ಮುಲ್ಕಿ ಜಯಾನಂದ ದೇವಾಡಿಗರಿಗೆ ದೇವರಾಜ ಅರಸು ಪ್ರಶಸ್ತಿ

Related Articles

ಮಲ್ಲಿಕಾರ್ಜುನ ಖರ್ಗೆಗೆ ಒಲಿಯುತ್ತಾ ಕಾಂಗ್ರೆಸ್ ಅಧ್ಯಕ್ಷ ಪಟ್ಟ?

‘ಪೇ ಟಿಎಂ ಅಲ್ಲ ಪೇ ಸಿಎಂ’: ಇದು ಬಿಜೆಪಿ ಭ್ರಷ್ಟಾಚಾರದ ಜಾಹೀರಾತು

ದಲಿತ ಸೊಸೆಯನ್ನು ಮನೆಗೆ ಸೇರಿಸದ ಕುಟುಂಬ: ಮಗುವಿನೊಂದಿಗೆ ಧರಣಿ ಕುಳಿತ ಮಹಿಳೆ

ಮೂಡಿಗೆರೆ ಮಾಯಾವಿ ಪೂರ್ಣಚಂದ್ರ ತೇಜಸ್ವಿ ಅವರ ಕರ್ವಾಲೋ ಕಾದಂಬರಿ ಕುರಿತು ಪಿ. ಲಂಕೇಶರ ಮಾತು

‘ಸಚಿವರು ಕಾಣೆಯಾಗಿದ್ದಾರೆ! ಹುಡುಕಿಕೊಡಿ...

ಗೌರಿಯನ್ನು ಕೊಂದವರು ಜೈಲಿನಲ್ಲಿದ್ದಾರೆ, ಕೊಲ್ಲಿಸಿದವರು ಅಧಿಕಾರದಲ್ಲಿದ್ದಾರೆ: ನಟ ಪ್ರಕಾಶ್ ರಾಜ್

ನಾ ಕಂಡ ಹಾಗೆ 'ಗೌರಿ' ಅಮ್ಮ: ವಿಕಾಸ್ ಆರ್ ಮೌರ್ಯ ಅವರ ಲೇಖನ

ಗೌರಿಯ ಅಕ್ಷರಗಳು ಮಾತು ಚಟುವಟಿಕೆ ಎಲ್ಲವೂ ನಿರ್ಭಯ ಭಾರತ ನಿರ್ಮಾಣದ ಗುರಿ ಹೊಂದಿತ್ತು: ಕೆ. ನೀಲಾ ಅವರ ಲೇಖನ

ನನ್ನಕ್ಕ ಗೌರಿ ಲಂಕೇಶ್, ನಾನು ಲಂಕೇಶ್! -ಅಪ್ಪಗೆರೆ ಲಂಕೇಶ್ ಅವರ ಲೇಖನ

ಗೌರಿ ಲಂಕೇಶ್ ವ್ಯಕ್ತಿತ್ವದ ಭಿನ್ನ ಆಯಾಮಗಳು: ಹುಲಿಕುಂಟೆ ಮೂರ್ತಿ ಅವರ ಲೇಖನ

ಮುಲ್ಕಿ ಜಯಾನಂದ ದೇವಾಡಿಗರಿಗೆ ದೇವರಾಜ ಅರಸು ಪ್ರಶಸ್ತಿ

Updated : 20.08.2022

ಮಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 107ನೇ ಜನ್ಮದಿನಾಚರಣೆ ಸಂದರ್ಭ ಕೊಡಮಾಡುವ 2022-23ನೇ ಸಾಲಿನ ಡಿ.ದೇವರಾಜ ಅರಸು ದ.ಕ. ಜಿಲ್ಲಾ ಮಟ್ಟದ ಪ್ರಶಸ್ತಿಗೆ ಮುಲ್ಕಿ ಜಯಾನಂದ ದೇವಾಡಿಗ ಆಯ್ಕೆಯಾಗಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಡಿ.ದೇವರಾಜ ಅರಸು ಪ್ರಶಸ್ತಿ ನೀಡಲು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿಯು ಮುಲ್ಕಿ ಜಯಾನಂದ ದೇವಾಡಿಗ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಿದೆ. ಪ್ರಶಸ್ತಿಯು 50000 ರೂ.ಗಳ ನಗದನ್ನು ಒಳಗೊಂಡಿರುತ್ತದೆ.

ಡಿ. ದೇವರಾಜ ಅರಸು ಅವರ ಚಿಂತನೆ, ಆದರ್ಶ ತತ್ವಗಳಿಗೆ ಧ್ವನಿಯಾಗಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕಾಗಿ, ನಿರಂತರವಾಗಿ ಹೋರಾಟ ಮಾಡುತ್ತಿರುವ ಮುಲ್ಕಿ ಜಯಾನಂದ ದೇವಾಡಿಗ ಅವರು ದೇವರಾಜ ಅರಸು ಕಾರ್ಯಗತಗೊಳಿಸಿದ ಯೋಜನೆ, ಕಾರ್ಯಕ್ರಮಗಳನ್ನು ಹಿಂದುಳಿದ ವರ್ಗಗಳ ಸಮುದಾಯಕ್ಕೆ ತಲುಪಿಸಲು ನಿರಂತರವಾಗಿ ಶ್ರಮಿಸಿದವರು.

ಆ.೨೦ರ ಮಧ್ಯಾಹ್ನ ೨.೩೦ಕ್ಕೆ ನಗರದ ಪುರಭವನದಲ್ಲಿ ನಡೆಯಲಿರುವ ದೇವರಾಜ ಅರಸು ಅವರ ೧೦೭ನೇ ಜನ್ಮ ದಿನಾಚರಣೆ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ಅವರು ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

© Copyright 2022, All Rights Reserved Kannada One News