ಕಾಂತಾರ ಚಿತ್ರದಲ್ಲಿ ವರಾಹ ರೂಪಂ ಹಾಡು ಬಳಸದಂತೆ ತಡೆಯಾಜ್ಞೆ: ತೈಕುಡಂ ಬ್ರಿಡ್ಜ್

Related Articles

ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜೊತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ: ಅಮೀರ್ ಖಾನ್

‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನ.25ಕ್ಕೆ ಬಿಡುಗಡೆ

ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ

ವೀರ ದಾಸ್ ಅವರ ಬೆಂಗಳೂರು ಶೋ ರದ್ದಾದ ಬಳಿಕ ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ

ʼದಿ ಕೇರಳ ಸ್ಟೋರಿʼ ಸಿನಿಮಾ: ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

ಹಿರಿಯ ನಟ ಟಿ.ಎಸ್. ಲೋಹಿತಾಶ್ವ ನಿಧನ

ನಾಳೆ ́ಬೈ2 ಕಾಫಿ́ ನಾಟಕ ಪ್ರದರ್ಶನ

ಶಾಲಾ ಮಕ್ಕಳಿಗೆ 'ಗಂಧದ ಗುಡಿ' ಉಚಿತ ಪ್ರದರ್ಶನ ನೀಡಲು ಮನವಿ

‘ಉತ್ತರಕಾಂಡ’ ಸಿನೆಮಾದಲ್ಲಿ ಧನಂಜಯ್‌–ರಮ್ಯಾ ಜೋಡಿ

ಮುಂದಿನ ಚುನಾವಣೆಯಲ್ಲಿ ನಿಂತು ಗೆಲ್ಲುವ ಸಾಮರ್ಥ್ಯ ನನಗಿದೆ. ಆದರೆ, ನನಗೆ ಆ ಆಸೆ ಇರಲಿಲ್ಲ: ಝೈದ್ ಖಾನ್

ಕಾಂತಾರ ಚಿತ್ರದಲ್ಲಿ ವರಾಹ ರೂಪಂ ಹಾಡು ಬಳಸದಂತೆ ತಡೆಯಾಜ್ಞೆ: ತೈಕುಡಂ ಬ್ರಿಡ್ಜ್

Updated : 29.10.2022

ಬೆಂಗಳೂರು: ಯಶಸ್ವಿ ಪ್ರದರ್ಶನ ಕಾಣುತ್ತಿರುವ ಕನ್ನಡದ ‘ಕಾಂತಾರ’ ಚಿತ್ರದ ಪ್ರಸಿದ್ಧ ‘ವರಾಹ ರೂಪಂ’ ಹಾಡನ್ನು ತಮ್ಮ ಅನುಮತಿ ಇಲ್ಲದೆ ಚಿತ್ರಮಂದಿರಗಳು ಮತ್ತು ಇತರ ಸ್ಟ್ರೀಮಿಂಗ್ ವೇದಿಕೆಗಳಲ್ಲಿ ಪ್ರಸಾರ ಮಾಡದಂತೆ ಕೋಯಿಕ್ಕೋಡ್‌ನ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿರುವುದಾಗಿ ಕೇರಳದ ಪ್ರಸಿದ್ಧ ಮ್ಯೂಸಿಕ್ ಬ್ಯಾಂಡ್ ತೈಕುಡಂ ಬ್ರಿಡ್ಜ್ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹೇಳಿಕೊಂಡಿದೆ.

ಈ ಹಾಡನ್ನು ತಮ್ಮ ನವರಸಂ ಆಲ್ಬಂನಿಂದ ಕಾಪಿ ಮಾಡಲಾಗಿದೆ ಎಂದು ಅದು ಈ ಹಿಂದೆ ಆರೋಪಿಸಿತ್ತು.

