ಸರ್ಕಾರದ ವತಿಯಿಂದ ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ, ಈದ್ಗಾ ಸುತ್ತ ಬಿಗಿ ಭದ್ರತೆ

Related Articles

ಭಾರತದ ಜನಪ್ರಿಯ ಗೇಮಿಂಗ್ ಯೂಟ್ಯೂಬರ್ ಅಭ್ಯುದಯ್ ಮಿಶ್ರಾ ರಸ್ತೆ ಅಪಘಾತದಲ್ಲಿ ಮೃತ್ಯು

ಪಿಎಸ್ಐ ಹಗರಣ: ಪ್ರಮುಖ ಆರೋಪಿ ಹಾಸ್ಟೆಲ್ ವಾರ್ಡನ್ ಬಂಧನ

ತಮ್ಮ ತಂಗಿ ಜೊತೆ ಸ್ನೇಹದಲ್ಲಿದ್ದ ಯುವಕನ ಹತ್ಯೆ: ಆರೋಪಿಗಳ ಬಂಧನ

ಬ್ರಹ್ಮಪುತ್ರ ನದಿಯಲ್ಲಿ ಮುಳುಗಿದ 75 ಮಂದಿ ಪ್ರಯಾಣಿಸುತ್ತಿದ್ದ ದೋಣಿ: ಓರ್ವ ಅಧಿಕಾರಿ ಸೇರಿ ಹಲವರು ನಾಪತ್ತೆ

ಪ್ರವಾದಿ ಮುಹಮ್ಮದ್ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ಮುಖ್ಯಶಿಕ್ಷಕ ಅಮಾನತು

ದೇಶದ ನೂತನ ಅಟಾರ್ನಿ ಜನರಲ್‌ ಆಗಿ ಹಿರಿಯ ವಕೀಲ ಆರ್‌.ವೆಂಕಟರಮಣಿ ನೇಮಕ

ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಚಾಮರಾಜನಗರ: ‘ಭಾರತ್ ಜೋಡೋ’ ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಕಾನೂನುಬದ್ಧ ಗರ್ಭಪಾತಕ್ಕೆ ಎಲ್ಲ ಮಹಿಳೆಯರು ಅರ್ಹ : ಸುಪ್ರೀಂಕೋರ್ಟ್

ಮಳಲಿ‌ ಮಸೀದಿ ವಿವಾದ: ಪ್ರಕರಣದ ತೀರ್ಪು ಅ.17 ಕ್ಕೆ ಮುಂದೂಡಿಕೆ

ಸರ್ಕಾರದ ವತಿಯಿಂದ ಚಾಮರಾಜಪೇಟೆ ಮೈದಾನದಲ್ಲಿ ಧ್ವಜಾರೋಹಣ, ಈದ್ಗಾ ಸುತ್ತ ಬಿಗಿ ಭದ್ರತೆ

Updated : 15.08.2022

ಬೆಂಗಳೂರು: ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಪೊಲೀಸರ ಸರ್ಪಗಾವಲಿನಲ್ಲಿ ಸೋಮವಾರ ಬೆಳಗ್ಗೆ ಧ್ವಜಾರೋಹಣ ನೆರವೇರಿದೆ.

ಸರ್ಕಾರದ ವತಿಯಿಂದಲೇ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಕಾರ್ಯಕ್ರಮದಲ್ಲಿ ಬೆಂಗಳೂರು ನಗರ ಉಪ ವಿಭಾಗಾಧಿಕಾರಿ ಶಿವಣ್ಣ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ. 

ಈ ವೇಳೆ ಸಂಸದ ಪಿ.ಸಿ. ಮೋಹನ್, ಶಾಸಕ ಜಮೀರ್ ಅಹ್ಮದ್ ಖಾನ್, ಹೆಚ್ಚುವರಿ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ ಹಾಗೂ ಪಶ್ಚಿಮ‌ ವಿಭಾಗದ ಡಿಸಿಪಿ ಲಕ್ಷ್ಮಣ ‌ನಿಂಬರಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಶಾಲಾ‌ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು‌ ನಡೆಯುತ್ತಿವೆ.

ಅಲ್ಲದೇ ಸ್ವತಂತ್ರ್ಯೋತ್ಸವ ಆಚರಣೆ ವೇಳೆ ಚಾಮರಾಜಪೇಟೆ ಮೈದಾನದಲ್ಲಿರುವ ಈದ್ಗಾ ಸುತ್ತ ಪೊಲೀಸರು ಬಿಗಿ‌ಭದ್ರತೆ ಏರ್ಪಡಿಸಿದ್ದು, ಈದ್ಗಾಗೆ ಯಾವುದೇ ಧಕ್ಕೆಯಾಗದಂತೆ ನೋಡಿಕೊಳ್ಳಲು ಶಸ್ತ್ರಸಜ್ಜಿತ‌ ಪೊಲೀಸರು ಹಾಗೂ ಗರುಡಾ ಪಡೆ ಸಿಬ್ಬಂದಿ, ಸುತ್ತಲೂ ಗಸ್ತು ತಿರುಗುತ್ತಿದ್ದಾರೆ.

ಚಾಮರಾಜಪೇಟೆ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರುತ್ತಿದ್ದಂತರ ಸ್ಥಳೀಯ ನಿವಾಸಿಗಳ ಒಕ್ಕೂಟ ವೇದಿಕೆ‌ ಸದಸ್ಯರು, ಪಟಾಕಿ ಸಿಡಿಸಿ‌ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. .

'ಹಲವು ವರ್ಷಗಳಿಂದ ಮೈದಾನದಲ್ಲಿ ಧ್ವಜಾರೋಹಣ ಸಂಭ್ರಮ ಇರಲಿಲ್ಲ. ಈ ವರ್ಷ ಸರ್ಕಾರದವರೇ ಇಲ್ಲಿ ಧ್ವಜಾರೋಹಣ ನೆರವೇರಿಸಿದ್ದು. ಸ್ಥಳೀಯರೆಲ್ಲರೂ ಸಂಭ್ರಮಿಸುತ್ತಿದ್ದಾರೆ' ಎಂದು ಒಕ್ಕೂಟ ವೇದಿಕೆ ಸದಸ್ಯರು ಹೇಳಿದ್ದಾರೆ.

ತ್ರಿವರ್ಣ ಧ್ವಜ‌ ಹಿಡಿದು ರಸ್ತೆಯುದ್ದಕ್ಕೂ ಮೆರವಣಿಗೆ ಸಹ‌ ನಡೆದಿದೆ. ಚಾಮರಾಜಪೇಟೆ ಮೈದಾನ ಹಾಗೂ ಸುತ್ತಮುತ್ತ ಸ್ಥಳದಲ್ಲಿ ಮೆರವಣಿಗೆ ಸಾಗುತ್ತಿದ್ದು, ಪೊಲೀಸರ ಬಿಗಿ ಭದ್ರತೆಯೂ ಇದೆ.

© Copyright 2022, All Rights Reserved Kannada One News