ʼದಿ ಕೇರಳ ಸ್ಟೋರಿʼ ಸಿನಿಮಾ: ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

ʼದಿ ಕೇರಳ ಸ್ಟೋರಿʼ ಸಿನಿಮಾ: ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

Updated : 09.11.2022

ತಿರುವನಂತಪುರಂ: ಕೇರಳ ಪೊಲೀಸ್ ಮಹಾನಿರ್ದೇಶಕ ಅನಿಲ್ ಕಾಂತ್ ಮಂಗಳವಾರ ತಿರುವನಂತಪುರಂ ಪೊಲೀಸ್ ಆಯುಕ್ತರಿಗೆ ದಿ ಕೇರಳ ಸ್ಟೋರಿ ಚಿತ್ರದ ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

ಕಳೆದ ವಾರ ಬಿಡುಗಡೆಯಾದ ಚಿತ್ರದ ಟೀಸರ್‌ನಲ್ಲಿ ಕೇರಳದ 32,000 ಕ್ಕೂ ಹೆಚ್ಚು ಮಹಿಳೆಯರನ್ನು ಇಸ್ಲಾಂಗೆ ಮತಾಂತರಿಸಲಾಗಿದೆ ಮತ್ತು ಭಯೋತ್ಪಾದಕ ಗುಂಪು ಇಸ್ಲಾಮಿಕ್ ಸ್ಟೇಟ್‌ಗೆ ಸೇರಿಸಿಕೊಳ್ಳಲಾಗಿದೆ ಎಂದು ಹೇಳಲಾಗಿದೆ.

ನವೆಂಬರ್ 7 ರಂದು ತಮಿಳುನಾಡು ಮೂಲದ ಪತ್ರಕರ್ತ ಬಿಆರ್ ಅರವಿಂದಾಕ್ಷನ್ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಮನವಿಯನ್ನು ಕಳುಹಿಸಿದ್ದೇನೆ ಎಂದು ಬರೆದಿದ್ದರು. ಕೇರಳ ಸ್ಟೋರಿ ನಿರ್ದೇಶಕ ಸುದೀಪ್ತೋ ಸೇನ್ ಅವರನ್ನು ಕರೆದು ಟೀಸರ್ ಬಗ್ಗೆ ವಿಚಾರಣೆ ನಡೆಸುವಂತೆ ಕೋರಿದ್ದರು. ಟೀಸರ್ ಕೇರಳವನ್ನು ಭಯೋತ್ಪಾದನೆ ಬೆಂಬಲಿಸುವ ರಾಜ್ಯ ಎಂದು ಬಿಂಬಿಸುತ್ತದೆ ಎಂದು ಅರವಿಂದಾಕ್ಷನ್ ಬರೆದಿದ್ದಾರೆ.


© Copyright 2022, All Rights Reserved Kannada One News