ವೀರಶೈವ–ಲಿಂಗಾಯತ: ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ಸಿಎಂಗೆ ಮನವಿ

Related Articles

ಪರೇಶ್ ಮೇಸ್ತ ಪ್ರಕರಣ| ಬಿಜೆಪಿಗರೇ ಜನರೆದುರು ಕ್ಷಮೆ ಕೇಳುವ ಮುಖ ಇದ್ಯಾ: ಬಿ.ಕೆ.ಹರಿಪ್ರಸಾದ್

ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ.6ರಿಂದ 10ಕ್ಕೇರಿಸಿದ ತೆಲಂಗಾಣ ಸರ್ಕಾರ

ಅಡ್ಡ ಮತದಾನ: ಜೆಡಿಎಸ್‌ನ ಇಬ್ಬರು ಶಾಸಕರಿಗೆ ನೋಟಿಸ್‌

ಪರೇಶ್ ಮೇಸ್ತಾ ಕುರಿತ CBI ವರದಿ ಬಿಜೆಪಿ ಮುಖಕ್ಕೆ ಬಡಿದ ತಪರಾಕಿ: ಸಿದ್ದರಾಮಯ್ಯ

ಅಧ್ಯಕ್ಷೀಯ ಚುನಾವಣೆಗೆ ಕಾಂಗ್ರೆಸ್‌ನಿಂದ ಮಾರ್ಗಸೂಚಿ ಬಿಡುಗಡೆ

SDPI ಯನ್ನು ನಿಷೇಧಿಸಲು ಪೂರಕವಾದ ಯಾವುದೇ ಸಾಕ್ಷ್ಯ ಲಭ್ಯವಾಗಿಲ್ಲ: ಚುನಾವಣಾ ಆಯೋಗ

ಎರಡಕ್ಕಿಂತ ಅಧಿಕ ಮಕ್ಕಳಿರುವವರು ಪಾಕಿಸ್ತಾನಕ್ಕೆ ಹೋಗಲಿ: ಯತ್ನಾಳ ವಿವಾದಾತ್ಮಕ ಹೇಳಿಕೆ

ರಾಹುಲ್ ಗಾಂಧಿ ಭದ್ರತೆಗೆ ಒಂದು ಹಗ್ಗ ಕೊಡಿಸಲೂ ಈ ಸರ್ಕಾರಕ್ಕೆ ಗತಿ ಇಲ್ಲವಾ?: ಬಿಜೆಪಿ ವಿರುದ್ಧ ಖರ್ಗೆ ಆಕ್ರೋಶ

ಮಹಾ ಸಿಎಂ ಶಿಂದೆಗೆ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ: ಫಡಣವೀಸ್

ಅಕ್ರಮ ಅಕ್ಕಿ ಸಾಗಾಟ ಪ್ರಕರಣ: ಬಿಜೆಪಿ ಮುಖಂಡ ಗಡಿಪಾರು

ವೀರಶೈವ–ಲಿಂಗಾಯತ: ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ಸಿಎಂಗೆ ಮನವಿ

Updated : 21.09.2022

ಬೆಂಗಳೂರು: ‘ಎಲ್ಲ ಉಪ ಪಂಗಡಗಳನ್ನೂ ಒಳಗೊಂಡಂತೆ ವೀರಶೈವ– ಲಿಂಗಾಯತ ಸಮುದಾಯವನ್ನು ಕೇಂದ್ರ ಸರ್ಕಾರದ ಇತರೇ ಹಿಂದುಳಿದ ವರ್ಗಗಳ (ಒಬಿಸಿ) ಪಟ್ಟಿಯಲ್ಲಿ ಸೇರಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು’ ಎಂದು ಆಗ್ರಹಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಖಿಲ ಭಾರತ ವೀರಶೈವ ಮಹಾಸಭಾ ಮನವಿ ಸಲ್ಲಿಸಿದೆ.

ಆದಷ್ಟು ಬೇಗ ಶಿಫಾರಸು ಮಾಡಿ ಸಮುದಾಯಕ್ಕೆ ಸೌಲಭ್ಯ ದೊರೆಯುವಂತೆ ಮಾಡದಿದ್ದರೆ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದೂ ಮಹಾಸಭಾ ಎಚ್ಚರಿಕೆ ನೀಡಿದೆ.

‘ರಾಜ್ಯದಲ್ಲಿ 60 ವರ್ಷಗಳಿಂದ ವೀರಶೈವ– ಲಿಂಗಾಯತ ಸಮುದಾಯವನ್ನು ಇತರೇ ಹಿಂದುಳಿದ ವರ್ಗ ಎಂದು ಪರಿಗಣಿಸಿದ್ದರೂ ಕೇಂದ್ರ ಸರ್ಕಾರದ ಒಬಿಸಿ ಪಟ್ಟಿಯಲ್ಲಿ ಸೇರಿಸಿಲ್ಲ. ಇದರಿಂದಾಗಿ ಕೇಂದ್ರ ಸರ್ಕಾರದಿಂದ ದೊರೆಯಬಹುದಾದ ಸೌಕರ್ಯಗಳಿಂದ ಸಮಾಜ ವಂಚಿತವಾಗಿದೆ. ಇತರ ಎಲ್ಲ ರಾಜ್ಯಗಳಲ್ಲಿಯೂ ವೀರಶೈವ– ಲಿಂಗಾಯತರು ರಾಜ್ಯ ಸರ್ಕಾರಗಳ ಇತರ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ  ಸೇರ್ಪಡೆಯಾಗಿದೆ. ಆದರೆ, ರಾಜ್ಯದ ಸಮುದಾಯ ಕೇಂದ್ರ ಪಟ್ಟಿಯಲ್ಲಿ ಸೇರಿಲ್ಲ’ ಎಂದೂ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

‘ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿರುವ ವೀರಶೈವ–ಲಿಂಗಾಯತ 16 ಉಪ ಪಂಗಡಗಳು ಮಾತ್ರದ ಕೇಂದ್ರದ ಒಬಿಸಿ ಪಟ್ಟಿಯಲ್ಲಿದ್ದು ಸೌಲಭ್ಯ ಪಡೆಯುತ್ತಿವೆ. ಜನಸಂಖ್ಯೆಯ ದೃಷ್ಟಿಯಿಂದ ಇವು ಅತಿ ಸಣ್ಣ ಉಪ ಪಂಗಡಗಳು. ಉಳಿದ ಬಹುತೇಕ ಉಪ ಪಂಗಡಗಳು ಆ ಪಟ್ಟಿಯಿಂದ ಹೊರಗುಳಿದಿರುವುದರಿಂದ ಇಡೀ ಸಮಾಜಕ್ಕೆ ಸೌಲಭ್ಯ ಸಿಗುತ್ತಿಲ್ಲ’ ಎಂದೂ ಮನವಿಯಲ್ಲಿ ಮಹಾಸಭಾ ಹೇಳಿದೆ.

© Copyright 2022, All Rights Reserved Kannada One News