ಪಕ್ಷದ ಕಾರ್ಯಕರ್ತರ ಜೊತೆ ಸೇರಿ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ: ಸಿದ್ದರಾಮಯ್ಯ

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

ಪಕ್ಷದ ಕಾರ್ಯಕರ್ತರ ಜೊತೆ ಸೇರಿ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ: ಸಿದ್ದರಾಮಯ್ಯ

Updated : 22.09.2022

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ಸೇರಿ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಸರ್ಕಾರಕ್ಕೆ ಸವಾಲೆಸೆದಿದ್ದಾರೆ.

ಪೇಸಿಎಂ ಅಭಿಯಾನ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯ ಬಿಜೆಪಿ ಸರ್ಕಾರದ ಲಂಚುಗುಳಿತನದ ಬಗ್ಗೆ ಪಕ್ಷದ ಕಾರ್ಯಕರ್ತರ ಜೊತೆ ಸೇರಿ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ. ನನ್ನ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಪೋಸ್ಟರ್ ಅಂಟಿಸಿದ್ದರಲ್ಲಾ, ಅದರ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಯಾಕೆ ಮೌನವಾಗಿದ್ದಾರೆ? ಪೊಲೀಸರ ಕಣ್ಣು ಯಾಕೆ  ಕುರುಡಾಗಿದೆ? ಎಂದು ಪ್ರಶ್ನಿಸಿದ್ದಾರೆ.

ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಪೊಲೀಸರ ಮೂಲಕ ನೀವು ಎಷ್ಟು ಜನರ ಬಾಯಿ ಮುಚ್ಚಿಸುತ್ತೀರಿ? ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ರಾಜ್ಯದ ತುಂಬಾ ಜೈಲು ಕಟ್ಟಿಸ್ತಿರಾ? ಜನ ಬಂಡೆದಿದ್ದಾರೆ, ಎಚ್ಚರ..! ಎಂದು ಸಿದ್ದರಾಮಯ್ಯ ಮತ್ತೊಂದು ಟ್ವೀಟ್ ಮಾಡಿದ್ದಾರೆ.

‘ಬಿಜೆಪಿ ಗೆಲುವಿನ ಸೂತ್ರವೇ ಸುಳ್ಳು ಮಾಹಿತಿಗಳ ಅಪಪ್ರಚಾರ, ವಿರೋಧಿಗಳ ಚಾರಿತ್ರ್ಯಹನನ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣ. ಸಾಮಾಜಿಕ ಮಾಧ್ಯಮವೂ ಸೇರಿದಂತೆ ಹೊಸ ತಂತ್ರಜ್ಞಾನವನ್ನು ಬಿಜೆಪಿಯವರಷ್ಟು ದುರುಪಯೋಗ ಪಡಿಸಿಕೊಂಡ ರಾಜಕೀಯ ಪಕ್ಷ ಜಗತ್ತಿನಲ್ಲಿ ಇನ್ನೊಂದಿಲ್ಲ’ ಎಂದು ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರದ ಅಧಿಕೃತ ಸೋಷಿಯಲ್ ಮೀಡಿಯಾಗಳಲ್ಲಿಯೇ ನನ್ನ ವಿರುದ್ಧದ ಕುತ್ಸಿತ ಹೇಳಿಕೆಗಳು, ವಿರೂಪಗೊಳಿಸಿದ ಪೋಟೊಗಳ ವಿವರ ಕೊಡುತ್ತೇನೆ, ಅವರನ್ನೂ ಬಂಧಿಸಿ. ನಾನು ಅಧಿಕಾರದಲ್ಲಿದ್ದಾಗಲೇ ಇಂಥವರ ವಿರುದ್ಧ ಪೊಲೀಸರಿಗೆ ದೂರು ಕೊಟ್ಟಿಲ್ಲ. ಇದು ನಾನು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಕೊಟ್ಟ ಗೌರವ ಎಂದು ಕಿಡಿಕಾರಿದ್ದಾರೆ.

ರಾಜಕೀಯ ವ್ಯವಸ್ಥೆಯಲ್ಲಿ ಇಂತಹ ಆರೋಪ-ಪ್ರತ್ಯಾರೋಪ ಸಹಜ ವಿದ್ಯಮಾನವಾದರೂ ಇದನ್ನು ಇಷ್ಟೊಂದು ಕೀಳು ಮಟ್ಟಕ್ಕೆ ತಂದು ನಿಲ್ಲಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ. ಬೊಮ್ಮಾಯಿ ಅವರೇ, ಬೇರೆಯವರಿಗೆ ಚುಚ್ಚಿದಾಗ ಖುಷಿಪಟ್ಟಿರಿ, ಯಾರೋ ನಿಮಗೆ ಚುಚ್ಚಿದ್ದಕ್ಕೆ ನೋವಾಯ್ತಾ ಎಂದು ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.


© Copyright 2022, All Rights Reserved Kannada One News