‘ಖೇಲ್ ರತ್ನ’ ಪ್ರಶಸ್ತಿಗೆ ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಹೆಸರು ಶಿಫಾರಸು

Related Articles

ಟಿ-20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಸೋತ ಭಾರತ ಕ್ರಿಕೆಟ್ ತಂಡವನ್ನು ಚೋಕರ್ಸ್ ಎಂದ ಕಪಿಲ್ ದೇವ್

ಟೀ20 ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತ ಟೀಂ ಇಂಡಿಯಾ: ಫೈನಲ್‌ಗೆ ತಲುಪಿದ ಇಂಗ್ಲೆಂಡ್-ಪಾಕ್!

ಅತ್ಯಾಚಾರ ಆರೋಪ: ದನುಷ್ಕಾ ಗುಣತಿಲಕರನ್ನು ಅಮಾನತುಗೊಳಿಸಿದ ಶ್ರೀಲಂಕಾ ಕ್ರಿಕೆಟ್ ಮಂಡಳಿ

ಟಿ-20 ವಿಶ್ವಕಪನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ದ. ಆಫ್ರಿಕಾಕ್ಕೆ ಸೋಲು, ಸೆಮಿಫೈನಲ್ ಗೆ ಲಗ್ಗೆ ಇಟ್ಟ ಭಾರತ!

ಐಪಿಎಸ್ ಅಧಿಕಾರಿ ವಿರುದ್ಧ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ ಎಂಎಸ್ ಧೋನಿ

ಏಷ್ಯಾ ಸ್ಕ್ವಾಷ್‌ ಚಾಂಪಿಯನ್‌ಷಿಪ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಭಾರತ ತಂಡ

ಬೈಜುಸ್ ನ ಜಾಗತಿಕ ರಾಯಭಾರಿಯಾಗಿ ಫುಟ್ಬಾಲ್ ತಾರೆ ಲಿಯೊನೆಲ್ ಮೆಸ್ಸಿ ನೇಮಕ

ಟಿ20 ವಿಶ್ವಕಪ್‌| ಟಾಸ್‌ ಗೆದ್ದ ಬಾಂಗ್ಲಾದೇಶ: ಭಾರತ ಬ್ಯಾಟಿಂಗ್

ಟಿ20 ವಿಶ್ವಕಪ್ ನಲ್ಲಿ ಜಿಂಬಾಬ್ವೆ ವಿರುದ್ಧ 3 ರನ್ ಅಂತರದ ಜಯ ಸಾಧಿಸಿದ ಬಾಂಗ್ಲಾದೇಶ

ಪುರುಷ, ಮಹಿಳಾ ಕ್ರಿಕೆಟಿಗರಿಗೆ ಸಮಾನ ಪಂದ್ಯ ವೇತನ: ಬಿಸಿಸಿಐ ಘೋಷಣೆ

‘ಖೇಲ್ ರತ್ನ’ ಪ್ರಶಸ್ತಿಗೆ ಟೇಬಲ್ ಟೆನಿಸ್ ತಾರೆ ಶರತ್ ಕಮಲ್ ಹೆಸರು ಶಿಫಾರಸು

Updated : 05.11.2022

ಹೊಸದಿಲ್ಲಿ: ಭಾರತ  ಟೇಬಲ್ ಟೆನಿಸ್ ತಾರೆ ಅಚಂತಾ ಶರತ್ ಕಮಲ್ ಅವರನ್ನು ಪ್ರತಿಷ್ಠಿತ  ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿಗೆ ಆಯ್ಕೆ ಸಮಿತಿ ಶಿಫಾರಸು ಮಾಡಿದೆ. ಲಕ್ಷ್ಯ ಸೇನ್ (ಬ್ಯಾಡ್ಮಿಂಟನ್) ಹಾಗೂ  ಅಂಶು ಮಲಿಕ್ (ಕುಸ್ತಿ) ಅರ್ಜುನ ಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಮೂರು ಚಿನ್ನ ಹಾಗೂ  ಒಂದು ಬೆಳ್ಳಿ ಪದಕಗಳನ್ನು ಗೆದ್ದುಕೊಂಡಿರುವ  40 ರ ಹರೆಯದ ಶರತ್ ಕಮಲ್ 2022 ರಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ.

ಈ ವರ್ಷ ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾದ ಏಕೈಕ ಕ್ರೀಡಾಪಟು ಶರತ್ ಎಂಬುದು ಗಮನಾರ್ಹ ಅಂಶವಾಗಿದೆ. ಶರತ್ ಕಮಲ್ ಕೂಡ ಎರಡು ಬಾರಿ ಏಷ್ಯನ್ ಗೇಮ್ಸ್ ಪದಕ ವಿಜೇತರಾಗಿದ್ದಾರೆ.

ಮಣಿಕಾ ಬಾತ್ರಾ ನಂತರ ಖೇಲ್ ರತ್ನ ಪಡೆಯಲಿರುವ  ಎರಡನೇ ಟೇಬಲ್ ಟೆನಿಸ್ ಆಟಗಾರ ಶರತ್ ಕಮಲ್.

ಅರ್ಜುನ ಪ್ರಶಸ್ತಿಗೆ ಲಕ್ಷ್ಯ ಸೇನ್, ನಿಖತ್ ಝರೀನ್, ಚೆಸ್ ತಾರೆ ಆರ್, ಪ್ರಜ್ಞಾನಂದ, ಅಂಶು ಮಲಿಕ್ ಹಾಗೂ  ಸರಿತಾ ಮೋರ್ ಸೇರಿದಂತೆ ಒಟ್ಟು 25 ಹೆಸರುಗಳನ್ನು ಶಿಫಾರಸು ಮಾಡಲಾಗಿದೆ. ಈ ವರ್ಷ ಅರ್ಜುನ ಪ್ರಶಸ್ತಿಗೆ ಯಾವುದೇ ಕ್ರಿಕೆಟಿಗನನ್ನು ಶಿಫಾರಸು ಮಾಡಿಲ್ಲ ಎಂಬುದು ಉಲ್ಲೇಖಾರ್ಹ.

© Copyright 2022, All Rights Reserved Kannada One News