ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್ ಟೂರ್ನಿ; ಮೊದಲ ಸುತ್ತಿನಲ್ಲೇ ಟೂರ್ನಿಯಿಂದ ಹೊರನಡೆದ ಸೈನಾ ನೆಹ್ವಾಲ್‌

Related Articles

ಟಿ-20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ಭಾರತ ಕ್ರಿಕೆಟ್ ತಂಡವನ್ನು ಚೋಕರ್ಸ್ ಎಂದ ಕಪಿಲ್ ದೇವ್

ಟೀ20 ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ: ಫೈನಲ್‌ಗೆ ತಲುಪಿದ ಇಂಗ್ಲೆಂಡ್-ಪಾಕ್!

ಅತ್ಯಾಚಾರ ಆರೋಪ: ದನುಷ್ಕಾ ಗುಣತಿಲಕರನ್ನು ಅಮಾನತುಗೊಳಿಸಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

ಟಿ-20 ವಿಶ್ವಕಪನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು, ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ!

ಐಪಿಎಸ್ ಅಧಿಕಾರಿ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಎಂಎಸ್ ಧೋನಿ

‘ಖೇಲ್ ರತ್ನ’ ಪ್ರಶಸ್ತಿಗೆ ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಹೆಸರು ಶಿಫಾರಸು

ಏಷ್ಯಾ ಸ್ಕ್ವಾಷ್‌ ಚಾಂಪಿಯನ್‌ಷಿಪ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಭಾರತ ತಂಡ

ಬೈಜುಸ್ ನ ಜಾಗತಿಕ ರಾಯಭಾರಿಯಾಗಿ ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ನೇಮಕ

ಟಿ20 ವಿಶ್ವಕಪ್‌| ಟಾಸ್‌ ಗೆದ್ದ ಬಾಂಗ್ಲಾದೇಶ: ಭಾರತ ಬ್ಯಾಟಿಂಗ್

ಟಿ20 ವಿಶ್ವಕಪ್ ನಲ್ಲಿ ಜಿಂಬಾಬ್ವೆ ವಿರುದ್ಧ 3 ರನ್ ಅಂತರದ ಜಯ ಸಾಧಿಸಿದ ಬಾಂಗ್ಲಾದೇಶ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್ ಟೂರ್ನಿ; ಮೊದಲ ಸುತ್ತಿನಲ್ಲೇ ಟೂರ್ನಿಯಿಂದ ಹೊರನಡೆದ ಸೈನಾ ನೆಹ್ವಾಲ್‌

Updated : 20.10.2022

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಭಾರತದ ಲಕ್ಷ್ಯ ಸೇನ್‌ ಮತ್ತು ಎಚ್‌ ಎಸ್‌ ಪ್ರಣಯ್‌ ಪ್ರೀ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ. ಆದರೆ ಮಹಿಳೆಯರ ಸಿಂಗಲ್ಸ್‌ ವಿಭಾಗದಲ್ಲಿ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್‌ ಮೊದಲ ಸುತ್ತಿನಲ್ಲೇ ಮುಗ್ಗರಿಸಿ, ಟೂರ್ನಿಯಿಂದ ಹೊರನಡೆದಿದ್ದಾರೆ.

ಬುಧವಾರ ನಡೆದ ಪಂದ್ಯದಲ್ಲಿ ಪ್ರಣಯ್, ಚೀನಾದ ಝಾವೊ ಜುನ್ ಪೆಂಗ್ ವಿರುದ್ಧ 21- 13 22- 20 ಅಂತರದಲ್ಲಿ ಜಯ ಗಳಿಸಿದರು. 43 ನಿಮಿಷಗಳಲ್ಲೇ ಈ ಪಂದ್ಯ ಕೊನೆಗೊಂಡಿತು. ಈ ವರ್ಷದ ಆರಂಭದಲ್ಲಿ ನಡೆದಿದ್ದ ಇಂಡೋನೇಷ್ಯಾ ಓಪನ್ ಮತ್ತು ಆಗಸ್ಟ್‌ನಲ್ಲಿ ನಡೆದಿದ್ದ ವಿಶ್ವ ಚಾಂಪಿಯನ್‌ಶಿಪ್‌ ಟೂರ್ನಿಯಲ್ಲಿ ಝಾವೊ ಜುನ್ ಪೆಂಗ್ ವಿರುದ್ಧ ವಿರುದ್ಧ ಪ್ರಣಯ್ ಸೋತಿದ್ದರು.

ಇನ್ನೊಂದು ಪಂದ್ಯದಲ್ಲಿ  ಲಕ್ಷ್ಯ ಸೇನ್‌ 21– 16, 21– 12 ಅಂಕಗಳ ಅಂತರದಲ್ಲಿ ಇಂಡೊನೇಷ್ಯಾದ ಆಂಥೋನಿ ಸಿನಿಸುಕ ಗಿಂಟಿಂಗ್‌ ವಿರುದ್ಧ ಗೆದ್ದರು. ಕೇವಲ 39 ನಿಮಿಷಗಳಲ್ಲಿ ಮುಕ್ತಾಯವಾದ ಪಂದ್ಯದಲ್ಲಿ ಸೇನ್‌ ಶಿಸ್ತಿ ಆಟದ ಮೂಲಕ ಗಮನ ಸೆಳೆದರು. ಜರ್ಮನ್‌ ಓಪನ್‌ ಮತ್ತು ಥಾಮಸ್‌ ಕಪ್‌ ಟೂರ್ನಿಯಲ್ಲೂ ಲಕ್ಷ್ಯ ಸೇನ್‌, ಗಿಂಟಿಂಗ್‌ಗೆ ಸೋಲುಣಿಸಿದ್ದರು.

ಇದರೊಂದಿಗೆ ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್ ಟೂರ್ನಿಯ ಪುರುಷರ ಸಿಂಗಲ್ಸ್ ವಿಭಾಗದ ಮೊದಲ ಪ್ರೀ ಕ್ವಾರ್ಟರ್‌ ಫೈನಲ್‌ ಪಂದ್ಯ ಭಾರತೀಯರ ನಡುವೆಯೇ ನಡೆಯಲಿದೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ 2012ರ ಒಲಿಂಪಿಕ್ಸ್ ಕಂಚಿನ ಪದಕ ವಿಜೇತೆ ಸೈನಾ 48 ನಿಮಿಷಗಳ ಹಣಾಹಣಿಯಲ್ಲಿ ಚೀನಾದ ಜಾಂಗ್ ಯಿ ಮಾನ್ ವಿರುದ್ಧ 17- 21 21- 19 11- 21 ಅಂತರದಲ್ಲಿ ಸೋತು ಮೊದಲ ಸುತ್ತಿನಲ್ಲೇ ನಿರ್ಗಮಿಸಿದರು. ಇದರೊಂದಿಗೆ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ನಲ್ಲಿ ಭಾರತದ ಸವಾಲು ಅಂತ್ಯ ಕಂಡಿದೆ. ಫೆಬ್ರವರಿಯಲ್ಲಿ ನಡೆದಿದ್ದ ಮಕಾವು ಓಪನ್‌ನಲ್ಲಿ ಇದೇ ಎದುರಾಳಿಗೆ ಸೈನಾ ಶರಣಾಗಿದ್ದರು.


© Copyright 2022, All Rights Reserved Kannada One News