ನ.14ರಿಂದ ದೆಹಲಿ-ಹುಬ್ಬಳ್ಳಿ ನಡುವೆ ಇಂಡಿಗೋ ವಿಮಾನ ಸೇವೆ ಆರಂಭ: ಸಚಿವ ಜೋಶಿ

ನ.14ರಿಂದ ದೆಹಲಿ-ಹುಬ್ಬಳ್ಳಿ ನಡುವೆ ಇಂಡಿಗೋ ವಿಮಾನ ಸೇವೆ ಆರಂಭ: ಸಚಿವ ಜೋಶಿ

Updated : 12.10.2022

ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ದೆಹಲಿ ನಡುವೆ ನ.‌ 14ರಿಂದ ನಿತ್ಯ ವಿಮಾನ ಸೇವೆ ಆರಂಭವಾಗಲಿದೆ. ಈ ಕುರಿತು ಇಂಡಿಗೊ ವಿಮಾನಯಾನ ಸಂಸ್ಥೆಯ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹುಬ್ಬಳ್ಳಿ ಸೇರಿದಂತೆ ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರು ಪ್ರತಿದಿನ ದೆಹಲಿ-ಹುಬ್ಬಳ್ಳಿ ಹಾಗೂ ಹುಬ್ಬಳ್ಳಿ-ದೆಹಲಿ ನಡುವೆ ಪ್ರಯಾಣಿಸಬಹುದಾಗಿದೆ. ದೆಹಲಿಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಈ ವಿಮಾನ ಸೌಲಭ್ಯ ಕಲ್ಪಿಸಲಾಗಿದೆ ಎಂದು ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ಅವರು ತಿಳಿಸಿದ್ದಾರೆ.

ವಿಮಾನ ಸಂಖ್ಯೆ 6ಇ 5625 ಬೆಳಿಗ್ಗೆ 10ಕ್ಕೆ ದೆಹಲಿಯಿಂದ ಹೊರಟು ಹುಬ್ಬಳ್ಳಿಯನ್ನು ಮಧ್ಯಾಹ್ನ 12.45ಕ್ಕೆ ತಲುಪಲಿದೆ. ಮರಳಿ ಮಧ್ಯಾಹ್ನ 1.15ಕ್ಕೆ ಹುಬ್ಬಳ್ಳಿಯಿಂದ ಹೊರಟು 3.45ಕ್ಕೆ ದೆಹಲಿ ತಲುಪಲಿದೆ. ಈಗಾಗಲೇ ಇಂಡಿಗೋ ಸಂಸ್ಥೆಯು ಟಿಕೆಟ್ ಬುಕ್ಕಿಂಗ್ ಆರಂಭಿಸಿದೆ ಎಂದು ಹೇಳಿದ್ದಾರೆ.

© Copyright 2022, All Rights Reserved Kannada One News