ಮತದಾರರ ಮಾಹಿತಿ ಕಳ್ಳತನ; ಚುನಾವಣಾ ಆಯೋಗಕ್ಕೆ ದೂರು ನೀಡ್ತೇವೆ: ಎಂಬಿ ಪಾಟೀಲ್‌

ಮತದಾರರ ಮಾಹಿತಿ ಕಳ್ಳತನ; ಚುನಾವಣಾ ಆಯೋಗಕ್ಕೆ ದೂರು ನೀಡ್ತೇವೆ: ಎಂಬಿ ಪಾಟೀಲ್‌

Updated : 22.11.2022

ಬೆಂಗಳೂರು: ಮತದಾರರ ದತ್ತಾಂಶ ಕಳ್ಳತನ ಪ್ರಕರಣ ಸಂಬಂಧ ನಾಳೆ ಅಥವಾ ನಾಡಿದ್ದು ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇವೆ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಅಕ್ರಮ ಕುರಿತು ಆಯೋಗಕ್ಕೆ ದೂರು ಕೊಡುತ್ತೇವೆ. ಜನರ ಖಾಸಗಿ ಮಾಹಿತಿಯನ್ನು ಇವರು ಕಲೆ ಹಾಕಿದ್ದಾರೆ. ಇದು ಅತ್ಯಂತ ಗಂಭೀರ ವಿಚಾರ. ಕರ್ನಾಟಕ ಮಾತ್ರವಲ್ಲದೇ, ಬೇರೆ ರಾಜ್ಯದಲ್ಲೂ ಚುನಾವಣೆ ಇದೆ. ಅಲ್ಲೂ ಅಕ್ರಮ ನಡೆದಿರುವ ಶಂಕೆ ಇದೆ. ಹಾಗಾಗಿ ಚುನಾವಣಾ ಆಯೋಗದ ಮುಂದೆ ಹೋಗುತ್ತೇವೆ. ಇಲ್ಲಿ ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗಲೇಬೇಕೆಂದು ಒತ್ತಾಯಿಸಿದ್ದಾರೆ. 

© Copyright 2022, All Rights Reserved Kannada One News