಕಾರವು ರಾಜ್ಯದಲ್ಲಿರುವ ಎಲ್ಲ ಖಾಸಗಿ ಮದರಸಾಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಶಿಕ್ಷಣ ಸಚಿವ ರನೋಜ್‌ ಪೆಗು ಬುಧವಾರ ತಿಳಿಸಿದ್ದಾರೆ.

ಉಗ್ರರ ಜೊತೆ ಸಂಪರ್ಕ ಹೊಂದಿರುವ ಆರೋಪದಡಿ ಹಲವು ಮದರಸಾಗಳ ಬೋಧಕರನ್ನು ಬಂಧಿಸಿರುವ ಹಿನ್ನೆಲೆ ಈ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.  ಖಾಸಗಿ ಮದರಸಾಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, 'ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸರ್ಕಾರೇತರ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸುವ ಕಾನೂನು ಈಗಾಗಲೇ ಚಾಲ್ತಿಯಲ್ಲಿದೆ. ಆದರೆ ಎಲ್ಲ ಸರ್ಕಾರೇತರ ಶಿಕ್ಷಣ ಸಂಸ್ಥೆಗಳು ಈ ಕಾನೂನಿನಡಿ ಕಾರ್ಯ ನಿರ್ವಹಿಸುತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಚಾಲ್ತಿಯಲ್ಲಿರುವ ಈ ಕಾಯ್ದೆ ಅಡಿ ಎಲ್ಲ ಸರ್ಕಾರೇತರ ಶಿಕ್ಷಣ ಸಂಸ್ಥೆಗಳನ್ನು ತರುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಆದರೆ ಖಾಸಗಿ ಮದರಸಾಗಳು ಈ ವಿಭಾಗದಲ್ಲಿ ಬರುತ್ತವೆಯೋ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುವುದು. ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

ಅಸ್ಸಾಂನಲ್ಲಿ 4 ಪ್ರಮುಖ ಮುಸ್ಲಿಂ ಸಂಘಟನೆಗಳು ಸುಮಾರು 3,000 ನೋಂದಾಯಿತ ಮತ್ತು ನೋಂದಾಯಿಸಲಾಗದ ಮದರಸಾಗಳು ಚಾಲ್ತಿಯಲ್ಲಿವೆ ಎಂದು ಪೊಲೀಸ್‌ ಮಹಾನಿರ್ದೇಶಕ ಭಾಸ್ಕರ್‌ ಜ್ಯೋತಿ ಮಹಾಂತ ಇತ್ತೀಚೆಗೆ ಹೇಳಿದ್ದರು.

ಕಳೆದ ವರ್ಷ ಏಪ್ರಿಲ್‌ 1ರಂದು ಸರ್ಕಾರದಡಿ ನಡೆಸಲಾಗುತ್ತಿದ್ದ 610 ಮದರಸಾಗಳನ್ನು ಪ್ರಾಥಮಿಕ, ಪ್ರೌಢ ಶಾಲೆಗಳನ್ನಾಗಿ ಪರಿವರ್ತಿಸಲಾಗಿತ್ತು. ಉಗ್ರಗಾಮಿ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಆರೋಪದಡಿ ಅಸ್ಸಾಂನಲ್ಲಿ ಮಾರ್ಚ್‌ ತಿಂಗಳಿನಿಂದ ಇಲ್ಲಿಯವರೆಗೆ ಮದರಸಾಗಳಲ್ಲಿ ಪಾಠ ಮಾಡುತ್ತಿದ್ದ 42 ಶಿಕ್ಷಕರನ್ನು ಬಂಧಿಸಲಾಗಿದೆ.

© Copyright 2022, All Rights Reserved Kannada One News