ಪೇಸಿಎಂ ಪೋಸ್ಟರ್ ಪ್ರಕರಣ: ಹಲವು ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

Related Articles

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ

ಜಮ್ಮು-ಕಾಶ್ಮೀರ ಕಾರಾಗೃಹ ಡಿಜಿ ಹತ್ಯೆ ಪ್ರಕರಣದಲ್ಲಿ ಮಹತ್ವದ ತಿರುವು: ಮನೆ ಸಹಾಯಕನೇ ಮುಖ್ಯ ಆರೋಪಿ, ಹತ್ಯೆ ಹೊಣೆ ಹೊತ್ತುಕೊಂಡ ಪಿಎಎಫ್ಎಫ್ ಸಂಘಟನೆ

ಅಮೆರಿಕಾದಲ್ಲಿ 8 ತಿಂಗಳ ಮಗುವಿನ ಸಹಿತ ಭಾರತ ಮೂಲದ ಕುಟುಂಬ ಅಪಹರಣ

ವಿಜಯಪುರ: ಕೆಎಸ್ಸಾರ್ಟಿಸಿ ನೌಕರ ಆತ್ಮಹತ್ಯೆ

ಇಸ್ಲಾಮ್ ಧರ್ಮಕ್ಕೆ ಮತಾಂತರಗೊಂಡ ಮಹಿಳೆಯ ಹತ್ಯೆ

ಬಿಬಿಎಂಪಿ ಮುಖ್ಯ ಆಯುಕ್ತರ ಚಿತ್ರ ಬಳಸಿ ವಂಚನೆ: ಎಫ್‍ಐಆರ್ ದಾಖಲು

ದಕ್ಷಿಣ ಕನ್ನಡ: ಅ.5ಕ್ಕೆ ಉಚಿತ 'ಅಭಾ ಕಾರ್ಡ್‌' ಉಚಿತ ನೋಂದಣಿ

ಉತ್ತರಾಖಂಡ್‌: ಹಿಮಕುಸಿತದಲ್ಲಿ ಸಿಲುಕಿದ 28 ಪರ್ವತಾರೋಹಿಗಳು

ಎಸ್ಸಿ ಯುವಕನ ಜೊತೆ ಒಕ್ಕಲಿಗ ಯುವತಿ ನಾಪತ್ತೆ: ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಬೆಳ್ತಂಗಡಿಯಲ್ಲಿ RSSನಿಂದ ಶಸ್ತ್ರಾಸ್ತ ಪೂಜೆ: ಸಿಪಿಐ(ಎಂ) ಖಂಡನೆ

ಪೇಸಿಎಂ ಪೋಸ್ಟರ್ ಪ್ರಕರಣ: ಹಲವು ಕಾಂಗ್ರೆಸ್ ಕಾರ್ಯಕರ್ತರು ವಶಕ್ಕೆ

Updated : 22.09.2022

ಬೆಂಗಳೂರು: ರಾಜ್ಯ ಬಿಜೆಪಿ ಸರಕಾರ ಪ್ರತಿಯೊಂದು ಕೆಲಸಕ್ಕೆ ಶೇ.40 ಕಮಿಷನ್ ಪಡೆಯುತ್ತಿದೆ ಎಂದು ಆರೋಪಿಸಿ ಬೆಂಗಳೂರಿನ ಎಲ್ಲೆಡೆ PAYCM ಪೋಸ್ಟರ್ ಅಂಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಹಲವು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗುರುವಾರ ಮುಂಜಾನೆ ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮಾಜಿ ಅಧ್ಯಕ್ಷ ಬಿ.ಆರ್.ನಾಯ್ಡು ಅವರನ್ನು PAYCM ಪೋಸ್ಟರ್ ಹಚ್ಚಿದ ಬಗ್ಗೆ ವಿಚಾರಣೆ ಮಾಡಲು ವಶಕ್ಕೆ ಪಡೆದು ಹೈಗ್ರೌಂಡ್ಸ್ ಪೋಲಿಸ್ ಠಾಣೆಗೆ  ಕರೆದೊಯ್ಯಲಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಬಿ.ಆರ್.ನಾಯ್ಡು, ಈ ಪ್ರಕರಣದಲ್ಲಿ ನಾನು ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ. ಆದರೆ, ನನ್ನನ್ನು ಉದ್ದೇಶಪೂರ್ವಕವಾಗಿ ವಶಕ್ಕೆ ಪಡೆಯಲಾಗಿದೆ ಎಂದು ಆರೋಪಿಸಿದರು.

ಅದೇರೀತಿ, ಕೆಪಿಸಿಸಿ ಸಾಮಾಜಿಕ ಜಾಲತಾಣದ ಗಗನ್ ಯಾದವ್ ಅವರನ್ನು ಕೆಆರ್ ಪುರದ ಅವರ ನಿವಾಸ ದೇವಸಂದ್ರದಿಂದ ಸದಾಶಿವ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನೂ, PAYCM ಪೋಸ್ಟರ್ ಪ್ರಕರಣ ಸಿಸಿಬಿಗೆ ವರ್ಗಾವಣೆ‌ಯಾಗಿದೆ ಎನ್ನಲಾಗಿದೆ. ನಗರ ಪೊಲೀಸ್ ಆಯುಕ್ತರಿಂದ ಆದೇಶವಾಗಿದ್ದು, ನಗರದ ವಿವಿಧ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಪೋಸ್ಟರ್ ಅಂಟಿಸಿದ್ದು ನಾಲ್ಕು ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ.

© Copyright 2022, All Rights Reserved Kannada One News