ದೆಹಲಿ: ಮತ್ತಷ್ಟು ಕುಸಿದ ಗಾಳಿಯ ಗುಣಮಟ್ಟ!

ದೆಹಲಿ: ಮತ್ತಷ್ಟು ಕುಸಿದ ಗಾಳಿಯ ಗುಣಮಟ್ಟ!

Updated : 05.11.2022

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಗಾಳಿಯ ಗುಣಮಟ್ಟ ಶನಿವಾರ ಮತ್ತಷ್ಟು ಬಿಗಡಾಯಿಸಿದೆ’ ಎಂದು ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. 

ಗುಣಮಟ್ಟ ದಿನೇ ದಿನೇ ಹದಗೆಡುತ್ತಿರುವುದರಿಂದ ರಾಜ್ಯ ಸರ್ಕಾರಕ್ಕೆ ಆತಂಕ ಎದುರಾಗಿದೆ. ಈಗಾಗಲೇ ಶಾಲೆಗಳಿಗೆ, ಹಲವು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಅರ್ಧದಷ್ಟು ಸಿಬ್ಬಂದಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚಿಸಿಲಾಗಿದೆ.

ಮಕ್ಕಳ ಆರೋಗ್ಯದ ದೃಷ್ಟಿಯಿಂದ ಗಾಳಿಯ ಗುಣಮಟ್ಟ ಸುಧಾರಿಸುವವರೆಗೂ ಶಾಲೆಗಳಿಗೆ ರಜೆ ನೀಡಬೇಕೆಂದು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (ಎನ್‌ಸಿಪಿಸಿಆರ್‌) ದೆಹಲಿ ಸರ್ಕಾರಕ್ಕೆ ಮನವಿ ಮಾಡಿತ್ತು. ಪರೀಕ್ಷೆಗಳು ಸಮೀಪಿಸುತ್ತಿರುವ ಹೊತ್ತಿನಲ್ಲಿ ಶಾಲೆಗಳಿಗೆ ಬೀಗ ಹಾಕಿದರೆ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗುತ್ತದೆ ಎಂದು ಕೆಲ ಆಡಳಿತ ಮಂಡಳಿಗಳು ಹೇಳಿವೆ.

ಮಾಲಿನ್ಯ ನಿಯಂತ್ರಣಕ್ಕೆ ಹಲವು ಕ್ರಮಗಳನ್ನು ಕೈಗೊಂಡಿರುವ ಕಮಿಷನ್‌ ಫಾರ್‌ ಏರ್‌ ಕ್ವಾಲಿಟಿ ಮ್ಯಾನೇಜ್‌ಮೆಂಟ್‌ (ಸಿಎಕ್ಯೂಎಂ) ನಗರದೊಳಗೆ ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ ಹೇರಿದೆ. ಡೀಸೆಲ್‌ ಚಾಲಿತ ಲಘು ವಾಹನಗಳ ಸಂಚಾರವನ್ನೂ ನಿಷೇಧಿಸಿದೆ.  

ದೆಹಲಿಯಲ್ಲಿ ಶನಿವಾರ ಮುಂಜಾನೆ ಗಾಳಿ ಗುಣಮಟ್ಟ ಸೂಚ್ಯಂಕ ’ಕಳಪೆ’ ಮಟ್ಟಕ್ಕೆ ತಲುಪಿದ್ದು, ಸೂಚ್ಯಂಕ(ಎಕ್ಯೂಐ) ಬೆಳಿಗ್ಗೆ 6.05ಕ್ಕೆ 481ರಷ್ಟಿತ್ತು. ದೆಹಲಿಯ ಆಸುಪಾಸಿನ ನಗರಗಳಾದ ನೋಯ್ಡಾ, ಗುರುಗ್ರಾಮ ಮತ್ತು ಗ್ರೇಟರ್‌ ನೋಯ್ಡಾ ನಗರಗಳಲ್ಲೂ ಗಾಳಿಯ ಗುಣಮಟ್ಟ ದಿನೇ ದಿನೇ ಹದಗೆಡುತ್ತಿದೆ.

ಬಹುದೊಡ್ಡ ಪ್ರಮಾಣದಲ್ಲಿ ಬೆಳೆ ತ್ಯಾಜ್ಯ ಸುಡುವುದರಿಂದ ಮಾಲಿನ್ಯ ಹೆಚ್ಚಾಗಿದೆ ಎಮದು  ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

© Copyright 2022, All Rights Reserved Kannada One News