‌ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಿಂದ ಹೊರಗುಳಿದ ದೀಪಕ್ ಪೂನಿಯಾ

Related Articles

ಟಿ-20 ಕ್ರಿಕೆಟ್: ಪಾಕಿಸ್ತಾನ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ

ಇಂಡೋನೇಷ್ಯಾ ಫುಟ್‌ಬಾಲ್ ಪಂದ್ಯದ ವೇಳೆ ಹಿಂಸಾಚಾರ: ಕನಿಷ್ಠ 127 ಮಂದಿ ಸಾವು

ಇಂಗ್ಲೆಂಡ್ ವಿರುದ್ಧ ಕ್ಲೀನ್‍ಸ್ವೀಪ್ ಸಾಧಿಸಿದ ಭಾರತದ ಮಹಿಳಾ ಕ್ರಿಕೆಟ್ ತಂಡ

ಟೆನಿಸ್ ಗೆ ವಿದಾಯ ಹೇಳಿದ ರೋಜರ್ ಫೆಡರರ್: ಸ್ನೇಹಿತನ ನಿವೃತ್ತಿಗೆ ಗಳಗಳನೆ ಅತ್ತ ಪ್ರತಿಸ್ಪರ್ಧಿ ರಫೆಲ್ ನಡಾಲ್: ಇದು ಕ್ರೀಡೆಯ ಅತ್ಯುತ್ತಮ ಕ್ಷಣ ಎಂದ ಕೊಹ್ಲಿ

ಟೆನಿಸ್ ಗೆ ಸ್ವಿಸ್ ಸ್ಟಾರ್ ರೋಜರ್ ಫೆಡರರ್ ವಿದಾಯ

ಲಾರೆನ್ಸ್ ಮೈದಾನದಲ್ಲಿ ಅಬ್ಬರಿಸಿದ ಹರ್ಮನ್​ಪ್ರೀತ್ ಕೌರ್: ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ 88 ರನ್‌ ಗೆಲುವು

ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯ ಟಿಕೆಟ್ ಖರೀದಿಗೆ ನೂಕುನುಗ್ಗಲು: ಕಾಲ್ತುಳಿತದಿಂದ ಹಲವರಿಗೆ ಗಾಯ

ಉದ್ದೀಪನ ಮದ್ದು ಸೇವನೆ ಪ್ರಕರಣ: ಹಿರಿಯ ಅಥ್ಲೀಟ್ ಪೂವಮ್ಮಗೆ 2 ವರ್ಷ ನಿಷೇಧ

ಉತ್ತರ ಪ್ರದೇಶ| ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: ವೀಡಿಯೊ ವೈರಲ್

ಟಿ20 ವಿಶ್ವಕಪ್: ನ್ಯೂ ಜೆರ್ಸಿಯಲ್ಲಿ ಕಣಕ್ಕಿಳಿಯಲಿರುವ ಟೀಂ ಇಂಡಿಯಾ

‌ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಿಂದ ಹೊರಗುಳಿದ ದೀಪಕ್ ಪೂನಿಯಾ

Updated : 10.09.2022

ಸರ್ಬಿಯಾದ ಬೆಲ್‌ಗ್ರೇಡ್‌ನಲ್ಲಿ ಶನಿವಾರದಿಂದ ಆರಂಭವಾಗಲಿರುವ ಸೀನಿಯರ್‌ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ ಕೂಟದಿಂದ ದೀಪಕ್ ಪೂನಿಯಾ ಹೊರಗುಳಿದಿದ್ದಾರೆ. ಅಮೆರಿಕದ ಮಿಚಿಗನ್‌ನಲ್ಲಿ ತರಬೇತಿ ಪಡೆಯುತ್ತಿದ್ದ ವೇಳೆ, ಪೂನಿಯಾ ಅವರು ಕೈ ಮುರಿತಕ್ಕೆ ಒಳಗಾಗಿದ್ದಾರೆ ಎಂದು ರೆಸ್ಲಿಂಗ್‌ ಫೆಡರೇಶನ್ ಆಫ್ ಇಂಡಿಯಾ, (ಡಬ್ಲ್ಯೂಎಫ್‌ಐ) ಸಹಾಯಕ ಕಾರ್ಯದರ್ಶಿ ವಿನೋದ್ ತೋಮರ್ ತಿಳಿಸಿದ್ದಾರೆ.

