ಮಂಗಳೂರು ಸ್ಪೋಟ; ಗೃಹ ಇಲಾಖೆಯ ವೈಫಲ್ಯ: ಸಿದ್ದರಾಮಯ್ಯ

ಮಂಗಳೂರು ಸ್ಪೋಟ; ಗೃಹ ಇಲಾಖೆಯ ವೈಫಲ್ಯ: ಸಿದ್ದರಾಮಯ್ಯ

Updated : 20.11.2022

ಬೆಂಗಳೂರು:  ಮಂಗಳೂರು ನಗರದ ಗರೋಡಿಯಲ್ಲಿ ಸಂಭವಿಸಿದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಗೃಹ ಇಲಾಖೆಯ ವೈಫಲ್ಯ ಎತ್ತಿ ತೋರಿಸಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸ್ಫೋಟ ಪ್ರಕರಣ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ‘ಮಂಗಳೂರಿನಲ್ಲಿ ಸಂಭವಿಸಿರುವ ಸ್ಫೋಟ ಪ್ರಕರಣ ಮತ್ತೊಮ್ಮೆ ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯವನ್ನು ಎತ್ತಿ ತೋರಿಸಿದೆ. ಈ ಘಟನೆಯ ಬಗ್ಗೆ ಊಹಾಪೋಹಗಳ ಸುದ್ದಿಗಳನ್ನು ನಂಬಿ ಉದ್ರಿಕ್ತರಾಗದೆ ಸಾರ್ವಜನಿಕರು ಸಂಯಮ ಮತ್ತು ಎಚ್ಚರದಿಂದ ಇರಬೇಕೆಂದು ಕೇಳಿಕೊಳ್ಳುತ್ತಿದ್ದೇನೆ’ ಎಂದು ಸಿದ್ದರಾಮಯ್ಯ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

ಕಳವಳಕಾರಿಯಾದ ಈ ಘಟನೆಯ ಬಗ್ಗೆ ಪೊಲೀಸರು ತ್ವರಿತಗತಿಯಲ್ಲಿ ತನಿಖೆ ನಡೆಸಿ ದುಷ್ಕರ್ಮಿಗಳನ್ನು ಬಂಧಿಸಿ ಶಿಕ್ಷೆಗೊಳಪಡಿಸಬೇಕು’ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

© Copyright 2022, All Rights Reserved Kannada One News