ಕನ್ನಡ ಸಾಹಿತ್ಯ ಪರಿಷತ್ ಆ್ಯಪ್‌ ಬಿಡುಗಡೆ ಮಾಡಿದ ಸಿಎಂ

ಕನ್ನಡ ಸಾಹಿತ್ಯ ಪರಿಷತ್ ಆ್ಯಪ್‌ ಬಿಡುಗಡೆ ಮಾಡಿದ ಸಿಎಂ

Updated : 05.08.2022

ಬೆಂಗಳೂರು: ಮಕ್ಕಳಲ್ಲಿ ಕನ್ನಡದ ಭಾಷೆ, ಸಂಸ್ಕೃತಿ, ಇತಿಹಾಸ ಹಾಗೂ ಪರಂಪರೆ ಕುರಿತು ಅಭಿಮಾನ ಮೂಡಿಸುವ ಕೆಲಸವನ್ನು ಸರ್ಕಾರ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಜೊತೆಯಾಗಿ ಮಾಡಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು  ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಸಾಹಿತ್ಯ ಪರಿಷತ್ ಆ್ಯಪ್‌ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿಗೆ ಚಾಲನೆ ನೀಡಿ ಮಾತನಾಡಿದ ಅವರು, ಸಾಹಿತ್ಯ ಪರಿಷತ್ತು ಮತ್ತು ಸರ್ಕಾರದ ಸಂಬಂಧ ಕೇವಲ ಸಾಹಿತ್ಯ ಸಮ್ಮೇಳನ ನಡೆಸುವುದಕ್ಕಷ್ಟೇ ಸೀಮಿತ ಗೊಳಿಸದೆ, ಕನ್ನಡಾಭಿಮಾನ ಮೂಡಿಸುವ ನಿಟ್ಟಿನಲ್ಲಿ ಸದಾ ಜೊತೆಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಮಾರಂಭದಲ್ಲಿ ಸಚಿವರಾದ ವಿ. ಸೋಮಣ್ಣ, ಡಾ. ಅಶ್ವತ್ಥನಾರಾಯಣ, ಶಿವರಾಮ ಹೆಬ್ಬಾರ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್ ಜೋಷಿ,ಶಾಸಕ ನೆಹರು ಓಲೆಕಾರ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ ಮತ್ತಿತರರು ಉಪಸ್ಥಿತರಿದ್ದರು.

© Copyright 2022, All Rights Reserved Kannada One News