ಆಗಸ್ಟ್ ತಿಂಗಳಿನಲ್ಲಿ ಶೇ. 50ರ ರಿಯಾಯಿತಿ ದರದಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಮಾರಾಟ

ಆಗಸ್ಟ್ ತಿಂಗಳಿನಲ್ಲಿ ಶೇ. 50ರ ರಿಯಾಯಿತಿ ದರದಲ್ಲಿ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಪುಸ್ತಕಗಳ ಮಾರಾಟ

Updated : 31.07.2022

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಎಲ್ಲಾ ಪ್ರಕಟಣೆಗಳನ್ನು (ಡಾ.ಬಿ.ಆರ್.ಅಂಬೇಡ್ಕರ್ ಬರಹಗಳು ಮತ್ತು ಭಾಷಣಗಳು ಸಂಪುಟಗಳನ್ನು ಹೊರತುಪಡಿಸಿ) ಆಗಸ್ಟ್ ತಿಂಗಳಿನಲ್ಲಿ ಶೇ.50 ರಿಯಾಯಿತಿಯ ದರದಲ್ಲಿ ಮಾರಾಟ ಮಾಡಲಾಗುತ್ತದೆ.

ಆನ್ ಲೈನ್ ಮೂಲಕವೂ ಶೇ.50 ರಿಯಾಯಿತಿ ದರದಲ್ಲಿ ಪುಸ್ತಕಗಳನ್ನು ಖರೀದಿಸಬಹುದಾಗಿದ್ದು, www.kuvempubhashabharathi.karnataka.gov.in ಓದುಗರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22484516 ಅಥವಾ 22107704 ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

© Copyright 2022, All Rights Reserved Kannada One News