ಸೆಪ್ಟೆಂಬರ್ ನಲ್ಲಿ ‘ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ' ಪ್ರಾರಂಭ: ಸಿಎಂ ಬೊಮ್ಮಾಯಿ

Related Articles

ಜಾರ್ಜ್‌ ಅವರಿಗೆ ರಾಜಕೀಯ, ಸೈದ್ಧಾಂತಿಕ ಬದ್ದತೆ ಇತ್ತು: ಸಿದ್ದರಾಮಯ್ಯ

ತಮ್ಮ ಭ್ರಷ್ಟಾಚಾರ ಮುಚ್ಚಿಕೊಳ್ಳಲು ಬಿಜೆಪಿಯವರು ಜಾತಿ ಬಣ್ಣ ಕಟ್ಟಿದ್ದಾರೆ: ಸಿದ್ದರಾಮಯ್ಯ

ಕೊಲೆಗಡುಕರು, ಅತ್ಯಾಚಾರಿಗಳು, ಭ್ರಷ್ಟರ ಕೂಟವೇ ಬಿಜೆಪಿ: ಕಾಂಗ್ರೆಸ್‌ ಟೀಕೆ

ಹಿರಿಯ ಕಾಂಗ್ರೆಸ್ ನಾಯಕ ಆರ್ಯಾದನ್ ಮುಹಮ್ಮದ್ ನಿಧನ

ರೈತರ ಮನೆ, ಆಸ್ತಿ ಜಪ್ತಿ ನಿಷೇಧಕ್ಕೆ ಕ್ರಮ: ಸಿಎಂ ಬೊಮ್ಮಾಯಿ

ಬಿಜೆಪಿಯ ಆಪರೇಶನ್ ಕಮಲ ಸಂಚಿಗೆ ರಾಜ್ಯಪಾಲರ ಸಾಥ್: ಪಂಜಾಬ್‌ ಸಿಎಂ ಆರೋಪ

ಮಂಗಳೂರು| ಜಿಲ್ಲಾ ಕಚೇರಿಗೆ NIA ಅಕ್ರಮ ಪ್ರವೇಶ ಖಂಡಿಸಿ ಇಂದು ಸಂಜೆ SDPI ಪ್ರತಿಭಟನೆ

ಪೇ ಸಿಎಂ ಅಭಿಯಾನ| ಕಾಂಗ್ರೆಸ್ಸಿನದು ಡರ್ಟಿ ಪಾಲಿಟಿಕ್ಸ್: ಸಿಎಂ ಬೊಮ್ಮಾಯಿ

ಶೇ.40 ಲಂಚ ಯಾರು ಯಾರಿಗೆ ಕೊಟ್ಟಿದ್ದಾರೆಂದು ಸಿದ್ದರಾಮಯ್ಯ ಹೇಳಲಿ: ಸಿಎಂ ಬೊಮ್ಮಾಯಿ

ಪಿಎಸ್‌ಐ ಹಗರಣ| ಎಡಿಜಿಪಿ ಅಮೃತ್ ಪೌಲ್ ನೇಮಕ ಮಾಡಿದ್ದೇ ಬೊಮ್ಮಾಯಿ‌: ಸಿದ್ದರಾಮಯ್ಯ

ಸೆಪ್ಟೆಂಬರ್ ನಲ್ಲಿ ‘ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ' ಪ್ರಾರಂಭ: ಸಿಎಂ ಬೊಮ್ಮಾಯಿ

Updated : 15.08.2022

ಬೆಂಗಳೂರು: ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರಿನ ಶಾಲೆಯನ್ನು ಮಿಲಟರಿ ಶಾಲೆಯಾಗಿ ಪರಿವರ್ತಿಸಲಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಸಂಗೊಳ್ಳಿ ರಾಯಣ್ಣ ಮಿಲಟರಿ ಶಾಲೆ ಉದ್ಘಾಟನೆಯಾಗಲಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದಾರೆ.

ಸೋಮವಾರ  ಕೊಡೇಸ್ ವೃತ್ತದಲ್ಲಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 225ನೆ ಜಯಂತೋತ್ಸವ ಅಂಗವಾಗಿ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ‘ಈ ಶಾಲೆಯ ಪೀಠೋಪಕರಣ ಹಾಗೂ ಇತರ ಸೌಲಭ್ಯಗಳಿಗಾಗಿ 50ಕೋಟಿ ರೂ.ಒದಗಿಸಲಾಗಿದೆ. ಅದಕ್ಕೆ ಬೇಕಾದ 180 ಕೋಟಿ ರೂ.ಹಿಂದಿದ್ದ ಮತ್ತು ಈಗಿನ ಸರಕಾರ ವೆಚ್ಚ ಮಾಡಿದೆ. ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದಿಂದ ನಂದಗಢದ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದು ನುಡಿದರು. 

ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣ: ‘ಸ್ವಾತಂತ್ರ್ಯಾನಂತರದ ಹೋರಾಟಗಾರರನ್ನೂ ನಾವು ಮರೆಯಬಾರದು. ಭಾಷೆಯ ಹೋರಾಟ ಮತ್ತು ರೈತರ ಹೋರಾಟದ ಸ್ಮರಣೆ  ಬೆಂಗಳೂರಿನ ಅಚ್ಚುಕಟ್ಟು ಪ್ರದೇಶದಲ್ಲಿ ಸ್ಮಾರಕಗಳನ್ನು ನಿರ್ಮಿಸಲಾಗುವುದು. ಇದಕ್ಕೆ ಕನ್ನಡಪರ ಹಾಗೂ ರೈತಸಂಘಗಳ ಮಾರ್ಗದರ್ಶನ ಪಡೆಯಲಾಗುವುದು. ದಿಲ್ಲಿಯಲ್ಲಿ ಸಂಗೊಳ್ಳಿರಾಯಣ್ಣನ ಪ್ರತಿಮೆ ಸ್ಥಾಪನೆಗೆ ಈಗಾಗಲೇ ಪತ್ರ ಬರೆಯಲಾಗಿದೆ' ಎಂದು ತಿಳಿಸಿದರು.


© Copyright 2022, All Rights Reserved Kannada One News