ಭಾರತ ವಿರುದ್ಧ ಗೆದ್ದರೆ ಜಿಂಬಾಬ್ವೆಯ ಯುವಕನೊಂದಿಗೆ ಮದುವೆ: ಪಾಕ್ ನಟಿ ಸೆಹರ್ ಶಿನ್ವಾರಿ

Related Articles

ಸಿನಿಮಾ ಕ್ಷೇತ್ರದಿಂದ ಕೊಂಚ ಬಿಡುವು ಪಡೆದು, ಕುಟುಂಬದ ಜೊತೆ ಕಾಲ ಕಳೆಯಲು ನಿರ್ಧರಿಸಿದ್ದೇನೆ: ಅಮೀರ್ ಖಾನ್

‘ಸದ್ದು ವಿಚಾರಣೆ ನಡೆಯುತ್ತಿದೆ’ ಸಿನಿಮಾ ನ.25ಕ್ಕೆ ಬಿಡುಗಡೆ

ತೆಲುಗು ನಟ ಮಹೇಶ್ ಬಾಬು ತಂದೆ ಸೂಪರ್ ಸ್ಟಾರ್ ಕೃಷ್ಣ ನಿಧನ

ವೀರ ದಾಸ್ ಅವರ ಬೆಂಗಳೂರು ಶೋ ರದ್ದಾದ ಬಳಿಕ ಕೋಲ್ಕತ್ತಾಗೆ ಆಹ್ವಾನಿಸಿದ ಟಿಎಂಸಿ

ʼದಿ ಕೇರಳ ಸ್ಟೋರಿʼ ಸಿನಿಮಾ: ನಿರ್ಮಾಪಕರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ

ಹಿರಿಯ ನಟ ಟಿ.ಎಸ್. ಲೋಹಿತಾಶ್ವ ನಿಧನ

ನಾಳೆ ́ಬೈ2 ಕಾಫಿ́ ನಾಟಕ ಪ್ರದರ್ಶನ

ಶಾಲಾ ಮಕ್ಕಳಿಗೆ 'ಗಂಧದ ಗುಡಿ' ಉಚಿತ ಪ್ರದರ್ಶನ ನೀಡಲು ಮನವಿ

‘ಉತ್ತರಕಾಂಡ’ ಸಿನೆಮಾದಲ್ಲಿ ಧನಂಜಯ್‌–ರಮ್ಯಾ ಜೋಡಿ

ಮುಂದಿನ ಚುನಾವಣೆಯಲ್ಲಿ ನಿಂತು ಗೆಲ್ಲುವ ಸಾಮರ್ಥ್ಯ ನನಗಿದೆ. ಆದರೆ, ನನಗೆ ಆ ಆಸೆ ಇರಲಿಲ್ಲ: ಝೈದ್ ಖಾನ್

ಭಾರತ ವಿರುದ್ಧ ಗೆದ್ದರೆ ಜಿಂಬಾಬ್ವೆಯ ಯುವಕನೊಂದಿಗೆ ಮದುವೆ: ಪಾಕ್ ನಟಿ ಸೆಹರ್ ಶಿನ್ವಾರಿ

Updated : 04.11.2022

ನವದೆಹಲಿ: ಭಾರತ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಜಿಂಬಾಬ್ವೆ ಗೆದ್ದರೆ ಪಾಕಿಸ್ತಾನದ ಸೆಮಿಫೈನಲ್ ಆಸೆ ಮತ್ತೆ ಚಿಗುರಲಿದೆ. 

ಈ ನಿಟ್ಟಿನಲ್ಲಿ ಟ್ವೀಟ್ ಮಾಡಿರುವ ಪಾಕಿಸ್ತಾನ ಮೂಲದ ನಟಿ ಸೆಹರ್ ಶಿನ್ವಾರಿ, ಭಾರತ ವಿರುದ್ಧ ಜಿಂಬಾಬ್ವೆ ಗೆದ್ದರೆ ಆ ದೇಶದ ಯುವಕನನ್ನು ಮದುವೆಯಾಗುವುದಾಗಿ ಹೇಳಿದ್ದಾರೆ. 

ಟಿ20 ವಿಶ್ವಕಪ್‌ನಲ್ಲಿ ಭಾರತ ಹಾಗೂ ಜಿಂಬಾಬ್ವೆ ನಡುವಣ ಪಂದ್ಯ ಮೆಲ್ಬರ್ನ್‌ನಲ್ಲಿ ನವೆಂಬರ್ 6, ಭಾನುವಾರದಂದು ನಡೆಯಲಿದೆ. 

ಕೆಲವು ದಿನಗಳ ಹಿಂದೆಯಷ್ಟೇ ಪಾಕಿಸ್ತಾನ ವಿರುದ್ಧ ಭಾರತ ಗೆದ್ದರೆ ತಮ್ಮ ಟ್ವಿಟರ್ ಖಾತೆಯನ್ನು ಶಾಶ್ವತವಾಗಿ ಡಿಲೀಟ್ ಮಾಡುವುದಾಗಿ ಟ್ವೀಟ್ ಮಾಡಿದ್ದರು. ಬಳಿಕ ಪಾಕಿಸ್ತಾನ ವಿರುದ್ಧ ಭಾರತ ರೋಚಕ ಗೆಲುವು ದಾಖಲಿಸಿತ್ತು. ಆದರೆ ಸೆಹರ್ ತಮ್ಮ ಮಾತಿನಂತೆ ನಡೆದುಕೊಂಡಿರಲಿಲ್ಲ. ಈಗ ಮದುವೆ ವಿಚಾರದಲ್ಲೂ ಹೀಗಾಗಲಿದೆ ಎಂದು ಕ್ರಿಕೆಟ್ ಅಭಿಮಾನಿಗಳು ಟ್ರೋಲ್ ಮಾಡಿದ್ದಾರೆ.  

© Copyright 2022, All Rights Reserved Kannada One News