ದೇಶದಲ್ಲಿ 20 ಸಾವಿರಕ್ಕೂ ಅಧಿಕ ಹೊಸ ಕೋವಿಡ್‌ ಪ್ರಕರಣ ಪತ್ತೆ

ದೇಶದಲ್ಲಿ 20 ಸಾವಿರಕ್ಕೂ ಅಧಿಕ ಹೊಸ ಕೋವಿಡ್‌ ಪ್ರಕರಣ ಪತ್ತೆ

Updated : 05.08.2022

ನವದೆಹಲಿ: ಶುಕ್ರವಾರ ಬೆಳಗ್ಗೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಭಾರತ 20,551 ಹೊಸ ಕೋವಿಡ್‌ ಪ್ರಕರಣಗಳನ್ನು ಕಂಡಿದೆ. ಇದರೊಂದಿಗೆ ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 4,41,07,588ಕ್ಕೆ ತಲುಪಿದೆ. ಇದೇ ಅವಧಿಯಲ್ಲಿ 70 ಮಂದಿ ಸೋಂಕಿನಿಂದ ಮೃತಪಟ್ಟಿದ್ದು, ಸಾವಿನ ಸಂಖ್ಯೆ 5,26,600ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿಅಂಶಗಳ ಪ್ರಕಾರ ದೇಶದಲ್ಲಿ 1,35,364 ಸಕ್ರಿಯ ಪ್ರಕರಣಗಳು ಇವೆ.

ದೇಶದಲ್ಲಿ ಕೊರೊನಾ ವೈರಸ್‌ನ ದೈನಂದಿನ ಪಾಸಿಟಿವಿಟಿ ದರ ಶೇಕಡ 5.14ರಷ್ಟು ಇದೆ.

ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ 205.59 ಕೋಟಿ ಕೋವಿಡ್ ಲಸಿಕೆಗಳನ್ನು ನೀಡಲಾಗಿದೆ.


© Copyright 2022, All Rights Reserved Kannada One News