ಸರ್ಕಾರ ನಡೀತಾ ಇಲ್ಲ, ಮ್ಯಾನೇಜ್‌ ಮಾಡ್ತಾ ಇದ್ದೀವಿ: ಸಚಿವ ಮಾಧುಸ್ವಾಮಿ

Related Articles

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಸ್ಪರ್ಧಿಸುವುದಿಲ್ಲ: ಅಶೋಕ್ ಗೆಹ್ಲೋಟ್

ಎರಡು ರೀತಿಯ ಸಾಹಿತಿಗಳು ಇದ್ದಾರೆ: ಸಿಎಂ ಬೊಮ್ಮಾಯಿ‌

ದಸರಾ ಕ್ರೀಡಾಪಟುಗಳಿಗೆ ವಸತಿ ನೀಡಲು ಯೋಗ್ಯತೆ ಇಲ್ಲವೇ? : ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿ

SDPI ನಿಷೇಧದ ಬಗ್ಗೆ ಇನ್ನೂ ನಿರ್ಧರಿಸಿಲ್ಲ: ಸಿಎಂ ಬೊಮ್ಮಾಯಿ

ಪಿಎಫ್ಐ ಸಿದ್ದರಾಮಯ್ಯರ ಪಾಪದ ಕೂಸು: ಯಡಿಯೂರಪ್ಪ

ಕಾಂಗ್ರೆಸ್ ಅಧ್ಯಕ್ಷ ಹುದ್ದೆಗೆ ಚುನಾವಣೆ: ನಾಮಪತ್ರ ಸ್ವೀಕರಿಸಿದ ದಿಗ್ವಿಜಯ್ ಸಿಂಗ್

‘ರೂಟ್ ಮಾರ್ಚ್’ ಗೆ ಆರೆಸ್ಸೆಸ್ ಮನವಿ : ಅನುಮತಿ ನಿರಾಕರಿಸಿದ ತಮಿಳುನಾಡು ಸರ್ಕಾರ

ರಾಜ್ಯ ಮಟ್ಟದ ದಸರಾ ಯೋಗಾಸನ ಸ್ಪರ್ಧೆಗೆ ಚಾಲನೆ ನೀಡಿದ ಸಚಿವ ಎಸ್.ಟಿ.ಸೋಮಶೇಖರ್

ದೇಶದಲ್ಲಿ ಮೊದಲು ಕಾಂಗ್ರೆಸ್ ಪಕ್ಷವನ್ನು ನಿಷೇಧ ಮಾಡಬೇಕು: ನಳಿನ್ ಕುಮಾರ್ ಕಟೀಲ್

ಶಿವಮೊಗ್ಗ : ಎಸ್ ಡಿಪಿಐ ಕಚೇರಿ, ಮುಖಂಡರ ಮನೆಗಳ ಮೇಲೆ ಪೊಲೀಸ್ ದಾಳಿ

ಸರ್ಕಾರ ನಡೀತಾ ಇಲ್ಲ, ಮ್ಯಾನೇಜ್‌ ಮಾಡ್ತಾ ಇದ್ದೀವಿ: ಸಚಿವ ಮಾಧುಸ್ವಾಮಿ

Updated : 14.08.2022

ಬೆಂಗಳೂರು: ನಾವು ಸರ್ಕಾರ ನಡೆಸುತ್ತಿಲ್ಲ. ಮ್ಯಾನೇಜ್‌ಮೆಂಟ್‌ ಮಾಡುತ್ತಿದ್ದೇವೆ ಅಷ್ಟೇ ಎನ್ನುವ ಮೂಲಕ ಸಚಿವ ಜೆ.ಸಿ ಮಾಧುಸ್ವಾಮಿ ಅವರು ಬಿಜೆಪಿ ಸರ್ಕಾರದ ನಿಷ್ಕ್ರಿಯತೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಕಾಂಗ್ರೆಸ್‌ ಟೀಕಿಸಿದೆ.

ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆಯುತ್ತಿರುವ ಅವ್ಯವಹಾರದ ಕುರಿತು ಸಾಮಾಜಿಕ ಕಾರ್ಯಕರ್ತರೊಬ್ಬರು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಜೆ.ಸಿ ಮಾಧುಸ್ವಾಮಿ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ ಎನ್ನಲಾದ ಸಂಭಾಷಣೆಯನ್ನು ಕಾಂಗ್ರೆಸ್‌ ತನ್ನ ಟ್ವಿಟರ್ ಪುಟದಲ್ಲಿ ಹಂಚಿಕೊಂಡಿದೆ.

ಸಂಭಾಷಣೆ ವೇಳೆ, ಬ್ಯಾಂಕ್‌ಗಳಲ್ಲಿ ರೈತರ ಸಾಲದ ವಿಚಾರವಾಗಿ ನಡೆಯುತ್ತಿರುವ ಅವ್ಯವಹಾರಗಳ ಕುರಿತು ಮಾಹಿತಿ ನೀಡುವ ಸಾಮಾಜಿಕ ಕಾರ್ಯಕರ್ತ, ಕ್ರಮ ಕೈಗೊಳ್ಳುವಂತೆ ಮನವಿ ಮಾಡುತ್ತಾರೆ. ಇದಕ್ಕೆ ಪ್ರತಿಕ್ರಿಯಿಸುವ ಸಚಿವರು, ಇವೆಲ್ಲವೂ ನನಗೆ ಗೊತ್ತು. ಇದನ್ನೆಲ್ಲ ಸಚಿವ ಸೋಮಶೇಖರ್‌ ಅವರ ಗಮನಕ್ಕೆ ತಂದಿದ್ದೇವೆ. ಅವರು ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಏನು ಮಾಡೋದು? ಎಂದು ಅಸಹಾಯಕವಾಗಿ ಕೇಳಿರುವುದು ಆಡಿಯೊದಲ್ಲಿ ದಾಖಲಾಗಿದೆ.

ಮುಂದುವರಿದು, ಬ್ಯಾಂಕಿನವರಿಗೆ ರೈತರಷ್ಟೇ ಅಲ್ಲ. ನಾನೂ ಹಣ ಕಟ್ಟಿದ್ದೇನೆ. ಸರ್ಕಾರ ನಡೆಯುತ್ತಿಲ್ಲ. ಮ್ಯಾನೇಜ್‌ಮೆಂಟ್‌ ಮಾಡುತ್ತಿದ್ದೇವೆ ಅಷ್ಟೆ. ತಳ್ಳಿದರೆ ಸಾಕು ಇನ್ನೆಂಟು ತಿಂಗಳು ಎಂದು ತಳ್ತಾ ಇದೀವಿ ಅಷ್ಟೇ ಎಂದೂ ಹೇಳಿದ್ದಾರೆ.


© Copyright 2022, All Rights Reserved Kannada One News