ಕಾರ್ಮಿಕರ ಕನಿಷ್ಠ ವೇತನ ಶೇ.10ರಷ್ಟು ಹೆಚ್ಚಳ

Related Articles

‘ಪೇ ಟಿಎಂ ಅಲ್ಲ ಪೇ ಸಿಎಂ’: ಇದು ಬಿಜೆಪಿ ಭ್ರಷ್ಟಾಚಾರದ ಜಾಹೀರಾತು

ದಲಿತ ಸೊಸೆಯನ್ನು ಮನೆಗೆ ಸೇರಿಸದ ಕುಟುಂಬ: ಮಗುವಿನೊಂದಿಗೆ ಧರಣಿ ಕುಳಿತ ಮಹಿಳೆ

ಮೂಡಿಗೆರೆ ಮಾಯಾವಿ ಪೂರ್ಣಚಂದ್ರ ತೇಜಸ್ವಿ ಅವರ ಕರ್ವಾಲೋ ಕಾದಂಬರಿ ಕುರಿತು ಪಿ. ಲಂಕೇಶರ ಮಾತು

‘ಸಚಿವರು ಕಾಣೆಯಾಗಿದ್ದಾರೆ! ಹುಡುಕಿಕೊಡಿ...

ಗೌರಿಯನ್ನು ಕೊಂದವರು ಜೈಲಿನಲ್ಲಿದ್ದಾರೆ, ಕೊಲ್ಲಿಸಿದವರು ಅಧಿಕಾರದಲ್ಲಿದ್ದಾರೆ: ನಟ ಪ್ರಕಾಶ್ ರಾಜ್

ನಾ ಕಂಡ ಹಾಗೆ 'ಗೌರಿ' ಅಮ್ಮ: ವಿಕಾಸ್ ಆರ್ ಮೌರ್ಯ ಅವರ ಲೇಖನ

ಗೌರಿಯ ಅಕ್ಷರಗಳು ಮಾತು ಚಟುವಟಿಕೆ ಎಲ್ಲವೂ ನಿರ್ಭಯ ಭಾರತ ನಿರ್ಮಾಣದ ಗುರಿ ಹೊಂದಿತ್ತು: ಕೆ. ನೀಲಾ ಅವರ ಲೇಖನ

ನನ್ನಕ್ಕ ಗೌರಿ ಲಂಕೇಶ್, ನಾನು ಲಂಕೇಶ್! -ಅಪ್ಪಗೆರೆ ಲಂಕೇಶ್ ಅವರ ಲೇಖನ

ಗೌರಿ ಲಂಕೇಶ್ ವ್ಯಕ್ತಿತ್ವದ ಭಿನ್ನ ಆಯಾಮಗಳು: ಹುಲಿಕುಂಟೆ ಮೂರ್ತಿ ಅವರ ಲೇಖನ

ಜನಸೇವಕ ಟಿ.ಆರ್.ಶಾಮಣ್ಣ ನೆನಪು: ಹರೀಶ್ ಕಳಸೆ ಅವರ ಲೇಖನ

ಕಾರ್ಮಿಕರ ಕನಿಷ್ಠ ವೇತನ ಶೇ.10ರಷ್ಟು ಹೆಚ್ಚಳ

Updated : 05.08.2022

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್‌ರಾಜ್‌ ಸಂಸ್ಥೆಗಳಲ್ಲಿ ಉದ್ಯೋಗದಲ್ಲಿರುವ ಮತ್ತು ಆ ವ್ಯಾಪ್ತಿಯ ಉದ್ದಿಮೆಗಳಲ್ಲಿ ದುಡಿಯುವ ಕಾರ್ಮಿಕರ ಕನಿಷ್ಠ ವೇತನವನ್ನು ರಾಜ್ಯ ಸರ್ಕಾರ ಪರಿಷ್ಕರಿಸಿದೆ.

ಸಾಮಾನ್ಯವಾಗಿ ಐದು ವರ್ಷಕ್ಕೊಮ್ಮೆ ಕನಿಷ್ಠ ವೇತನ ಪರಿಷ್ಕರಿಸಲಾಗುತ್ತದೆ. ಕನಿಷ್ಠ ವೇತನ ಕಾಯ್ದೆ 1948ರ ಅಡಿ 2016ರಲ್ಲಿ ಕೊನೆಯದಾಗಿ ವೇತನ ಪರಿಷ್ಕರಿಸಲಾಗಿತ್ತು. ಕಳೆದ ಐದು ವರ್ಷಗಳಲ್ಲಿ ಅನೇಕ ಬದಲಾವಣೆಗಳು ಸಂಭವಿಸಿದ್ದು, ಜೀವನನಿರ್ವಹಣೆ ವೆಚ್ಚ ಗಣನೀಯವಾಗಿ ಹೆಚ್ಚಾಗಿದೆ.

ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಲು ಕರಡು ಪ್ರಸ್ತಾವನೆಯನ್ನು 2021ರ ಡಿ. 31ರಂದು ರಾಜ್ಯಪತ್ರದಲ್ಲಿ ಪ್ರಕಟಿಸಿ, ಸಲಹೆ, ಆಕ್ಷೇಪಣೆ ಸಲ್ಲಿಸಲು ಎರಡು ತಿಂಗಳ ಕಾಲಾವಕಾಶ ನೀಡಲಾಗಿತ್ತು. ಕಾರ್ಮಿಕ ಇಲಾಖೆಯ ಆಯುಕ್ತ ಅಕ್ರಂ ಪಾಷಾ ಅಧ್ಯಕ್ಷತೆಯಲ್ಲಿ ಜೂನ್‌ 21ರಂದು ನಡೆದ ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿಯ ಸಭೆಯಲ್ಲಿ‌ ಚರ್ಚಿಸಿ, ವೇತನ ಪರಿಷ್ಕರಣೆ ಸಂಬಂಧ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು.

ಕನಿಷ್ಠ ವೇತನಕ್ಕೆ ತುಟ್ಟಿ ಭತ್ಯೆ (ವಿಡಿಎ), ಭವಿಷ್ಯ ನಿಧಿ ಶೇ 12, ಇಎಸ್‌ಐ (ಕಾರ್ಮಿಕ ರಾಜ್ಯ ವಿಮೆ) ಶೇ 3.5 ಸೇರಿಸಿ ಕಾರ್ಮಿಕರ ಮಾಸಿಕ ವೇತನ‌ ನಿಗದಿಪಡಿಸಲಾಗುತ್ತದೆ.

ತುಟ್ಟಿಭತ್ಯೆಯನ್ನು ವರ್ಷಕ್ಕೊಮ್ಮೆ ಲೆಕ್ಕಾಚಾರ ಮಾಡಲಾಗುತ್ತದೆ. ಆಯಾ ವರ್ಷ ಹೆಚ್ಚಾಗುವ ಅಥವಾ ಕಡಿಮೆಯಾಗುವ ಗ್ರಾಹಕ ಬೆಲೆ ಸೂಚ್ಯಂಕದ ಸರಾಸರಿಯನ್ನು ಗಮನದಲ್ಲಿಟ್ಟುಕೊಂಡು ವಾರ್ಷಿಕ ಆಧಾರದ ಮೇಲೆ ತುಟ್ಟಿಭತ್ಯೆಯನ್ನು ಉದ್ಯೋಗದಾತರು ಪರಿಷ್ಕರಿಸಬೇಕು. ಸದ್ಯದ ಗ್ರಾಹಕ ಬೆಲೆ ಸೂಚ್ಯಂಕದ ಪ್ರಕಾರ,  17,555 ಕನಿಷ್ಠ ವೇತನಕ್ಕೆ  900 ತುಟ್ಟಿಭತ್ಯೆ, ಪಿಎಫ್‌  2,100, ಇಎಸ್‌ಐ  550 ಸೇರಿ  22,505 ಮಾಸಿಕ ವೇತನ ಆಗುತ್ತದೆ.

2016ಕ್ಕೆ ಹೋಲಿಸಿದರೆ ಪರಿಷ್ಕೃತ ಕನಿಷ್ಠ ವೇತನ ಸರಾಸರಿ ಶೇ 10ರಷ್ಟು ಹೆಚ್ಚಳವಾಗಿದೆ. ಪರಿಷ್ಕರಣೆಯ ಪ್ರಮಾಣವು ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಇತರ ಮಹಾನಗರಪಾಲಿಕೆಗಳ ವ್ಯಾಪ್ತಿಯಲ್ಲಿ ಹೆಚ್ಚು, ಇತರ ಸಣ್ಣ ಪಟ್ಟಣಗಳಲ್ಲಿ (ನಗರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ವ್ಯಾಪ್ತಿ) ಕಡಿಮೆ ಇರುತ್ತದೆ.


© Copyright 2022, All Rights Reserved Kannada One News