ಆಗಸ್ಟ್‌ ಆರಂಭದಲ್ಲಿ ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪುನಿಯಾ ಚಿನ್ನದ ಪದಕ ಗೆದ್ದು ಸಂಭ್ರಮಿಸಿದ್ದರು. ಹರಿಯಾಣದ ಛಾರಾ ಗ್ರಾಮದ 23ರ ಹರೆಯದ ಪೂನಿಯಾ, 2019ರ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ 86 ಕೆಜಿ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. ಬೆಲ್‌ಗ್ರೇಡ್‌ ವಿಶ್ವ ಚಾಂಪಿಯನ್‌ಶಿಪ್‌ನಲ್ಲೂ ದೀಪಕ್ ಪೂನಿಯಾ, ಪದಕ ಗೆಲ್ಲುವ ನೆಚ್ಚಿನ ಸ್ಪರ್ಧಿಯಾಗಿದ್ದರು. ಪೂನಿಯಾ ಅವರ ಬದಲಿ ಕುಸ್ತಿ ಪಟುವಿಗಾಗಿ ನಡೆಸಲಾದ ಟ್ರಯಲ್ಸ್‌ನಲ್ಲಿ ಸಂಜೀತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಡಬ್ಲ್ಯೂಎಫ್‌ಐ ತಿಳಿಸಿದೆ.

ಸೆಪ್ಟಂಬರ್‌ 10ರಿಂದ ಆರಂಭವಾಗುವ ಸೀನಿಯರ್‌ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌, ಸೆಪ್ಟಂಬರ್‌ 18ರವರೆಗೆ ನಡೆಯಲಿದೆ. ಲಕ್ನೋ ಮತ್ತು ಹರಿಯಾಣದ ಸೋನಿಪಥ್‌ನ ಸಾಯ್‌ ಕೇಂದ್ರಗಳಲ್ಲಿ ಆಯ್ಕೆ ಟ್ರಯಲ್ಸ್‌ ನಡೆಸಿದ ಬಳಿಕ, ಕೂಟದಲ್ಲಿ ಭಾಗವಹಿಸುವ ಭಾರತೀಯ ತಂಡವನ್ನು ಆಗಸ್ಟ್‌ ಅಂತ್ಯದಲ್ಲಿ ಪ್ರಕಟಿಸಲಾಗಿತ್ತು.

ಬರ್ಮಿಂಗ್‌ಹ್ಯಾಮ್‌ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ʻಹ್ಯಾಟ್ರಿಕ್ʼ ಚಿನ್ನದ ಪದಕಗಳನ್ನು ಪೂರ್ಣಗೊಳಿಸಿದ್ದ ವಿನೇಶ್ ಪೊಗಾಟ್ ಮಹಿಳೆಯರ ತಂಡದ ಸಾರಥ್ಯ ವಹಿಸಲಿದ್ದಾರೆ. ಮತ್ತೊಂದೆಡೆ ಟೋಕಿಯೊ ಒಲಿಂಪಿಕ್ಸ್‌ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಪುರುಷರ ತಂಡವನ್ನು ಮುನ್ನಡೆಸಲಿದ್ದಾರೆ.

ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆದ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ವಿಜೇತರಾದ ಬಜರಂಗ್ ಪೂನಿಯಾ (65 ಕೆಜಿ),  ರವಿ ದಹಿಯಾ (57 ಕೆಜಿ) ಹಾಗೂ ದೀಪಕ್ ಪೂನಿಯಾಗೆ (86 ಕೆಜಿ) ಅರ್ಹತಾ ಸುತ್ತಿನ ಪಂದ್ಯಗಳಿಂದ ವಿನಾಯತಿ ನೀಡಲಾಗಿತ್ತು.


© Copyright 2022, All Rights Reserved Kannada One News