ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಚುನಾವಣಾ ಆಯೋಗ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಹೆಚ್.ಡಿ.ಕುಮಾರಸ್ವಾಮಿ

ಮತದಾರರ ಮಾಹಿತಿ ಕಳ್ಳತನ ಪ್ರಕರಣ; ಚುನಾವಣಾ ಆಯೋಗ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು: ಹೆಚ್.ಡಿ.ಕುಮಾರಸ್ವಾಮಿ

Updated : 20.11.2022

ಬೆಂಗಳೂರು: ಮತದಾರರ ಮಾಹಿತಿ ಕಳ್ಳತನ ಪ್ರಕರಣ ದೊಡ್ಡ ಹಗರಣವಾಗುವ ರೀತಿ ಕಾಣುತ್ತಿದ್ದು, ಸಂಬಂಧಪಟ್ಟವರ ಮೇಲೆ ಚುನಾವಣಾ ಆಯೋಗ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು’ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿಗೆ ಮತ ಹಾಕಲ್ಲ ಎಂದ ಮತದಾರರ ಹೆಸರನ್ನು ಪಟ್ಟಿಯಿಂದ ಕೈ ಬಿಟ್ಟಿದ್ದಾರೆ ಎಂಬ ಆರೋಪ ನಿಜಕ್ಕೂ ಗಂಭೀರವಾದ ವಿಚಾರ. ಸರ್ಕಾರವೇ ನೇರವಾಗಿ ಭಾಗಿಯಾಗಿರುವಾಗ ಸತ್ಯಾಂಶ ಹೇಗೆ ಹೊರಬರುತ್ತದೆ. ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದು, ಈ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಹೆಸರಿಗೆ ಹೆಬ್ಬೆಟ್ಟಿನ ಆಯೋಗ ಎಂಬಂತೆ ಆಗಬಾರದು” ಎಂದರು.

© Copyright 2022, All Rights Reserved Kannada One News