Flash News:
ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

Updated : 04.10.2022

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಅವರ ಭಾವಚಿತ್ರ ಅಳವಡಿಸಿಕೊಂಡ ವಾಟ್ಸ್ ಆಪ್ ಸಂಖ್ಯೆಯಿಂದ ಸಂದೇಶ ಕಳುಹಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. 

ತುಷಾರ್ ಗಿರಿನಾಥ್ ಭಾವಚಿತ್ರವನ್ನು ಅಳವಡಿಸಿಕೊಂಡಿರುವ ಅಪರಿಚಿತ ವ್ಯಕ್ತಿಯು 8076618135 ವಾಟ್ಸ್ ಅಪ್ ಸಂಖ್ಯೆಯಿಂದ ಆಯುಕ್ತರಿಗೆ ತಿಳಿದಿರುವ ಜನರೊಂದಿಗೆ ಚಾಟ್ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಹಿಂದೆಯೂ ಸಹ ತುಷಾರ್ ಗಿರಿನಾಥ್ ಎಂದು ಹಲವು ಜನರಿಗೆ ವಾಟ್ಸಪ್ ಮೂಲಕ ಮೆಸೇಜ್ ಮಾಡಿ ವಂಚಿಸಿ, ಬಿಲ್ಡರ್‍‌ಗಳಿಗೆ, ಇತರೆ ಕಂಪೆನಿಗಳ ಮುಖ್ಯಸ್ಥರಿಗೆ ಹಾಗೂ ಹಲವು ಕೆಳ ಹಂತದ ಅಧಿಕಾರಿಗಳಿಗೆ ಮೆಸೇಜ್ ಮಾಡಿ, ಗೂಗಲ್ ಪೇ ಮೂಲಕ ಹಣ ವರ್ಗಾಯಿಸುವಂತೆ ಒತ್ತಾಯಿಸಿದ ಘಟನೆ ನಡೆದಿತ್ತು. ಆಗ 7076522681 ಸಂಖ್ಯೆಯ ಮೊಬೈಲ್‌ನಿಂದ ಮುಖ್ಯ ಆಯುಕ್ತರ ಹೆಸರಿನಲ್ಲಿ ಹಣಕ್ಕಾಗಿ ಬೇಡಿಕೆ ಇಡಲಾಗಿತ್ತು.

ಇತ್ತೀಚಿನ ಸರ್ಕಾರಿ ಅಧಿಕಾರಿಗಳು, ರಾಜಕಾರಣಿಗಳ ಹೆಸರಿನಲ್ಲಿ ನಕಲಿ ಖಾತೆಗಳನ್ನು ಮಾಡಿಕೊಂಡು ಸೈಬರ್ ಅಪರಾಧಿಗಳು, ದುಡ್ಡು ಕೀಳುವ, ವಂಚಿಸುವ ಪ್ರಕರಣಗಳು ಹೆಚ್ಚುತ್ತಿವೆ.

© Copyright 2022, All Rights Reserved Kannada One News