ಅತ್ಯಾಚಾರ ಆರೋಪ: ದನುಷ್ಕಾ ಗುಣತಿಲಕರನ್ನು ಅಮಾನತುಗೊಳಿಸಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

Related Articles

ಟಿ-20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ಭಾರತ ಕ್ರಿಕೆಟ್ ತಂಡವನ್ನು ಚೋಕರ್ಸ್ ಎಂದ ಕಪಿಲ್ ದೇವ್

ಟೀ20 ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ: ಫೈನಲ್‌ಗೆ ತಲುಪಿದ ಇಂಗ್ಲೆಂಡ್-ಪಾಕ್!

ಟಿ-20 ವಿಶ್ವಕಪನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು, ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ!

ಐಪಿಎಸ್ ಅಧಿಕಾರಿ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಎಂಎಸ್ ಧೋನಿ

‘ಖೇಲ್ ರತ್ನ’ ಪ್ರಶಸ್ತಿಗೆ ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಹೆಸರು ಶಿಫಾರಸು

ಏಷ್ಯಾ ಸ್ಕ್ವಾಷ್‌ ಚಾಂಪಿಯನ್‌ಷಿಪ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಭಾರತ ತಂಡ

ಬೈಜುಸ್ ನ ಜಾಗತಿಕ ರಾಯಭಾರಿಯಾಗಿ ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ನೇಮಕ

ಟಿ20 ವಿಶ್ವಕಪ್‌| ಟಾಸ್‌ ಗೆದ್ದ ಬಾಂಗ್ಲಾದೇಶ: ಭಾರತ ಬ್ಯಾಟಿಂಗ್

ಟಿ20 ವಿಶ್ವಕಪ್ ನಲ್ಲಿ ಜಿಂಬಾಬ್ವೆ ವಿರುದ್ಧ 3 ರನ್ ಅಂತರದ ಜಯ ಸಾಧಿಸಿದ ಬಾಂಗ್ಲಾದೇಶ

ಪುರುಷ, ಮಹಿಳಾ ಕ್ರಿಕೆಟಿಗರಿಗೆ ಸಮಾನ ಪಂದ್ಯ ವೇತನ: ಬಿಸಿಸಿಐ ಘೋಷಣೆ

ಅತ್ಯಾಚಾರ ಆರೋಪ: ದನುಷ್ಕಾ ಗುಣತಿಲಕರನ್ನು ಅಮಾನತುಗೊಳಿಸಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

Updated : 07.11.2022

ಕೊಲಂಬೊ: ರಾಷ್ಟ್ರೀಯ ಕ್ರಿಕೆಟ್ ತಂಡದ  ಆಟಗಾರ ದನುಷ್ಕಾ ಗುಣತಿಲಕರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ ಅಮಾನತುಗೊಳಿಸಲು ದೇಶದ ಕ್ರಿಕೆಟ್ ಮಂಡಳಿಯ ಕಾರ್ಯಕಾರಿ ಸಮಿತಿ ನಿರ್ಧರಿಸಿದೆ ಎಂದು ಶ್ರೀಲಂಕಾ ಕ್ರಿಕೆಟ್ ಸೋಮವಾರ ದೃಢಪಡಿಸಿದೆ.

ಆಸ್ಟ್ರೇಲಿಯಾದಲ್ಲಿ ಸ್ಟಾರ್ ಬ್ಯಾಟರ್ ಅನ್ನು ಬಂಧಿಸಿ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಲಾಗಿದೆ ಎಂಬ ಮಾಹಿತಿ ಲಭಿಸಿದ  ಹಿನ್ನೆಲೆಯಲ್ಲಿ ಗುಣತಿಲಕರನ್ನು ಯಾವುದೇ ಆಯ್ಕೆಗಳಿಗೆ ಪರಿಗಣಿಸುವುದಿಲ್ಲ ಎಂದು ಕ್ರಿಕೆಟ್ ಮಂಡಳಿ ತಿಳಿಸಿದೆ.

"ಇದಲ್ಲದೆ ಶ್ರೀಲಂಕಾ ಕ್ರಿಕೆಟ್ ಆಪಾದಿತ ಅಪರಾಧದ ತನಿಖೆಯನ್ನು ತ್ವರಿತವಾಗಿ ಕೈಗೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಹಾಗೂ  ಆಸ್ಟ್ರೇಲಿಯಾದಲ್ಲಿ ನ್ಯಾಯಾಲಯದ ಪ್ರಕರಣದ ಮುಕ್ತಾಯದ ನಂತರ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಆಪಾದನೆ ಎದುರಿಸುತ್ತಿರುವ ಆಟಗಾರನಿಗೆ ದಂಡ ವಿಧಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ" ಎಂದು ಅಧಿಕೃತ ಮಾಧ್ಯಮ ಪ್ರಕಟಣೆಯಲ್ಲಿ ಕ್ರಿಕೆಟ್ ಮಂಡಳಿ ತಿಳಿಸಿದೆ.

ಟ್ವೆಂಟಿ-20 ವಿಶ್ವಕಪ್‌ನಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡ ಇಂಗ್ಲೆಂಡ್ ವಿರುದ್ಧ ಸೋತ ಕೆಲವೇ ಗಂಟೆಗಳ ನಂತರ ಆಸ್ಟ್ರೇಲಿಯಾ ಪೊಲೀಸರು ರವಿವಾರ ಗುಣತಿಲಕ ಅವರನ್ನು ಬಂಧಿಸಿ ಅತ್ಯಾಚಾರ ಆರೋಪ ಹೊರಿಸಿದ್ದರು

© Copyright 2022, All Rights Reserved Kannada One News