ಜಾನಪದ ವಿವಿ ಕುಲಪತಿಯಾಗಿ ಪ್ರೊ.ಭಾಸ್ಕರ್‌ ನೇಮಕ

Related Articles

ಮಲ್ಲಿಕಾರ್ಜುನ ಖರ್ಗೆಗೆ ಒಲಿಯುತ್ತಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ?

‘ಪೇ ಟಿಎಂ ಅಲ್ಲ ಪೇ ಸಿಎಂ’: ಇದು ಬಿಜೆಪಿ ಭ್ರಷ್ಟಾಚಾರದ ಜಾಹೀರಾತು

ದಲಿತ ಸೊಸೆಯನ್ನು ಮನೆಗೆ ಸೇರಿಸದ ಕುಟುಂಬ: ಮಗುವಿನೊಂದಿಗೆ ಧರಣಿ ಕುಳಿತ ಮಹಿಳೆ

ಮೂಡಿಗೆರೆ ಮಾಯಾವಿ ಪೂರ್ಣಚಂದ್ರ ತೇಜಸ್ವಿ ಅವರ ಕರ್ವಾಲೋ ಕಾದಂಬರಿ ಕುರಿತು ಪಿ. ಲಂಕೇಶರ ಮಾತು

‘ಸಚಿವರು ಕಾಣೆಯಾಗಿದ್ದಾರೆ! ಹುಡುಕಿಕೊಡಿ...

ಗೌರಿಯನ್ನು ಕೊಂದವರು ಜೈಲಿನಲ್ಲಿದ್ದಾರೆ, ಕೊಲ್ಲಿಸಿದವರು ಅಧಿಕಾರದಲ್ಲಿದ್ದಾರೆ: ನಟ ಪ್ರಕಾಶ್ ರಾಜ್

ನಾ ಕಂಡ ಹಾಗೆ 'ಗೌರಿ' ಅಮ್ಮ: ವಿಕಾಸ್ ಆರ್ ಮೌರ್ಯ ಅವರ ಲೇಖನ

ಗೌರಿಯ ಅಕ್ಷರಗಳು ಮಾತು ಚಟುವಟಿಕೆ ಎಲ್ಲವೂ ನಿರ್ಭಯ ಭಾರತ ನಿರ್ಮಾಣದ ಗುರಿ ಹೊಂದಿತ್ತು: ಕೆ. ನೀಲಾ ಅವರ ಲೇಖನ

ನನ್ನಕ್ಕ ಗೌರಿ ಲಂಕೇಶ್, ನಾನು ಲಂಕೇಶ್! -ಅಪ್ಪಗೆರೆ ಲಂಕೇಶ್ ಅವರ ಲೇಖನ

ಗೌರಿ ಲಂಕೇಶ್ ವ್ಯಕ್ತಿತ್ವದ ಭಿನ್ನ ಆಯಾಮಗಳು: ಹುಲಿಕುಂಟೆ ಮೂರ್ತಿ ಅವರ ಲೇಖನ

ಜಾನಪದ ವಿವಿ ಕುಲಪತಿಯಾಗಿ ಪ್ರೊ.ಭಾಸ್ಕರ್‌ ನೇಮಕ

Updated : 19.07.2022

ಹಾವೇರಿ: ಶಿಗ್ಗಾವಿ ತಾಲ್ಲೂಕಿನ ಗೊಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನೂತನ ಕುಲಪತಿಯಾಗಿ ಪ್ರೊ.ಭಾಸ್ಕರ್‌ ಟಿ.ಎಂ. ಅವರನ್ನು ಸೋಮವಾರ ನೇಮಕ ಮಾಡಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್‌ ಆದೇಶ ಹೊರಡಿಸಿದ್ದಾರೆ. 

ಮೂಲತಃ ಕಲಬುರ್ಗಿ ಜಿಲ್ಲೆಯವರಾದ ಪ್ರೊ.ಭಾಸ್ಕರ್‌ ಅವರು ಪ್ರಸ್ತುತ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಡಾ.ಆರ್‌.ಸಿ.ಹಿರೇಮಠ ಕನ್ನಡ ಅಧ್ಯಯನ ಪೀಠದ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಭಾಸ್ಕರ್‌ ಅವರು ಕರ್ನಾಟಕ ವಿಶ್ವವಿದ್ಯಾಲಯದ ಪ್ರಭಾರ ಕುಲಪತಿಯಾಗಿ, ಹಾವೇರಿಯ ಸ್ನಾತಕೋತ್ತರ ಕೇಂದ್ರದಲ್ಲಿ 8 ವರ್ಷ ಆಡಳಿತಾಧಿಕಾರಿಯಾಗಿ ಹಾಗೂ ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ.

ಕುಲಪತಿಯಾಗಿದ್ದ ಡಾ.ಡಿ.ಬಿ.ನಾಯಕ್‌ ಅವರ ಆಡಳಿತಾವಧಿ 2022ರ ಫೆಬ್ರುವರಿ 21ಕ್ಕೆ ಅಂತ್ಯಗೊಂಡಿತ್ತು. ನಂತರ ಪ್ರೊ.ಕೆ.ಎನ್‌.ಗಂಗಾನಾಯಕ್‌, ಆನಂತರ ಪ್ರೊ.ಸಿ.ಟಿ. ಗುರುಪ್ರಸಾದ್‌ ಅವರು ಪ್ರಭಾರ ಕುಲಪತಿಗಳಾಗಿ ಕರ್ತವ್ಯ ನಿರ್ವಹಿಸಿದ್ದರು.

© Copyright 2022, All Rights Reserved Kannada One News