Flash News:
ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ: ನಿಧನರಾದವರನ್ನೇ ಸದಸ್ಯರನ್ನಾಗಿ ನೇಮಿಸಿದ ಸರ್ಕಾರ!

ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ: ನಿಧನರಾದವರನ್ನೇ ಸದಸ್ಯರನ್ನಾಗಿ ನೇಮಿಸಿದ ಸರ್ಕಾರ!

Updated : 25.08.2022

ಚಿಕ್ಕಮಗಳೂರಿನ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರ ನೇಮಕಾತಿಯಲ್ಲಿ 'ದಿವಂಗತ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ' ಹೆಸರು ಸೇರ್ಪಡೆ ಮಾಡಲಾಗಿದೆ. ಈ ಮೂಲಕ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಟ್ರಸ್ಟ್ ಮತ್ತು ಪ್ರತಿಷ್ಠಾನಗಳಿಗೆ ನೂತನ ಅಧ್ಯಕ್ಷ ಹಾಗೂ ಸದಸ್ಯರ ನೇಮಕ ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧೀನದಲ್ಲಿ ಕಾರ್ಯ ನಿರ್ವಹಿಸುವ 21 ಟ್ರಸ್ಟ್ ಹಾಗೂ ಪ್ರತಿಷ್ಠಾನಗಳಿಗೆ ಸರ್ಕಾರ ಬುಧವಾರ ನೂತನ  ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ  ಆದೇಶ ಹೊರಡಿಸಿತ್ತು.

ಈ ಪಟ್ಟಿಯಲ್ಲಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿಯವರ ಹೆಸರನ್ನು ಮಹಿಳಾ ಸದಸ್ಯೆಯಾಗಿ ನೇಮಕ ಮಾಡಲಾಗಿದೆ. ಆದರೆ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಅವರು 2021 ಡಿಸೆಂಬರ್ 14ರಂದು ನಿಧನರಾಗಿದ್ದಾರೆ. ಇಹಲೋಕ ತ್ಯಜಿಸಿರುವ ರಾಜೇಶ್ವರಿ ಅವರ ಹೆಸರು ಪಟ್ಟಿಯಲ್ಲಿ ಸೇರ್ಪಡೆ ಮಾಡಿರುವುದಕ್ಕೆ ಜಾಲತಾಣದಲ್ಲಿ ಸರ್ಕಾರದ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿವೆ. 

ಚಿಕ್ಕಮಗಳೂರಿನ ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನಕ್ಕೆ ನೂತನ ಅಧ್ಯಕ್ಷರನ್ನಾಗಿ ನರೇಂದ್ರ ರೈ ದೇರ್ಲರನ್ನು ನೇಮಕ ಮಾಡಲಾಗಿದೆ. ಉಳಿದಂತೆ ಸದಸ್ಯರನ್ನಾಗಿ ಪ್ರಭುಲಿಂಗ ಶಾಸ್ತ್ರಿ, ದೀಪಕ್ ದೊಡ್ಡಯ್ಯ, ಶಿವಾನಂದ ಕಳವೆ, ವಿನೋದ್ ಕುಮಾರ್ ನಾಯಕ್, ಲಕ್ಷ್ಮೀ ನಾರಾಯಣ ಕಜಗದ್ದೆ, ಮಾರ್ಷಲ್ ಶರಾಮ್, ಸದಸ್ಯ ಕಾರ್ಯದರ್ಶಿಯಾಗಿ ಚಿಕ್ಕಮಗಳೂರು ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಹೆಸರನ್ನು ಸೇರ್ಪಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ಅವರನ್ನು ಮಹಿಳಾ ಸದಸ್ಯೆಯಾಗಿ ಉಲ್ಲೇಖಿಸಲಾಗಿದೆ.

© Copyright 2022, All Rights Reserved Kannada One News