ಕಾಮನ್ ವೆಲ್ತ್ ಮುಂದುವರೆದ ಭಾರತದ ಪದಕ ಭೇಟೆ: ಕುಸ್ತಿಯಲ್ಲಿ ನವೀನ್, ವಿನೇಶ್ ಫೋಗಟ್ ಗೆ ಚಿನ್ನದ ಪದಕ ಪೂಜಾ ಗೆಹ್ಲೋಟ್ ಗೆ ಕಂಚಿನ ಪದಕ

Related Articles

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

ಮಹಿಳಾ ಏಕದಿನ ಕ್ರಿಕೆಟ್ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಕಾಮನ್ ವೆಲ್ತ್ ಮುಂದುವರೆದ ಭಾರತದ ಪದಕ ಭೇಟೆ: ಕುಸ್ತಿಯಲ್ಲಿ ನವೀನ್, ವಿನೇಶ್ ಫೋಗಟ್ ಗೆ ಚಿನ್ನದ ಪದಕ ಪೂಜಾ ಗೆಹ್ಲೋಟ್ ಗೆ ಕಂಚಿನ ಪದಕ

Updated : 07.08.2022

ಬರ್ಮಿಂಗ್ ಹ್ಯಾಮ್: ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಭಾರತದ ಪದಕ ಭೇಟಿ ಮುಂದುವರೆದಿದೆ. ಅದರಲ್ಲೂ ಕುಸ್ತಿಯಲ್ಲಿ ದೇಶಕ್ಕೆ ಹೆಚ್ಚಿನ ಪದಕಗಳು ಬರುತ್ತಿವೆ. ಭಾರತದ ಕುಸ್ತಿಪಟುಗಳಾದ ನವೀನ್, ವಿನೇಶ್ ಫೋಗಟ್ ಚಿನ್ನದ ಪದಕ ಗೆದಿದ್ದಾರೆ. ಇನ್ನೂ ಪೂಜಾ ಗೆಹ್ಲೋಟ್  ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡಿದ್ದಾರೆ.

ಶನಿವಾರ ನಡೆದ  ಪುರುಷರ 74 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ  ಭಾರತದ ಕುಸ್ತಿಪಟು ನವೀನ್  ಪಾಕಿಸ್ತಾನದ ಮೊಹಮ್ಮದ್ ಶರೀಫ್ ತಾಹಿರ್  ಅವರನ್ನು 9-0 ಅಂತರದಿಂದ ಸೋಲಿಸಿ ಚಿನ್ನದ ಪದಕವನ್ನು ತಮ್ಮ ಮುಡಿಗೇರಿಸಿಕೊಂಡರು.

ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಮತ್ತೆ ಇತಿಹಾಸ ಸೃಷ್ಟಿಸಿದರು. ಮಹಿಳೆಯರ 53 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ತಮ್ಮ ಎದುರಾಳಿಯನ್ನು ಸೋಲಿಸಿ ಚಿನ್ನದ ಪದಕ್ಕೆ ಮುತ್ತಿಟ್ಟರು. ಕಾಮನ್​ವೆಲ್ತ್ ಹಾಗೂ ಏಷ್ಯನ್ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಕ್ರೀಡಾಪಟುವಾಗಿ ಹೊರಹೊಮ್ಮಿರುವ ಇವರು, ಕಾಮನ್​ವೆಲ್ತ್​ ಗೇಮ್ಸ್​ನಲ್ಲಿ ಸತತ ಮೂರನೇ ಸಲ ಸ್ವರ್ಣ ಪದಕ ಗಳಿಸಿರುವ ಮೊದಲ ಮಹಿಳಾ ಕುಸ್ತಿಪಟು ಆಗಿದ್ದಾರೆ.

ಈ ಮಧ್ಯೆ ಮಹಿಳಾ ಕುಸ್ತಿಪಟು ಪೂಜಾ ಗೆಹ್ಲೋಟ್ 50 ಕೆಜಿ ತೂಕದ ಮಹಿಳೆಯರ ವಿಭಾಗದಲ್ಲಿ ಕಂಚಿನ ಪದಕಕ್ಕೆ ತೃಪ್ತಿಪಟ್ಟುಕೊಂಡರು.

© Copyright 2022, All Rights Reserved Kannada One News