ಕೋವಿಡ್: ಹೊಸದಾಗಿ 1,946 ಪ್ರಕರಣ ದೃಢ, 10 ಸಾವು

ಕೋವಿಡ್: ಹೊಸದಾಗಿ 1,946 ಪ್ರಕರಣ ದೃಢ, 10 ಸಾವು

Updated : 19.10.2022

ನವದೆಹಲಿ: ದೇಶದಾದ್ಯಂತ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆಗಳಲ್ಲಿ ಹೊಸದಾಗಿ 1,946 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, 10 ಮಂದಿ ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಕ್ರಿಯ ಪ್ರಕರಣಗಳ ಸಂಖ್ಯೆ 25,968ಕ್ಕೆ ಏರಿಕೆಯಾಗಿದೆ. ಈವರೆಗೆ ಒಟ್ಟು 4,40,79,485 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದುವರೆಗೆ 4,46,34,376 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಒಟ್ಟು 5,28,923 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 0.75 ಮತ್ತು ವಾರದ ದೃಢ ಪ್ರಮಾಣ ಶೇ 1.01 ಆಗಿದೆ. ಒಟ್ಟು ಸೋಂಕಿತರ ಪೈಕಿ ಶೇ 0.06 ಸಕ್ರಿಯ ಪ್ರಕರಣಗಳಿವೆ. ಹಾಗೆಯೇ ರಾಷ್ಟ್ರೀಯ ಕೋವಿಡ್ ಚೇತರಿಕೆ ಪ್ರಮಾಣ ಶೇ 98.76 ಆಗಿದೆ.

ದೇಶದಲ್ಲಿ ಈವರೆಗೆ 219.41 ಕೋಟಿ ಕೋವಿಡ್ ಲಸಿಕೆ ಡೋಸ್ ವಿತರಿಸಲಾಗಿದೆ.

© Copyright 2022, All Rights Reserved Kannada One News