ಟಿ20 ವಿಶ್ವಕಪ್‌| ಟಾಸ್‌ ಗೆದ್ದ ಬಾಂಗ್ಲಾದೇಶ: ಭಾರತ ಬ್ಯಾಟಿಂಗ್

Related Articles

ಟಿ-20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ಭಾರತ ಕ್ರಿಕೆಟ್ ತಂಡವನ್ನು ಚೋಕರ್ಸ್ ಎಂದ ಕಪಿಲ್ ದೇವ್

ಟೀ20 ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ: ಫೈನಲ್‌ಗೆ ತಲುಪಿದ ಇಂಗ್ಲೆಂಡ್-ಪಾಕ್!

ಅತ್ಯಾಚಾರ ಆರೋಪ: ದನುಷ್ಕಾ ಗುಣತಿಲಕರನ್ನು ಅಮಾನತುಗೊಳಿಸಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

ಟಿ-20 ವಿಶ್ವಕಪನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು, ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ!

ಐಪಿಎಸ್ ಅಧಿಕಾರಿ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಎಂಎಸ್ ಧೋನಿ

‘ಖೇಲ್ ರತ್ನ’ ಪ್ರಶಸ್ತಿಗೆ ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಹೆಸರು ಶಿಫಾರಸು

ಏಷ್ಯಾ ಸ್ಕ್ವಾಷ್‌ ಚಾಂಪಿಯನ್‌ಷಿಪ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಭಾರತ ತಂಡ

ಬೈಜುಸ್ ನ ಜಾಗತಿಕ ರಾಯಭಾರಿಯಾಗಿ ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ನೇಮಕ

ಟಿ20 ವಿಶ್ವಕಪ್ ನಲ್ಲಿ ಜಿಂಬಾಬ್ವೆ ವಿರುದ್ಧ 3 ರನ್ ಅಂತರದ ಜಯ ಸಾಧಿಸಿದ ಬಾಂಗ್ಲಾದೇಶ

ಪುರುಷ, ಮಹಿಳಾ ಕ್ರಿಕೆಟಿಗರಿಗೆ ಸಮಾನ ಪಂದ್ಯ ವೇತನ: ಬಿಸಿಸಿಐ ಘೋಷಣೆ

ಟಿ20 ವಿಶ್ವಕಪ್‌| ಟಾಸ್‌ ಗೆದ್ದ ಬಾಂಗ್ಲಾದೇಶ: ಭಾರತ ಬ್ಯಾಟಿಂಗ್

Updated : 02.11.2022

ಟಿ20 ವಿಶ್ವಕಪ್‌ ಟೂರ್ನಿಯ ಗ್ರೂಪ್‌ 2ರ ಮಹತ್ವದ ಪಂದ್ಯದಲ್ಲಿ ಭಾರತ, ಬುಧವಾರ ಬಾಂಗ್ಲಾದೇಶದ ಸವಾಲನ್ನು ಎದುರಿಸಲಿದೆ. ಸೆಮಿಫೈನಲ್‌ಗೆ ಅರ್ಹತೆ ಪಡೆಯಲು ಉಭಯ ತಂಡಗಳು ಈ ಪಂದ್ಯ  ಗೆಲ್ಲಬೇಕಾದ ಒತ್ತಡದಲ್ಲಿವೆ.‌ ಪಂದ್ಯದ ಟಾಸ್‌ ಬಾಂಗ್ಲಾದೇಶದ ಪಾಲಾಗಿದ್ದು, ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ. ಕಳೆದ ಪಂದ್ಯದಲ್ಲಿ ಖಾತೆ ತರೆಯಲು ವಿಫಲರಾಗಿದ್ದ ದೀಪಕ್ ಹೂಡಾರನ್ನು ಕೈಬಿಡಲಾಗಿದೆ. ಅಕ್ಷರ್ ಪಟೇಲ್ ತಂಡಕ್ಕೆ ಮರಳಿದ್ದಾರೆ.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಉಭಯ ತಂಡಗಳು ಈವರೆಗೂ 11 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ 10 ಪಂದ್ಯಗಳಲ್ಲಿ ಭಾರತ ಜಯಭೇರಿ ಬಾರಿಸಿದೆ. ಟಿ20 ವಿಶ್ವಕಪ್‌ನಲ್ಲಿ ನಡೆದಿರುವ ಮೂರು ಪಂದ್ಯಗಳಲ್ಲೂ ಬಾಂಗ್ಲಾದೇಶ ಭಾರತಕ್ಕೆ ಶರಣಾಗಿದೆ.

ಗ್ರೂಪ್‌ 2ರಲ್ಲಿ ತಲಾ ಮೂರು ಪಂದ್ಯಗಳನ್ನು ಆಡಿರುವ ಭಾರತ- ಬಾಂಗ್ಲಾ ತಂಡಗಳು 4 ಅಂಕಗಳನ್ನು ಹೊಂದಿವೆ. ಇಂದಿನ ಪಂದ್ಯವನ್ನು ಗೆಲ್ಲುವ ತಂಡ 6 ಅಂಕಗಳೊಂದಿಗೆ ಸೆಮಿಪೈನಲ್‌ಗೆ ಹತ್ತಿರವಾಗಲಿದೆ. ಅಜೇಯರಾಗಿರುವ ಆಫ್ರಿಕ, ಅಂಕಪಟ್ಟಿಯಲ್ಲಿ ಐದು ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ಅಡಿಲೇಡ್‌ ಓವಲ್‌ನಲ್ಲಿ ಪಂದ್ಯ ನಿಗದಿಯಾಗಿದೆ. ಆದರೆ ಮಂಗಳವಾರ ನಗರದಲ್ಲಿ ಭಾರಿ ಮಳೆಯಾಗಿದೆ. ಹೀಗಾಗಿ ಟೀಮ್‌ ಇಂಡಿಯಾ ಒಳಾಂಗಣ ಮೈದಾನದಲ್ಲಿ ಅಭ್ಯಾಸ ನಡೆಸಿತ್ತು. ಮಳೆಯಿಂದಾಗಿ ಇಂದಿನ ಪಂದ್ಯ ರದ್ದಾದರೆ ಎರಡೂ ತಂಡಗಳಿಗೂ ತಲಾ ಒಂದು ಅಂಕಗಳು ಲಭಿಸಲಿದ್ದು, ಸೂಪರ್‌ 12 ಹಂತದ ಅಂತಿಮ ಪಂದ್ಯ ನಿರ್ಣಾಯಕವಾಗಲಿದೆ. ನವೆಂಬರ್‌ 6ರಂದು ಮೆಲ್ಬೋರ್ನ್‌ನಲ್ಲಿ ಭಾರತ- ಜಿಂಬಾಬ್ವೆ ಮತ್ತು ಬಾಂಗ್ಲಾದೇಶ- ಪಾಕಿಸ್ತಾನ ತಂಡಗಳ ನಡುವೆ ಸೂಪರ್‌ 12ರ ಅಂತಿಮ ಹಣಾಹಣಿ ನಡೆಯಲಿದೆ.


© Copyright 2022, All Rights Reserved Kannada One News