ದುಲೀಪ್‌ ಟ್ರೋಫಿ ಸೆಮಿಫೈನಲ್ ಪಂದ್ಯದ ವೇಳೆ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ತಲೆಗೆ ಪೆಟ್ಟು: ಮೂರನೇ ದಿನವೂ ಅಂಗಣಕ್ಕಿಳಿಯದ ಅಯ್ಯರ್

Related Articles

ಟಿ-20 ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ

ಇಂಡೋನೇಷ್ಯಾ ಫುಟ್‌ಬಾಲ್ ಪಂದ್ಯದ ವೇಳೆ ಹಿಂಸಾಚಾರ: ಕನಿಷ್ಠ 127 ಮಂದಿ ಸಾವು

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

ದುಲೀಪ್‌ ಟ್ರೋಫಿ ಸೆಮಿಫೈನಲ್ ಪಂದ್ಯದ ವೇಳೆ ಆಲ್ರೌಂಡರ್ ವೆಂಕಟೇಶ್ ಅಯ್ಯರ್ ತಲೆಗೆ ಪೆಟ್ಟು: ಮೂರನೇ ದಿನವೂ ಅಂಗಣಕ್ಕಿಳಿಯದ ಅಯ್ಯರ್

Updated : 17.09.2022

ಕೊಯಮತ್ತೂರು: ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆಯುತ್ತಿರುವ ದುಲೀಪ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ ಪಂದ್ಯದಲ್ಲಿ ಕೇಂದ್ರ ವಲಯ ತಂಡದ ಆಲ್ರೌಂಡರ್‌ ವೆಂಕಟೇಶ್ ಅಯ್ಯರ್‌ ಅವರ ತಲೆಗೆ ಚೆಂಡು ಬಡಿದಿದೆ. ಹೀಗಾಗಿ ಅವರು ಮೂರನೇ ದಿನ ಮೈದಾನಕ್ಕೆ ಇಳಿದಿಲ್ಲ. ಅವರ ಬದಲು ಅಶೋಕ್‌ ಮನೇರಿಯಾ ಫೀಲ್ಡಿಂಗ್‌ ಮಾಡುತ್ತಿದ್ದಾರೆ.

ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆಯುತ್ತಿರುವ ಪಂದ್ಯದ ಎರಡನೇ ದಿನದಾಟದ ವೇಳೆ ಪಶ್ಚಿಮ ವಲಯ ತಂಡದ ಬೌಲರ್‌ ಚಿಂತನ್‌ ಗಜ ಅವರು ಥ್ರೋ ಮಾಡಿದ ಚೆಂಡು ಅಯ್ಯರ್‌ ತಲೆಗೆ ಬಡಿದಿತ್ತು. ಅವರನ್ನು ಕರೆದೊಯ್ಯಲು ಆಂಬುಲೆನ್ಸ್‌ಅನ್ನು ಮೈದಾನದ ಮಧ್ಯಕ್ಕೆ ತರಲಾಗಿತ್ತು. ಆದರೆ ಅಲ್ಪ ಚೇತರಿಸಿಕೊಂಡ ಅಯ್ಯರ್‌, ನಡೆದುಕೊಂಡೇ ಅಂಗಳದಿಂದ ಹೊರಬಂದರು. ಅವರು ಮತ್ತೆ ಬ್ಯಾಟ್‌ ಮಾಡಲು ಬಂದರಾದರೂ 14 ರನ್‌ ಗಳಿಸಿ ಔಟಾದರು. ಘಟನೆ ಕುರಿತು ಮಾತನಾಡಿರುವ ತಮಿಳುನಾಡು ಕ್ರಿಕೆಟ್‌ ಸಂಸ್ಥೆಯ (ಟಿಎನ್‌ಸಿಎ) ಅಧಿಕಾರಿಯೊಬ್ಬರು, 'ಅವರ (ವೆಂಕಟೇಶ್‌ ಅಯ್ಯರ್‌) ಜೊತೆ ಮಾತನಾಡಿದ್ದೇವೆ. ಸದ್ಯ ಆರೋಗ್ಯವಾಗಿದ್ದಾರೆ' ಎಂದು ತಿಳಿಸಿದ್ದಾರೆ.

ಪಂದ್ಯದ ಮೊದಲ ಇನಿಂಗ್ಸ್‌ನಲ್ಲಿ ಪಶ್ಚಿಮ ವಲಯ ತಂಡ 257 ರನ್‌ ಗಳಿಸಿ ಆಲೌಟ್‌ ಆಗಿತ್ತು. ಇದಕ್ಕುತ್ತರವಾಗಿ ಕೇಂದ್ರ ವಲಯ 128 ರನ್‌ ಗಳಿಗೆ ಸರ್ವಪತನ ಕಂಡಿತ್ತು. ಸದ್ಯ ಎರಡನೇ ಇನಿಂಗ್ಸ್‌ ಆರಂಭಿಸಿರುವ ಪಶ್ಚಿಮ ವಲಯ ಪೃಥ್ವಿ ಶಾ (142) ಶತಕದ ಬಲದಿಂದ 7 ವಿಕೆಟ್ ನಷ್ಟಕ್ಕೆ 336 ರನ್ ಕಲೆಹಾಕಿದೆ. ಇದರೊಂದಿಗೆ 465 ರನ್‌ಗಳ ಮುನ್ನಡೆ ಸಾಧಿಸಿದೆ.ಪಶ್ಚಿಮ ವಲಯ ತಂಡವನ್ನು ಅಜಿಂಕ್ಯ ರಹಾನೆ ಮತ್ತು ಕೇಂದ್ರ ವಲಯವನ್ನು ಕರಣ್‌ ಶರ್ಮಾ ಮುನ್ನಡೆಸುತ್ತಿದ್ದಾರೆ.

ಸೇಲಂನಲ್ಲಿ ನಡೆಯುತ್ತಿರುವ ಮತ್ತೊಂದು ಸೆಮಿಫೈನಲ್‌ ಪಂದ್ಯದಲ್ಲಿ ದಕ್ಷಿಣ ವಲಯ ಹಾಗೂ ಉತ್ತರ ವಲಯ ತಂಡಗಳು ಸೆಣಸಾಟ ನಡೆಸುತ್ತಿವೆ. ದಕ್ಷಿಣ ವಲಯ ತಂಡ 458 ರನ್‌ಗಳ ಮುನ್ನಡೆ ಕಾಯ್ದುಕೊಂಡಿದೆ.ಫೈನಲ್‌ ಪಂದ್ಯವು ಸೆಪ್ಟೆಂಬರ್‌ 21ರಿಂದ 25ರ ವರೆಗೆ ಕೊಯಮತ್ತೂರಿನಲ್ಲಿ ನಡೆಯಲಿದೆ.


© Copyright 2022, All Rights Reserved Kannada One News