ಸ್ಪರ್ಧೆ ವೇಳೆ ಮೈಸೂರಿನ ಕಿಕ್ ಬಾಕ್ಸರ್ ಮೃತ್ಯು

ಸ್ಪರ್ಧೆ ವೇಳೆ ಮೈಸೂರಿನ ಕಿಕ್ ಬಾಕ್ಸರ್ ಮೃತ್ಯು

Updated : 14.07.2022

ಮೈಸೂರು: ಬೆಂಗಳೂರಿನಲ್ಲಿ ನಡೆದ ಕಿಕ್ ಬಾಕ್ಸರ್ ಸ್ಪರ್ಧೆ ವೇಳೆ ಕಿಕ್ ಬಾಕ್ಸರ್ ಸ್ಪರ್ಧಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಮೈಸೂರಿನ ಸುಣ್ಣದ ಕೇರಿಯ ಕಿಕ್ ಬಾಕ್ಸರ್ ನಿಖಿಲ್ (24) ಮೃತಪಟ್ಟವರು.  ಬೆಂಗಳೂರಿನಲ್ಲಿ ಕೆ. ಒನ್ ಕಿಕ್ ಬಾಕ್ಸರ್ ಆರ್ಗನೈಸೇಷನ್ ನವರು ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿ ತನ್ನ ಬಾಕ್ಸಿಂಗ್ ಪ್ರದರ್ಶನವನ್ನು ನೀಡುತ್ತಿದ್ದ. ಜು.10ರಂದು ರವಿವಾರ ಸ್ಪರ್ಧೆ ನೀಡುವ ವೇಳೆ ತಲೆಗೆ ಪೆಟ್ಟು ಬಿದ್ದು ಕೆಳಕ್ಕೆ ಬಿದ್ದಿದ್ದಾರೆ. ತಕ್ಷಣ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಬುಧವಾರ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಮೃತ ಬಾಕ್ಸರ್ ಅಂತ್ಯ ಕ್ರಿಯೆ ಮೈಸೂರಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ  ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

© Copyright 2022, All Rights Reserved Kannada One News