ಕೇರಳದಲ್ಲಿ ಎರಡನೇ ಮಂಕಿಪಾಕ್ಸ್‌ ಪ್ರಕರಣ ಪತ್ತೆ!

ಕೇರಳದಲ್ಲಿ ಎರಡನೇ ಮಂಕಿಪಾಕ್ಸ್‌ ಪ್ರಕರಣ ಪತ್ತೆ!

Updated : 18.07.2022

ತಿರುವನಂತಪುರಂ: ಕೇರಳದಲ್ಲಿ ಸೋಮವಾರ ಎರಡನೇ ಮಂಕಿಪಾಕ್ಸ್‌ ಪ್ರಕರಣ ದೃಢಪಟ್ಟಿದೆ. ಹೊಸ ಪ್ರಕರಣವು 31 ವರ್ಷದ ವ್ಯಕ್ತಿ, ಜುಲೈ 13 ರಂದು ದುಬೈನಿಂದ ಕಣ್ಣೂರಿಗೆ ತಲುಪಿದ್ದ ವ್ಯಕ್ತಿಯಲ್ಲಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.

ಇದೀಗ ಕಣ್ಣೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಾಗಿರುವ ಸೋಂಕಿತ ವ್ಯಕ್ತಿಯ ಸ್ಥಿತಿ ಸ್ಥಿರವಾಗಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಹೇಳಿದ್ದಾರೆ. ಅವರ ಪ್ರಾಥಮಿಕ ಸಂಪರ್ಕದಲ್ಲಿರುವವರೆಲ್ಲರೂ ನಿಗಾದಲ್ಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

© Copyright 2022, All Rights Reserved Kannada One News