Flash News:
ಭಾರತದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆ

ಭಾರತದಲ್ಲಿ ಕೋವಿಡ್ ಪ್ರಕರಣಗಳಲ್ಲಿ ಏರಿಕೆ

Updated : 05.10.2022

ಬೆಂಗಳೂರು: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 2,768 ಕೋವಿಡ್ ಹೊಸ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದೇ ಅವಧಿಯಲ್ಲಿ 17 ಜನರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ. ದೇಶದಲ್ಲಿ ಈಗ 33,318 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ಕೋವಿಡ್ ಸಂಬಂಧಿತ ಸಾವಿನ ಸಂಖ್ಯೆ 5,28,733ಕ್ಕೆ ತಲುಪಿದೆ.

ಮಂಗಳವಾರ ದೇಶದಲ್ಲಿ 133 ದಿನಗಳಲ್ಲೇ ಅತಿ ಕಡಿಮೆ ಅಂದರೆ, 1,968 ಕೋವಿಡ್ ಪ್ರಕರಣ ದಾಖಲಾಗಿತ್ತು.

ಒಟ್ಟಾರೆಯಾಗಿ ಭಾರತದಲ್ಲಿ ಈವರೆಗೆ 218 ಕೋಟಿಗೂ ಅಧಿಕ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

© Copyright 2022, All Rights Reserved Kannada One News