ಮೂಲ ಕಾಂಗ್ರೆಸಿಗರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಸಿದ್ದರಾಮಯ್ಯ ಗೆಲುವು ಖಚಿತ: ಮುನಿಯಪ್ಪ

ಮೂಲ ಕಾಂಗ್ರೆಸಿಗರನ್ನು ವಿಶ್ವಾಸಕ್ಕೆ ತೆಗೆದುಕೊಂಡರೆ ಸಿದ್ದರಾಮಯ್ಯ ಗೆಲುವು ಖಚಿತ: ಮುನಿಯಪ್ಪ

Updated : 17.11.2022

ಬೆಂಗಳೂರು: ‘ಕೋಲಾರ ಕ್ಷೇತ್ರದಲ್ಲಿ ಮೂಲ ಕಾಂಗ್ರೆಸ್‌ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಗೆಲುವು ಕಷ್ಟ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ ಮುಖಂಡ ಕೆ.ಎಚ್‌. ಮುನಿಯಪ್ಪ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೋಲಾರ ಕಾಂಗ್ರೆಸ್‌ನಲ್ಲಿ ಸಮಸ್ಯೆ ಇದೆ. ಅದನ್ನು ಸರಿಪಡಿಸಿಕೊಂಡು ಕೋಲಾರಕ್ಕೆ ಬಂದರೆ ಅನುಕೂಲ. ಕಳೆದ ಚುನಾವಣೆಯಲ್ಲಿ ಬಿಜೆಪಿ ಪರ ಕೆಲಸ ಮಾಡಿದವರನ್ನು ನಂಬಿಕೊಂಡು ಬಂದರೆ ಗೆಲುವು ಕಷ್ಟವಾಗಬಹುದು ಎಂದು ಸಿದ್ದರಾಮಯ್ಯ ಅವರಿಗೆ ಹೇಳಿದ್ದೇನೆ’ ಎಂದರು.

‘ಸಿದ್ದರಾಮಯ್ಯ ಅವರನ್ನು ಸೋಲಿ ಸಲು ಕಾಂಗ್ರೆಸ್‌ ನಲ್ಲಿ ಯಾರೂ ಸಂಚು ಮಾಡುತ್ತಿಲ್ಲ. ಆದರೆ, ಅವರು ಕಾಂಗ್ರೆಸ್ ನಿಷ್ಠ‌ರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಕಳೆದ ಬಾರಿ ಬಿಜೆಪಿಗೆ ಕೆಲಸ ಮಾಡಿ ದವರ ಮುಂದಾಳತ್ವದಲ್ಲಿ ಚುನಾವಣೆ ಎದುರಿಸಿದರೆ ಗೆಲುವು ಕಷ್ಟ’ ಎಂದರು.

ಕೋಲಾರಕ್ಕೆ ಸಿದ್ದರಾಮಯ್ಯ ಹೋಗಿದ್ದಾಗ ಗೈರಾದ ಬಗ್ಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ‘ಗುಜರಾತ್‌ನಲ್ಲಿ ಚುನಾವಣಾ ಕೆಲಸ ಇತ್ತು. ಅವರ ಜೊತೆ ಮಾತಾಡಿದ್ದೇನೆ’ ಎಂದರು.

ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‌‘ಹೈಕಮಾಂಡ್ ಹೇಳಿದರೆ ಸ್ಪರ್ಧಿಸುತ್ತೇನೆ’ ಎಂದರು.

© Copyright 2022, All Rights Reserved Kannada One News