ಭಾರತ ತಂಡಡ ನಾಯಕತ್ವ ಜವಾಬ್ದಾರಿ ವಹಿಸಲು ಸಿದ್ಧನಿದ್ದೇನೆ: ಹಾರ್ದಿಕ್ ಪಾಂಡ್ಯ

Related Articles

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

ಮಹಿಳಾ ಏಕದಿನ ಕ್ರಿಕೆಟ್ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಭಾರತ ತಂಡಡ ನಾಯಕತ್ವ ಜವಾಬ್ದಾರಿ ವಹಿಸಲು ಸಿದ್ಧನಿದ್ದೇನೆ: ಹಾರ್ದಿಕ್ ಪಾಂಡ್ಯ

Updated : 08.08.2022

ಫ್ಲಾರಿಡಾ: ಭಾರತ ತಂಡದ ನಾಯಕನಾಗುವುದು ವಿಶೇಷ ಅನುಭವ ನೀಡುತ್ತದೆ ಭಾರತ ಕ್ರಿಕೆಟ್ ತಂಡದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ. ಇನ್ನು ಭವಿಷ್ಯದಲ್ಲಿ ತಂಡದ ನಾಯಕತ್ವದ ಜವಾಬ್ದಾರಿ ವಹಿಸಲು ಉತ್ಸುಕರಾಗಿದ್ದೀರಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಅವರು, ಖಂಡಿತವಾಗಿಯೂ ಸಿದ್ಧನಿದ್ದೇನೆ ಎಂದು ಉತ್ತರಿಸಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಐದನೇ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತ ತಂಡವು 88 ರನ್‌ಗಳ ಜಯ ಸಾಧಿಸಿದ ಬಳಿಕ ಅವರು ಈ ಹೇಳಿಕೆ ನೀಡಿದ್ದಾರೆ.

ಭಾನುವಾರ ರಾತ್ರಿ ನಡೆದ ಪಂದ್ಯದಲ್ಲಿ ನಾಯಕ ರೋಹಿತ್‌ ಶರ್ಮಾ ಅನುಪಸ್ಥಿತಿಯಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಭಾರತ ತಂಡವು ಸರಣಿಯನ್ನು 4–1 ಅಂತರದಿಂದ ಗೆದ್ದುಕೊಂಡಿದೆ.

‘ಅವಕಾಶ ನೀಡಿದರೆ, ಅದನ್ನು ಸಂತಸದಿಂದ ನಿರ್ವಹಿಸಬಲ್ಲೆ. ಆದರೆ ಸದ್ಯಕ್ಕೆ ವಿಶ್ವಕಪ್ ಸಮೀಪಿಸುತ್ತಿದ್ದು, ಅದಕ್ಕೆ ತಂಡವನ್ನು ಉತ್ತಮವಾಗಿ ಸಿದ್ಧಪಡಿಸಿಕೊಳ್ಳಬೇಕಿದೆ’ ಎಂದು ಪಾಂಡ್ಯ ಹೇಳಿದ್ದಾರೆ.

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಗುಜರಾತ್ ಟೈಟನ್ಸ್ ನಾಯಕತ್ವ ವಹಿಸಿದ ಅನುಭವ ಪಾಂಡ್ಯ ಅವರಿಗಿದೆ. ಜೂನ್‌ನಲ್ಲಿ ಐರ್ಲೆಂಡ್ ವಿರುದ್ಧ ನಡೆದಿದ್ದ ಟಿ20 ಸರಣಿಯಲ್ಲಿ ಭಾರತ ತಂಡವನ್ನು ಮುನ್ನಡೆಸಿದ್ದಾರೆ.

ಭಾರತವು ಕಳೆದ ಒಂದು ವರ್ಷದಿಂದ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಏಳು ಮಂದಿಗೆ ನಾಯಕತ್ವದ ಜವಾಬ್ದಾರಿ ವಹಿಸಿತ್ತು. ಇದರಿಂದ ತಂಡಕ್ಕೆ ಉತ್ತೇಜನ ದೊರೆಯಲಿದೆ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

‘ತಂಡದ ಸುತ್ತಲೂ ಹಲವು ನಾಯಕರನ್ನು ರೂಪಿಸುವುದು ಉತ್ತೇಜನಕಾರಿ. ಆಟವನ್ನು ಚೆನ್ನಾಗಿ ಅರ್ಥ ಮಾಡಿಕೊಳ್ಳಬಲ್ಲ ಹಾಗೂ ತಂಡದೊಳಗೆ ಒಬ್ಬರನ್ನೊಬ್ಬರು ಚೆನ್ನಾಗಿ ತಿಳಿದಿರುವ ಹುಡುಗರು ಒತ್ತಡವನ್ನು ನಿಭಾಯಿಸಬೇಕು ಎಂದು ನೀವು ಬಯಸುವುದು ಸಹಜ’ ಎಂದು ರೋಹಿತ್ ಶರ್ಮಾ ಹೇಳಿದ್ದಾರೆ.

© Copyright 2022, All Rights Reserved Kannada One News