‘ತೈಕುಡಂ ಬ್ರಿಡ್ಜ್ ಅನುಮತಿ ಇಲ್ಲದೆ ಕಾಂತಾರ ಚಿತ್ರದಲ್ಲಿ ವರಾಹ ರೂಪಂ ಹಾಡನ್ನು ಬಳಸದಂತೆ ತಡೆಯಾಜ್ಞೆ ನೀಡಿ, ಚಿತ್ರದ ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕ, ಅಮೆಜಾನ್, ಯೂಟ್ಯೂಬ್, ಸ್ಪಾಟಿಫೈ, ವಿಂಕ್ ಮ್ಯೂಸಿಕ್, ಜಿಯೋಸಾವನ್ ಮತ್ತು ಇತರರಿಗೆ ಕೋಯಿಕ್ಕೋಡ್‌ನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಆದೇಶಿಸಿದ್ದಾರೆ. ತೈಕುಡಂ ಬ್ರಿಡ್ಜ್ ಪರವಾಗಿ ಸುಪ್ರೀಂ ಕೋರ್ಟ್ ವಕೀಲರಾದ ಸತೀಶ್ ಮೂರ್ತಿ ದಾವೆ ಹೂಡಿದ್ದರು’ಎಂದು ತೈಕುಡಂ ಬ್ರಿಡ್ಜ್ ಹಾಕಿರುವ ಇನ್‌ಸ್ಟಾಗ್ರಾಂ ಪೋಸ್ಟ್‌ನಲ್ಲಿ ತಿಳಿಸಲಾಗಿದೆ.

ಅಕ್ಟೋಬರ್ 24 ರಂದು, ಕಾಂತಾರ ಚಿತ್ರ ತಯಾರಕರ ವಿರುದ್ಧ ತೈಕುಡಂ ಬ್ರಿಡ್ಜ್ ಇನ್‌ಸ್ಟಾಗ್ರಾಂನಲ್ಲಿ ಕೃತಿಚೌರ್ಯದ ಗಂಭೀರ ಆರೋಪಗಳನ್ನು ಮಾಡಿತ್ತು. ವರಾಹ ರೂಪಂ ಹಾಡನ್ನು ತಮ್ಮ ನವರಸಂ ಆಲ್ಬಂನಿಂದ ನಕಲು ಮಾಡುವ ಮೂಲಕ ಹಕ್ಕುಸ್ವಾಮ್ಯ ಕಾನೂನುಗಳ ಸ್ಪಷ್ಟ ಉಲ್ಲಂಘನೆ ಮಾಡಿದೆ ಎಂದು ಆರೋಪಿಸಿತ್ತು.

‘ತೈಕುಡಂ ಬ್ರಿಡ್ಜ್ ಕಾಂತಾರ ಚಿತ್ರತಂಡದ ಜೊತೆ ಯಾವುದೇ ಒಪ್ಪಂದ ಮಾಡಿಕೊಂಡಿಲ್ಲ ಎಂದು ಹೇಳಲು ಬಯಸುತ್ತೇವೆ. ನವರಸಂ ಮತ್ತು ವರಾಹ ರೂಪಂ ನಡುವೆ ಕಂಡುಬಂದಿರುವ ಹೋಲಿಕೆಗಳು ಆಡಿಯೊ ವಿಷಯದಲ್ಲಿ ಒಂದು ಸ್ಪಷ್ಟವಾದ ಹಕ್ಕುಸ್ವಾಮ್ಯ ಕಾನೂನುಗಳ ಉಲ್ಲಂಘನೆಯಾಗಿದೆ. ಹಾಡಿನಿಂದ ಪ್ರೇರಣೆ ಪಡೆಯುವುದು ಬೇರೆ, ಕೃತಿಚೌರ್ಯವೇ ಬೇರೆ. ಆದ್ದರಿಂದ, ಇದಕ್ಕೆ ಕಾರಣವಾದ ತಂಡದ ವಿರುದ್ಧ ನಾವು ಕಾನೂನು ಕ್ರಮವನ್ನು ಬಯಸುತ್ತೇವೆ’ಎಂದು ಹೇಳಿತ್ತು.


© Copyright 2022, All Rights Reserved Kannada One News