ದೇವಸ್ಥಾನದ ಜಾಗದ ವಿಚಾರದಲ್ಲಿ ಜಗಳ: ಮದುಗಿರಿಯಲ್ಲಿ ಇಬ್ಬರ ಕೊಲೆ

Related Articles

ಭಾರತದ ಜನಪ್ರಿಯ ಗೇಮಿಂಗ್ ಯೂಟ್ಯೂಬರ್ ಅಭ್ಯುದಯ್ ಮಿಶ್ರಾ ರಸ್ತೆ ಅಪಘಾತದಲ್ಲಿ ಮೃತ್ಯು

ಪಿಎಸ್ಐ ಹಗರಣ: ಪ್ರಮುಖ ಆರೋಪಿ ಹಾಸ್ಟೆಲ್ ವಾರ್ಡನ್ ಬಂಧನ

ತಮ್ಮ ತಂಗಿ ಜೊತೆ ಸ್ನೇಹದಲ್ಲಿದ್ದ ಯುವಕನ ಹತ್ಯೆ: ಆರೋಪಿಗಳ ಬಂಧನ

ಬ್ರಹ್ಮಪುತ್ರ ನದಿಯಲ್ಲಿ ಮುಳುಗಿದ 75 ಮಂದಿ ಪ್ರಯಾಣಿಸುತ್ತಿದ್ದ ದೋಣಿ: ಓರ್ವ ಅಧಿಕಾರಿ ಸೇರಿ ಹಲವರು ನಾಪತ್ತೆ

ಪ್ರವಾದಿ ಮುಹಮ್ಮದ್ ಬಗ್ಗೆ ಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ಮುಖ್ಯಶಿಕ್ಷಕ ಅಮಾನತು

ದೇಶದ ನೂತನ ಅಟಾರ್ನಿ ಜನರಲ್‌ ಆಗಿ ಹಿರಿಯ ವಕೀಲ ಆರ್‌.ವೆಂಕಟರಮಣಿ ನೇಮಕ

ಕೊಡಗು: ಸಾಕಾನೆ ದಾಳಿಗೆ ಕಾರ್ಮಿಕ ಬಲಿ

ಚಾಮರಾಜನಗರ: ‘ಭಾರತ್ ಜೋಡೋ’ ಫ್ಲೆಕ್ಸ್ ಹರಿದ ದುಷ್ಕರ್ಮಿಗಳು

ಕಾನೂನುಬದ್ಧ ಗರ್ಭಪಾತಕ್ಕೆ ಎಲ್ಲ ಮಹಿಳೆಯರು ಅರ್ಹ : ಸುಪ್ರೀಂಕೋರ್ಟ್

ಮಳಲಿ‌ ಮಸೀದಿ ವಿವಾದ: ಪ್ರಕರಣದ ತೀರ್ಪು ಅ.17 ಕ್ಕೆ ಮುಂದೂಡಿಕೆ

ದೇವಸ್ಥಾನದ ಜಾಗದ ವಿಚಾರದಲ್ಲಿ ಜಗಳ: ಮದುಗಿರಿಯಲ್ಲಿ ಇಬ್ಬರ ಕೊಲೆ

Updated : 23.09.2022

ಮದುಗಿರಿ: ದೇವಸ್ಥಾನದ ಜಾಗ ಕಬಳಿಸಲು ಯತ್ನಿಸಿದ ಜೆಡಿಎಸ್ ಮುಖಂಡನೊಬ್ದನನ್ನು ತರಾಟೆಗೆ ತೆಗೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಓರ್ವ ಮಹಿಳೆ ಸೇರಿ ಇಬ್ಬರು ಕೊಲೆಯಾಗಿದ್ದು ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ.

ತುಮಕೂರು ಜಿಲ್ಲೆಯ ಮದುಗಿರಿ ತಾಲ್ಲೂಕಿನ ಮಿಡಿಗೇಶಿ ಗ್ರಾಮದಲ್ಲಿ ಈ ಧಾರುಣ ಘಟನೆ ನಡೆದಿದೆ. ರಾಮಾಂಜನಯ್ಯ (48), ಶಿಲ್ಪಾ (38) ಎಂಬವರು ಮೃತಪಟ್ಟಿದ್ದು, ಮಲ್ಲಿಕಾರ್ಜುನಯ್ಯ ಎಂಬಾತನ ಸ್ಥಿತಿ ಗಂಭೀರವಾಗಿದೆ ಮತ್ತು ಮದುಗಿರಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೊಲೆ ಆರೋಪಿ, ಜೆಡಿಎಸ್ ಮುಖಂಡ ಶ್ರೀಧರ್ ಗುಪ್ತಾ ಮತ್ತು ಆತನ ಸಹಚರನನ್ನ ಪೊಲೀಸರು ಬಂದಿಸಿದ್ದಾರೆ.

ಬಂದಿತ ಕೊಲೆ ಆರೋಪಿ ಗ್ರಾಮದ ಗಣೇಶ ದೇವಸ್ಥಾನದ ಜಾಗ ಕಬಳಿಸಲು ಯತ್ನಿಸಿದ್ದನು ಎನ್ನಲಾಗುತ್ತಿದೆ. ಈತನಿಂದ ಜಾಗವನ್ನ ಉಳಿಸಿಕೊಳ್ಳಲು ಗ್ರಾಮಸ್ಥರು ಕೊರ್ಟ್ ಮೊರೆ ಹೋಗಿದ್ದು, ಗ್ರಾಮಸ್ಥರ ಪರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ಘಟನೆಯಿಂದ ಗ್ರಾಮದಲ್ಲಿ ಬಿಗುವಿನ ವಾತವರಣ ಉಂಟಾಗಿದ್ದು ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರವಾಡ್ ಭೇಟಿ ನೀಡಿ ಗ್ರಾಮದಲ್ಲಿ ಶಾಂತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ. ಮಿಡಿಗೇಶಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

© Copyright 2022, All Rights Reserved Kannada One News