ಟಿ20 ಕ್ರಿಕೆಟ್: ಮೊದಲ ಪಂದ್ಯ ಇಂದು

Related Articles

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‍: ಭಾರತದ ಬಜರಂಗ್ ಪೂನಿಯಾಗೆ ಕಂಚಿನ ಪದಕ

ಮಹಿಳಾ ಏಕದಿನ ಕ್ರಿಕೆಟ್ : ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಗೆಲುವು

ಟಿ20 ಕ್ರಿಕೆಟ್: ಮೊದಲ ಪಂದ್ಯ ಇಂದು

Updated : 29.07.2022

ಬರ್ಮಿಂಗ್‌ಹ್ಯಾಮ್‌: 24 ವರ್ಷಗಳ ಬಳಿಕ ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ಕ್ರಿಕೆಟ್‌ ಮರುಸೇರ್ಪೆಡೆಯಾಗಿದ್ದು, ಭಾರತ ಮಹಿಳಾ ತಂಡವು ಟಿ20 ಮಾದರಿಯ ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ಸವಾಲು ಎದುರಿಸಲಿದೆ.

ಎಜ್‌ಬಾಸ್ಟನ್‌ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆಯುವ ಹಣಾಹಣಿಯಲ್ಲಿ ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಗೆಲುವಿನ ಭರವಸೆಯಲ್ಲಿದೆ.

1998ರ ಕ್ವಾಲಾಲಂಪುರ ಕೂಟದಲ್ಲಿ ಪುರುಷರ 50 ಓವರ್‌ಗಳ ಪಂದ್ಯಗಳನ್ನು ಆಡಿಸಲಾಗಿತ್ತು. ಆ ಬಳಿಕ ಕ್ರಿಕೆಟ್‌ ನಡೆದಿರಲಿಲ್ಲ.

ಭಾರತ ತಂಡವು ಇತ್ತೀಚೆಗೆ ಶ್ರೀಲಂಕಾ ಎದುರಿನ ಟಿ20 ಸರಣಿಯನ್ನು 2–1ರಿಂದ ಗೆದ್ದುಕೊಂಡು ಆತ್ಮವಿಶ್ವಾಸದಲ್ಲಿದೆ. ದ್ವೀಪರಾಷ್ಟ್ರದ ಎದುರಿನ ಮೂರು ಪಂದ್ಯಗಳ ಏಕದಿನ ಸರಣಿಯನ್ನೂ ಹರ್ಮನ್‌ಪ್ರೀತ್ ಬಳಕ 3–0ಯಿಂದ ಕ್ಲೀನ್‌ಸ್ವೀಪ್ ಮಾಡಿತ್ತು. ಅದೇ ಲಯದೊಂದಿಗೆ ಆಸ್ಟ್ರೇಲಿಯಾ ತಂಡವನ್ನು ಮಣಿಸುವ ಭರವಸೆಯಲ್ಲಿದೆ.

ಜೆಮಿಮಾ ರಾಡ್ರಿಗಸ್‌, ಶೆಫಾಲಿ ವರ್ಮಾ ಅವರನ್ನೊಳಗೊಂಡಿರುವ ಬಲಿಷ್ಠ ಬ್ಯಾಟಿಂಗ್ ಪಡೆಯಿದೆ. ಪೂನಂ ಯಾದವ್‌ ಮತ್ತು ರಾಧಾ ಯಾದವ್‌ ಬೌಲಿಂಗ್‌ನಲ್ಲಿ ಪರಿಣಾಮಕಾರಿ ಎನಿಸಬಲ್ಲರು.

ಮೆಗ್‌ ಲ್ಯಾನಿಂಗ್ ನಾಯಕತ್ವದ ಆಸ್ಟ್ರೇಲಿಯಾ ಕೂಡ ಬಲಿಷ್ಠವಾಗಿದ್ದು, ಹರ್ಮನ್‌ಪ್ರೀತ್ ಪಡೆಗೆ ಸೋಲುಣಿಸುವ ಲೆಕ್ಕಾಚಾರದಲ್ಲಿದೆ.


© Copyright 2022, All Rights Reserved Kannada One News