ರಮೇಶ್‌ ಜಾರಕಿಹೊಳಿ ಬಗ್ಗೆ ಸಿಎಂ ಇಬ್ರಾಹಿಂ ಹೇಳಿದ್ದೇನು? ಜೆಡಿಎಸ್‌ ಸೇರ್ಪಡೆಯಾಗ್ತರಾ ಜಾರಕಿಹೊಳಿ?

ರಮೇಶ್‌ ಜಾರಕಿಹೊಳಿ ಬಗ್ಗೆ ಸಿಎಂ ಇಬ್ರಾಹಿಂ ಹೇಳಿದ್ದೇನು? ಜೆಡಿಎಸ್‌ ಸೇರ್ಪಡೆಯಾಗ್ತರಾ ಜಾರಕಿಹೊಳಿ?

Updated : 20.11.2022

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಗ್ಗೆ ವೈಯಕ್ತಿಕವಾಗಿ ನಮಗೆ ಪ್ರೀತಿ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ‌ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ರಮೇಶ್ ಜಾರಕಿಹೊಳಿ ಜೆಡಿಎಸ್ ಸೇರ್ಪಡೆ ಬಗ್ಗೆ ಊಹಾಪೋಹ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ರಮೇಶ ಜಾರಕಿಹೊಳಿ ಬೆಳಗಾವಿ ಭಾಗದ ಪ್ರಬಲ ಹಿಂದುಳಿದ ನಾಯಕ. ಅವರನ್ನು ಪಕ್ಷಕ್ಕೆ ಸ್ವಾಗತ ಮಾಡಿದ್ರು ತಪ್ಪು, ಬರಬೇಡ ಅಂದ್ರೂ ತಪ್ಪಾಗುತ್ತದೆ. ಆದರೆ ಈ ಸಂಬಂಧ ರಮೇಶ್ ಜಾರಕಿಹೊಳಿ ಜೊತೆಗೆ ಮಾತುಕತೆ ಆಗಿಲ್ಲ. ಫೋನ್‌ನಲ್ಲಿ ಹಲವು ಸಲ ಮಾತನಾಡಿದ್ದೇವೆ. ಆದರೆ ಜೆಡಿಎಸ್ ಸೇರ್ಪಡೆ ಸಂಬಂಧ ಯಾವುದೇ ಚರ್ಚೆ ಆಗಿಲ್ಲ ಎಂದಿದ್ದಾರೆ. 

© Copyright 2022, All Rights Reserved Kannada One News